Health Care: ಇಂದು ಗೃಹ ಆರೋಗ್ಯ ಯೋಜನೆಗೆ ಚಾಲನೆ

ಮನೆ ಬಾಗಿಲಿಗೇ ಆರೋಗ್ಯ ಸೇವೆ, ಕೋಲಾರದಲ್ಲಿ ಜಾರಿ, ಮಧುಮೇಹ, ರಕ್ತದೊತ್ತಡ ರೋಗಿಗಳಿಗೆ ಉಚಿತ ಔಷಧ ವಿತರಣೆ

Team Udayavani, Oct 24, 2024, 7:45 AM IST

Dinesh-gundurao

ಬೆಂಗಳೂರು: ಗ್ರಾಮೀಣ ಭಾಗದವರಿಗೆ ಉತ್ತಮ ಆರೋಗ್ಯ ಸೇವೆ ನೀಡುವ ಹಾಗೂ ಅಸಾಂಕ್ರಾಮಿಕ ರೋಗಗಳನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಗುರುವಾರ “ಗೃಹ ಆರೋಗ್ಯ’ ಯೋಜನೆಗೆ ಬೆಂಗಳೂರಿನಲ್ಲಿ ಚಾಲನೆ ನೀಡಲಿದೆ.

ಗೃಹ ಆರೋಗ್ಯ ಯೋಜನೆಯು ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಗೊಂಡು, ಜನವರಿ ಅಂತ್ಯದೊಳಗೆ ರಾಜ್ಯಾದ್ಯಂತ ಜಾರಿಗೆ ಬರಲಿದೆ. ಕರ್ನಾಟಕದಲ್ಲಿ ಶೇ. 26.9ರಷ್ಟು ಮಂದಿ ಅಧಿಕ ರಕ್ತದೊತ್ತಡ, ಶೇ. 15.6ರಷ್ಟು ಮಂದಿ ಮಧುಮೇಹದಿಂದ ಬಳಲುತ್ತಿದ್ದಾರೆ. ಇದರಿಂದ ಉಂಟಾಗುತ್ತಿರುವ ಮರಣ ಹಾಗೂ ಅನಾರೋಗ್ಯ ತೊಡಕುಗಳನ್ನು ತಡೆಗಟ್ಟಲು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಗೃಹ ಆರೋಗ್ಯ ಯೋಜನೆಯನ್ನು ಜಾರಿಗೊಳಿಸುತ್ತಿದ್ದಾರೆ. ಯೋಜನೆಯ ಭಾಗವಾಗಿ ಗ್ರಾಮೀಣ ಭಾಗ ಜನರ ಮನೆ ಬಾಗಿಲಿಗೆ ಸಮುದಾಯ ಆರೋಗ್ಯ ಕೇಂದ್ರ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರ ತಂಡ ತೆರಳಿ ತಪಾ ಸಣೆ ನಡೆಸಲಿದೆ.

ಮೊದಲ ಹಂತದ ತಪಾಸಣೆ
ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಮೊದಲ ಹಂತದಲ್ಲಿ ಗ್ರಾಮೀಣ ಭಾಗದ ಪ್ರತೀ ಮನೆಗೆ ಭೇಟಿ ನೀಡಲಿದ್ದಾರೆ. ಪ್ರತೀ ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ ದಿನಕ್ಕೆ ತಲಾ 15 ಮನೆಗಳಂತೆ ಭೇಟಿ ನೀಡಿ ತಪಾಸಣೆ ನಡೆಸಲಿದ್ದಾರೆ. ಈ ವೇಳೆ ಅಧಿಕ ರಕ್ತದೊತ್ತಡ (ಬಿಪಿ) ಹಾಗೂ ಮಧುಮೇಹ (ಡಯಾಬಿಟೀಸ್‌)ದಿಂದ ಬಳಲುವವರು ಮತ್ತು ಇತರರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಜತೆಗೆ ಮಾನಸಿಕ ಆರೋಗ್ಯ, ಸ್ತನ, ಬಾಯಿ ಹಾಗೂ ಗರ್ಭಕಂಠದ ಕ್ಯಾನ್ಸರ್‌ ತಪಾಸಣೆ ಮಾಡಲಾಗುತ್ತದೆ.

ಕನಿಷ್ಠ ಮೂರು ತಿಂಗಳು
ರಾಜ್ಯ ಗ್ರಾಮೀಣ ಭಾಗದಲ್ಲಿ ಸಂಪೂರ್ಣ ಆರೋಗ್ಯ ತಪಾಸಣೆ ನಡೆಸಲು ಕನಿಷ್ಠ 3 ತಿಂಗಳು ಬೇಕಾಗುತ್ತದೆ. ಪ್ರಸ್ತುತ ರಾಜ್ಯದಲ್ಲಿ ಶೇ. 11.5ರಷ್ಟು ಮಂದಿ ಬಾಯಿ, ಶೇ. 26ರಷ್ಟು ಸ್ತನ ಹಾಗೂ ಶೇ. 18.3ರಷ್ಟು ಜನರು ಗರ್ಭ ಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಈ ರೋಗಗಳಿಗೂ ಪರಿಹಾರ ಒದಗಿಸಲು ಗೃಹ ಆರೋಗ್ಯ ಯೋಜನೆಯಲ್ಲಿ ರೂಪುರೇಷೆ ಸಿದ್ಧಪಡಿಸಲಾಗಿದೆ.

ಉಚಿತ ಔಷಧ ಕಿಟ್‌
ರಕ್ತದೊತ್ತಡ ಹಾಗೂ ಮಧುಮೇಹ ಸ್ಕ್ರೀನಿಂಗ್‌ ವೇಳೆ ಅಗತ್ಯವಿದ್ದವರಿಗೆ ವೈದ್ಯರ ಮೇಲ್ವಿಚಾರಣೆಯಲ್ಲಿ ಔಷಧವನ್ನು ಬದಲಾಯಿಸಲಾಗುತ್ತದೆ. ಅವರಿಗೆ ಒಂದು ತಿಂಗಳ ಅವಧಿಗೆ ಅಗತ್ಯವಿರುವ ಮಾತ್ರೆಗಳ ಕಿಟ್‌ ಪೂರೈಸಲಾಗುತ್ತದೆ. ಈ ಮಾಹಿತಿಯನ್ನು ಎನ್‌ಸಿಡಿ ಆ್ಯಪ್‌ನಲ್ಲಿ ಭರ್ತಿ ಮಾಡಲಾಗುತ್ತದೆ. ಕ್ಯಾನ್ಸರ್‌ ಹಾಗೂ ಇತರ ಕಾಯಿಲೆಗಳ ತಪಾಸಣೆ ವೇಳೆ ಅಪಾಯದ ಮುನ್ಸೂಚನೆ ಅಥವಾ ಲಕ್ಷಣಗಳು ವರದಿಯಾದರೆ ತತ್‌ಕ್ಷಣ ಟೆಲಿ ಕಾಲ್‌ ಮೂಲಕ ವೈದ್ಯರ ಅಭಿಪ್ರಾಯ ಪಡೆದು, ಹೆಚ್ಚಿನ ತಪಾಸಣೆಗಾಗಿ ಸಮೀಪದ ಆಯುಷ್ಮಾನ್‌ ಆರೋಗ್ಯ ಮಂದಿರಕ್ಕೆ (ಹಿಂದಿನ ಉಪ ಆರೋಗ್ಯ ಕೇಂದ್ರ) ಶಿಫಾರಸು ಮಾಡಲಾಗುತ್ತದೆ.

ಇಂದು ಚಾಲನೆ
ಗೃಹ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅ. 24ರಂದು ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಸಂಜೆ 4ಕ್ಕೆ ಚಾಲನೆ ನೀಡಲಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌, ಸಭಾಪತಿ ಬಸವರಾಜ್‌ ಹೊರಟ್ಟಿ, ಸ್ಪೀಕರ್‌ ಯು.ಟಿ. ಖಾದರ್‌, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮತ್ತಿತರ ಸಚಿವರು ಭಾಗವಹಿಸಲಿದ್ದಾರೆ.

“ಗ್ರಾಮೀಣ ಭಾಗದ ಜನರು ರಕ್ತದೊತ್ತಡ, ಮಧುಮೇಹ ರೋಗಗಳ ತಪಾಸಣೆ ವಿಚಾರದಲ್ಲಿ ನಿರ್ಲ ಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿ ಈಗ ಆರೋಗ್ಯ ಇಲಾಖೆಯನ್ನು ಜನರ ಮನೆ ಬಳಿಗೆ ಕಳುಹಿಸುತ್ತಿದ್ದೇವೆ. ಪ್ರಾರಂಭಿಕ ಹಂತದಲ್ಲಿ ರಕ್ತದೊತ್ತಡ, ಮಧುಮೇಹವನ್ನು ಜನರು ನಿರ್ಲಕ್ಷಿಸಿದರೆ ದೀರ್ಘಾವಧಿಯಲ್ಲಿ ಕಿಡ್ನಿ ವೈಫಲ್ಯ, ಹೃದಯಾಘಾತಗಳಿಗೆ ಕಾರಣವಾಗುತ್ತದೆ. ಗೃಹ ಆರೋಗ್ಯದ ಮುಖಾಂತರ ನಾವು ಈಗಲೇ ತಪಾಸಣೆ ನಡೆಸಿ ಔಷಧಗಳನ್ನು ಕೊಟ್ಟರೆ ಮುಂದೆ ಆಗುವ ಪ್ರಾಣಾಪಾಯಗಳನ್ನು ತಡೆಗಟ್ಟಬಹುದಾಗಿದೆ.” -ದಿನೇಶ್‌ ಗುಂಡೂರಾವ್‌, ಆರೋಗ್ಯ ಸಚಿವ

ಟಾಪ್ ನ್ಯೂಸ್

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.