INDvsNZ: ವಾಷಿಂಗ್ಟನ್ ಸ್ಪಿನ್ ಜಾಲಕ್ಕೆ ಸಿಲುಕಿದ ಕಿವೀಸ್; 259 ರನ್ ಗೆ ಆಲೌಟ್
Team Udayavani, Oct 24, 2024, 3:38 PM IST
ಪುಣೆ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ದದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಭಾರತ ಮೇಲಗೈ ಸಾಧಿಸಿದೆ. ತಮಿಳುನಾಡು ಸ್ಪಿನ್ನರ್ ಗಳಾದ ವಾಷಿಂಗ್ಟನ್ ಸುಂದರ್ (Washington Sundar) ಮತ್ತು ರವಿಚಂದ್ರನ್ ಅಶ್ವಿನ್ (ravichandran Ashwin) ದಾಳಿಗೆ ಸಿಲುಕಿದ ನ್ಯೂಜಿಲ್ಯಾಂಡ್ ತಂಡವು 259 ರನ್ ಗಳಿಗೆ ಆಲೌಟಾಗಿದೆ.
ಪುಣೆಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಕಿವೀಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿತು. ಡಿವೋನ್ ಕಾನ್ವೆ ಮತ್ತು ರಚಿನ್ ರವೀಂದ್ರ ಹೊರತಾಗಿ ಉಳಿದ ಬ್ಯಾಟರ್ ಗಳು ಕ್ರೀಸ್ ಕಚ್ಚಿ ನಿಲ್ಲಲು ಕಷ್ಟ ಪಟ್ಟರು. ಕಾನ್ವೇ 76 ರನ್ ಗಳಿಸಿದರೆ, ಬೆಂಗಳೂರಿನಲ್ಲಿ ಶತಕ ಹೊಡೆದಿದ್ದ ರಚಿನ್ 65 ರನ್ ಗಳಿಸಿದರು.
ಎರಡನೇ ಪಂದ್ಯಕ್ಕೆ ತಂಡಕ್ಕೆ ಸೇರ್ಪಡೆಯಾದ ವಾಷಿಂಗ್ಟನ್ ಸುಂದರ್ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡಿದರು. ಸ್ಪಿನ್ ಟ್ರ್ಯಾಕ್ ನ ಭರಪೂರ ಲಾಭವೆತ್ತಿದ ವಾಷಿಂಗ್ಟನ್ ಏಳು ವಿಕೆಟ್ ಪಡೆದು ಮಿಂಚಿದರು. ಮತ್ತೊಂದೆಡೆ ಅನುಭವಿ ಸ್ಪಿನ್ನರ್ ರವಿ ಅಶ್ವಿನ್ ಮೂರು ವಿಕೆಟ್ ಪಡೆದರು.
FIFER! 👏 👏
Outstanding stuff this is from Washington Sundar! 🙌 🙌
His maiden 5⃣-wicket haul in Test cricket 👍 👍
Live ▶️ https://t.co/YVjSnKCtlI#TeamIndia | #INDvNZ | @IDFCFIRSTBank pic.twitter.com/BPt6tPmE5Q
— BCCI (@BCCI) October 24, 2024
ಮೂರು ಬದಲಾವಣೆ
ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋಲನುಭವಿಸಿದ ಕಾರಣದಿಂದ ತಂಡದಲ್ಲಿ ಬದಲಾವಣೆ ನಿರೀಕ್ಷಿಸಲಾಗಿತ್ತು. ಈ ಪಂದ್ಯಕ್ಕೆ ಭಾರತವು ಮೂರು ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿದೆ. ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಆಡಿದ್ದ ಕೆಎಲ್ ರಾಹುಲ್, ಕುಲದೀಪ್ ಯಾದವ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಇಂದಿನ ಪಂದ್ಯಕ್ಕೆ ಶುಭಮನ್ ಗಿಲ್, ವಾಷಿಂಗ್ಟನ್ ಸುಂದರ್ ಮತ್ತು ಆಕಾಶ್ ದೀಪ್ ಅವರನ್ನು ಸೇರ್ಪಡೆಗೊಳಿಸಲಾಗಿದೆ. ಮೊದಲ ಪಂದ್ಯದ ವೇಳೆ ಸ್ಕ್ವಾಡ್ ನಲ್ಲಿಯೂ ಇರದಿದ್ದ ವಾಷಿಂಗ್ಟನ್ ಅವರನ್ನು ಬಳಿಕ ಸೇರಿಸಲಾಗಿತ್ತು. ಅವರು ನೇರವಾಗಿ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
BGT 2025: ಶುಕ್ರವಾರದಿಂದ ಟೆಸ್ಟ್ ಸರಣಿ ಆರಂಭ: ಇಲ್ಲಿದೆ ಎಲ್ಲಾ ಪಂದ್ಯಗಳ ವೇಳಾಪಟ್ಟಿ, ಸಮಯ
Hardik Pandya: ಟಿ20 ಆಲ್‌ರೌಂಡರ್… ಹಾರ್ದಿಕ್ ಪಾಂಡ್ಯ ನಂ.1
China Masters 2024: ಥಾಯ್ಲೆಂಡ್‌ನ ಬುಸಾನನ್ ವಿರುದ್ಧ 20ನೇ ಗೆಲುವು ಸಾಧಿಸಿದ ಸಿಂಧು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.