Uttarakannada DC: ದಾಂಡೇಲಿಗೆ ಆಗಮಿಸಿದ ಜಿಲ್ಲಾಧಿಕಾರಿ… ಆಸ್ಪತ್ರೆ, ಶಾಲೆಗಳಿಗೆ ಭೇಟಿ
Team Udayavani, Oct 23, 2024, 6:58 PM IST
ದಾಂಡೇಲಿ: ಉತ್ತರ ಕನ್ನಡ ಜಿಲ್ಲಾಧಿಕಾರಿಯಾಗಿ ನಿಯೋಜನೆಗೊಂಡ ಬಳಿಕ ಇದೇ ಮೊದಲ ಬಾರಿಗೆ ನಗರಕ್ಕೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಅವರು ಬುಧವಾರ ಭೇಟಿ ನೀಡಿದರು.
ನಗರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಅವರು ಮೊದಲಿಗೆ ಅಂಬೆವಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಟ್ನಾಳದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲೆಯ ಕಲಿಕಾ ಗುಣಮಟ್ಟ, ಬಿಸಿಯೂಟ ಹಾಗೂ ಶಾಲೆಯ ಮೂಲ ಸೌಕರ್ಯಗಳ ಕುರಿತಂತೆ ಪರಿಶೀಲನೆಯನ್ನು ನಡೆಸಿ, ಕೆಲ ಹೊತ್ತು ಮಕ್ಕಳ ಜೊತೆ ಚರ್ಚೆಯನ್ನು ನಡೆಸಿದರು. ಮಕ್ಕಳೊಂದಿಗೆ ಮಕ್ಕಳಂತಾದ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಅವರು ಕೆಲವು ಪ್ರಶ್ನೆಗಳನ್ನು ಕೇಳಿ ಮಕ್ಕಳ ಬುದ್ಧಿವಂತಿಕೆ ಮತ್ತು ನೆನಪಿನ ಶಕ್ತಿಯನ್ನು ಪರೀಕ್ಷೆ ಮಾಡಿದರು. ಶಾಲೆಯ ವಿದ್ಯಾರ್ಥಿಗಳು ಅತ್ಯಂತ ಗೌರವದಿಂದ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿ ಭೇಷ್ ಎನಿಸಿಕೊಂಡರು.
ಅದಾದ ಬಳಿಕ ವಿಟ್ನಾಳದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪುಟಾಣಿ ಮಕ್ಕಳ ಜೊತೆ ಕೆಲ ಹೊತ್ತು ಕಳೆದರು. ಪೌಷ್ಟಿಕ ಆಹಾರ ವಿತರಣೆಯ ಕುರಿತಂತೆ ಮಾಹಿತಿಯನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಶೈಲೇಶ ಪರಮಾನಂದ, ತಾ.ಪಂ ಪ್ರಭಾರಿ ಕಾರ್ಯನಿರ್ವಹಣಾಧಿಕಾರಿ ಪ್ರಮೋದ ಮಹಾಲೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಾ.ಲಕ್ಷ್ಮೀದೇವಿ, ಅಂಬೇವಾಡಿ ಗ್ರಾ.ಪಂ ಅಧ್ಯಕ್ಷರಾದ ಪ್ರಕಾಶ.ಜಿ.ಈ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮಕ್ಕಳ ಪಾಲಕರ ಜೊತೆ ಚರ್ಚೆ ನಡೆಸಿದರು.
ಆನಂತರ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಭೇಟಿ ನೀಡಿ, ಶಾಲೆಯ ಸ್ಥಿತಿಗತಿಗಳ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಇದೇ ಶಾಲೆಯ ವಸತಿ ನಿಲಯವನ್ನು ಕೂಡ ಪರಿಶೀಲನೆಯನ್ನು ನಡೆಸಿದರು. ಇಲ್ಲಿಯ ವಿದ್ಯಾರ್ಥಿಗಳೊಂದಿಗೆ ಕಲಿಕೆ ಹಾಗೂ ಊಟ, ವಸತಿ ವ್ಯವಸ್ಥೆಯ ಕುರಿತಂತೆ ಮಾಹಿತಿಯನ್ನು ಪಡೆದುಕೊಂಡರು.
ಇದಾದ ಬಳಿಕ ಅಂಬೇವಾಡಿಯಲ್ಲಿರುವ ಆಯುಷ್ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿಯ ವೈದ್ಯರ ಜೊತೆ ಚರ್ಚಿಸಿ ಆಸ್ಪತ್ರೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು. ಆಯುಷ್ ಆಸ್ಪತ್ರೆಯ ಚಿಕಿತ್ಸಾ ವಿಧಾನ ಮತ್ತು ಔಷಧಿಗಳ ಬಗ್ಗೆ ಚರ್ಚೆ ನಡೆಸಿದರು.
ಅಲ್ಲೇ ಹತ್ತಿರದಲ್ಲಿರುವ ಪ್ರವಾಸಿ ಮಾಹಿತಿ ಕೇಂದ್ರಕ್ಕೆ ತೆರಳಿದರು. ಈ ಕೇಂದ್ರದ ಕಾರ್ಯಾರಂಭದ ಕುರಿತಂತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ್ ಕುಮಾರ್ ಕೆ.ಸಿ ಮತ್ತು ತಹಶೀಲ್ದಾರ್ ಶೈಲೇಶ ಪರಮಾನಂದ ಅವರ ಜೊತೆ ಚರ್ಚೆ ನಡೆಸಿದರು.
ಇಲ್ಲಿಂದ ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಅವರು ತಹಶೀಲ್ದಾರ್ ಕಾರ್ಯಾಲಯ ಮತ್ತು ತಾಲೂಕು ಪಂಚಾಯತ್ ಕಾರ್ಯಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜೊತೆ ಸಭೆ ನಡೆಸಿ ಅಗತ್ಯ ಮಾಹಿತಿ, ಮಾರ್ಗದರ್ಶನವನ್ನು ನೀಡಿದರು. ಇದೇ ಸಂದರ್ಭದಲ್ಲಿ ತಾಲೂಕು ಆಡಳಿತ ಸೌಧಕ್ಕೆ ಆಗಮಿಸಿದ ನಗರ ಸಭೆಯ ಅಧ್ಯಕ್ಷರಾದ ಅಷ್ಪಾಕ್ ಶೇಖ, ಉಪಾಧ್ಯಕ್ಷೆ ಶಿಲ್ಪಾ ಕೋಡೆ ಅವರು ನಗರಸಭೆಯ ಪರವಾಗಿ ಜಿಲ್ಲಾಧಿಕಾರಿಯವರನ್ನು ಗೌರವಪೂರ್ವಕವಾಗಿ ಸ್ವಾಗತಿಸಿ, ನಗರದ ಪ್ರಗತಿಯ ಕುರಿತಂತೆ ಮಾಹಿತಿಯನ್ನು ನೀಡಿದರು.
ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಗೆ ಹಾಗೂ ತಾಯಿ ಮತ್ತು ಮಕ್ಕಳ ಆರೈಕೆ ಆಸ್ಪತ್ರೆಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಅವರು ಬುಧವಾರ ಸಂಜೆ ಭೇಟಿ ನೀಡಿ ವೈದ್ಯಾಧಿಕಾರಿ ಡಾ. ಅನಿಲ್ ಕುಮಾರ್ ನಾಯ್ಕ ಹಾಗೂ ವೈದ್ಯರುಗಳೊಂದಿಗೆ ಮಾತುಕತೆ ನಡೆಸಿ, ಆಸ್ಪತ್ರೆಯ ಮೂಲಸೌಕರ್ಯ ಹಾಗೂ ಅವಶ್ಯ ಔಷಧಿಗಳ ಕುರಿತಂತೆ ಮಾಹಿತಿಯನ್ನು ಪಡೆದುಕೊಂಡರು.
ಜಿಲ್ಲಾಧಿಕಾರಿ ಭೇಟಿಯ ಸಂದರ್ಭದಲ್ಲಿ ತಹಶೀಲ್ದಾರ್ ಶೈಲೇಶ ಪರಮಾನಂದ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಪ್ರಮೋದ ಮಹಾಲೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಡಾ.ಲಕ್ಷ್ಮೀದೇವಿ, ಕಂದಾಯ ನಿರೀಕ್ಷಕರಾದ ರಾಘವೇಂದ್ರ ಪಾಟೀಲ್ ಹಾಗೂ ಇನ್ನಿತರ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.