High Court: ಜೋಶಿ ಪ್ರಕರಣ: ಅ. 28ಕ್ಕೆ ವಿಚಾರಣೆ
Team Udayavani, Oct 25, 2024, 12:29 AM IST
ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ಸುಲಿಗೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ ಜೋಶಿ ಮತ್ತಿತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಪ್ರಕರಣ ರದ್ದತಿ ಕೋರಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಈ ವೇಳೆ ನ್ಯಾಯಪೀಠವು ವಿಶೇಷ ಸರಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರನ್ನು ಪ್ರಕರಣದ ವಿವರಣೆ ಕೇಳಿತು. ಅದಕ್ಕವರು, ಈ ಕುರಿತು ತನಿಖೆ ನಡೆಯುತ್ತಿದೆ ಎಂದಾಗ, ಅ. 28ರಂದು ಪ್ರಕರಣದ ವಿಚಾರಣೆ ನಡೆಸಲಾಗುವುದು. ಅಂದು ಪ್ರಕರಣದ ದಾಖಲೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚಿಸಿತು.
ಗೋಪಾಲ ಜೋಶಿ ಮತ್ತು ಅವರ ಪುತ್ರ ಅಜಯ್ ಜೋಶಿ ಅವರನ್ನು ನ್ಯಾಯಾಲಯವು 10 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.