Council By Election: ವಿಧಾನ ಪರಿಷತ್ ಉಪ ಚುನಾವಣೆ; ಇಂದು ಮತ ಎಣಿಕೆ
Team Udayavani, Oct 24, 2024, 5:54 AM IST
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಅ.24ರಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, 12 ಮೇಜುಗಳಲ್ಲಿ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು “ಡಿ’ ಗ್ರೂಪ್ ಸಿಬಂದಿ ಇರಲಿದ್ದಾರೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್‌ಗೆ 33ರಂತೆ ಮತಪೆಟ್ಟಿಗೆಗಳನ್ನು ಹಂಚಿಕೆ ಮಾಡಲಾಗುತ್ತದೆ.
ಮೊದಲು ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ಅನಂತರ ಒಂದನೇ ಪ್ರಾಶಸ್ತÂದ ಮತಗಳ ಎಣಿಕೆ ಮಾಡಲಾಗುತ್ತದೆ. ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯ ದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆಯನ್ನು ಘೋಷಿಸಲಾಗುವುದು. ಅ.21ರಂದು ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.