Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಇಂಥ ಘಟನೆ
Team Udayavani, Oct 23, 2024, 2:35 AM IST
ಮಂಗಳೂರು: ಮಂಗಳೂರು – ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೇ ಓವರ್ ಬ್ರಿಡ್ಜ್ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ಸಂಗತಿಯಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿನ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಸದ ಕ್ಯಾ| ಬ್ರಿಜೇಶ್ ಚೌಟ ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ರೈಲ್ವೇ ಹಳಿ ಮೇಲೆ ಕಲ್ಲು ಇಟ್ಟು ವಿಕೃತಿ ಮೆರೆದಿರುವ ಈ ಕೃತ್ಯದ ಬಗ್ಗೆ ಈಗಾಗಲೇ ಸಂಬಂಧಪಟ್ಟ ಪೊಲೀಸರು ಹಾಗೂ ರೈಲ್ವೇ ಇಲಾಖೆ ರಕ್ಷಣ ಪಡೆ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಇಂಥ ಘಟನೆ ನಡೆದಿದೆ.
ರೈಲ್ವೇ ಇಲಾಖೆಗೆ ಸೇರಿದ ನಮ್ಮ ರಾಷ್ಟ್ರೀಯ ಸಂಪತ್ತಿನ ಮೇಲೆ ಇಂಥ ದಾಳಿ ಮಾಡಿ ಅದನ್ನು ಹಾನಿಗೊಳಿಸು ವುದಕ್ಕೆ ಪ್ರಯತ್ನಿಸಿರುವುದು ದೇಶದ್ರೋಹದ ಕೆಲಸವಾಗಿದೆ ಎಂದರು. ಸಮಾಜದಲ್ಲಿ ಇಂಥ ಮಾನಸಿಕತೆ ಹೊಂದಿರುವ ವ್ಯಕ್ತಿಗಳು ಯಾರಿ ದ್ದಾರೋ ಅಂಥ ದೇಶದ್ರೋಹಿಗಳನ್ನು ಗುರುತಿಸುವ ಕೆಲಸ ಮಾಡುವ ಹೊಣೆ ಜನರಿಗೂ ಇದೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.