Congress MLA ; ಬೇಲೇಕೇರಿ ಅದಿರು ನಾಪತ್ತೆ ಕೇಸ್: ಕಾರವಾರ ಶಾಸಕ ಸತೀಶ್ ಸೈಲ್ ದೋಷಿ
ನಾಳೆ ಶಿಕ್ಷೆ ಪ್ರಮಾಣ ಪ್ರಕಟ... ಪೊಲೀಸರು ವಶಕ್ಕೆ ಪಡೆಯುವ ಸಾಧ್ಯತೆ
Team Udayavani, Oct 24, 2024, 6:43 PM IST
ಬೆಂಗಳೂರು: ಬೇಲೇಕೇರಿ ಬಂದರು ಮೂಲಕ ನಡೆದಿದೆ ಎನ್ನಲಾದ ಅಕ್ರಮ ಅದಿರು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ(ಅ24) ತೀರ್ಪು ನೀಡಿದೆ. ನಾಳೆ ಶುಕ್ರವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸುವುದಾಗಿ ಕೋರ್ಟ್ ಹೇಳಿದೆ.
ಒಟ್ಟು 6 ಪ್ರಕರಣಗಳಿಗೆ ಸಂಬಂಧಿಸಿ ತೀರ್ಪು ಪ್ರಕಟಿಸಿದ್ದು, ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಅಂತಿಮ ಆದೇಶವನ್ನು ಹೊರಡಿಸಿದ್ದು, ಸತೀಶ್ ಸೈಲ್, ಅರಣ್ಯಾಧಿಕಾರಿ ಮಹೇಳ್ ಬಿಳಿಯ, ಮಲ್ಲಿಕಾರ್ಜುನ ಶಿಪ್ಪಿಂಗ್ ಸೇರಿ ಹಲವರ ವಿರುದ್ಧ ಪ್ರಕರಣವಿದ್ದು ಎಲ್ಲಾ ಆರೋಪಿಗಳು ದೋಷಿಗಳು ಎಂದು ತೀರ್ಪು ಪ್ರಕಟಿಸಿದ್ದಾರೆ.
ಜಪ್ತಿ ಮಾಡಿ ಇಡಲಾಗಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಿಸಿದ ಪ್ರಕರಣ ಇದಾಗಿದೆ. ಶಾಸಕ ಸೈಲ್ ಸೇರಿ ಎಲ್ಲ ದೋಷಿಗಳನ್ನು ವಶಕ್ಕೆ ಪಡೆಯಲು ಕೋರ್ಟ್ ಸೂಚಿಸಿದ್ದು, ನಾಳೆ ಸಂಜೆಯ ವೇಳೆಗೆ ಶಿಕ್ಷೆಯ ಪ್ರಮಾಣ ಪ್ರಕಟಿಸುವ ಸಾಧ್ಯತೆಗಳಿವೆ.
ಉಪ ಚುನಾವಣೆ ವೇಳೆ ಕಾಂಗ್ರೆಸ್ ಶಾಸಕರೊಬ್ಬರು ಅಕ್ರಮದ ಪ್ರಕರಣದಲ್ಲಿ ದೋಷಿ ಎನಿಸಿಕೊಂಡಿರುವುದು ರಾಜಕೀಯ ಅಸ್ತ್ರವಾಗಿ ಬಳಕೆಯಾಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
High Court: ಗುರು ರಾಘವೇಂದ್ರ ಬ್ಯಾಂಕ್ ಅಧ್ಯಕಗೆ ಜಾಮೀನು ನಿರಾಕರಣೆ
Arrested: ಬಿಹಾರದ ಬೆಡ್ಶೀಟ್ ಗ್ಯಾಂಗ್ನ 8 ಮಂದಿ ಸೆರೆ
Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್; ಆರೋಪಿ ಸೆರೆಗೆ 3 ತಂಡ ರಚನೆ
Bomb Threat: ಹೋಟೆಲ್, ಶಾಲೆ ಆಯ್ತು, ಈಗ ಬ್ಯಾಂಕ್ಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.