Bengaluru: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ: ಸಿಎಂ

ಕಾನೂನು ಬಾಹಿರವಾಗಿ ಮನೆ ಕಟಿಕೊಳ್ಳಬೇಡಿ ; ಕಟ್ಟಡ ಕುಸಿತ ಸ್ಥಳ ಪರಿಶೀಲಿಸಿದ ಸಿದ್ದರಾಮಯ್ಯ

Team Udayavani, Oct 25, 2024, 10:26 AM IST

7-bng

ಬೆಂಗಳೂರು: ಜನರು ಕಾನೂನು ಬಾಹಿರವಾಗಿ ಮನೆಗಳನ್ನು ಕಟ್ಟಿಕೊಳ್ಳಬಾರದು. ಕಟ್ಟಡ ನಿರ್ಮಾಣಕ್ಕೆ ಮುಂಚಿತವಾಗಿ ಅನುಮತಿ ಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಾಬುಸಾಬ್‌ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು. ಇದೇ ವೇಳೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಗಳುಗಳ ಆರೋಗ್ಯ ವಿಚಾರಿಸಿದರು.

ಕಾಮಗಾರಿ ನಿಲ್ಲಿಸುವಂತೆ ನೋಟಿಸ್‌ ನೀಡಿದ ನಂತರವೂ ಕಟ್ಟಡ ಮಾಲಿಕರು ಹಾಗೂ ಗುತ್ತಿಗೆದಾರರು ಕಾಮಗಾರಿಯನ್ನು ನಿಲ್ಲಿಸದ ಕಾರಣ ಈ ಘಟನೆ ನಡೆದಿದೆ. ಇಂತಹ ಘಟನೆಗಳು ಮರುಕಳಿಸದಿರಲು ಸಾರ್ವಜನಿಕರು ಕಟ್ಟಡ ನಿರ್ಮಾಣಕ್ಕೆ ಮುಂಚಿತವಾಗಿ ಅನುಮತಿ ಪಡೆಯಬೇಕು. ಜತೆಗೆ ಎಇಇ ನಿಂದ ಸೂಕ್ತ ಪರಿಶೀಲನೆಯಾಗಬೇಕು. ಇದರ ಜೊತೆಗೆ ಕಳಪೆ ಕಾಮಗಾರಿ ಮಾಡದೆ ಕಟ್ಟಡದ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು.

ಅಧಿಕಾರಿಗಳೇ ಹೊಣೆ: ಈ ಕಟ್ಟಡ ಕುಸಿತ ನಡೆದಿರುವುದು ಕಳಪೆ ಕಾಮಗಾರಿಯಿಂದಾಗಿದೆಯೇ ಹೊರತು ಮಳೆಯ ಕಾರಣದಿಂದಲ್ಲ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಅನಧಿಕೃತ ಕಟ್ಟಡಗಳಿಗೆ ಅನುಮತಿ ನೀಡಬಾರದು. ಒಂದು ವೇಳೆ ನಿರ್ಮಿಸಿದರೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು. ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಸಿಎಂ ಸೂಚನೆ ನೀಡಿದರು.

3 ಸಾವಿರ ಕೋಟಿ ರೂ. ಸಾಲ: ಬಿಬಿಎಂಪಿ ವ್ಯಾಪ್ತಿಯ ರಾಜಕಾಲುವೆಗಳಲ್ಲಿ ಒತ್ತುವರಿ ತೆರವಿಗೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವಿಪತ್ತು ನಿರ್ವಹಣೆ ಗಾಗಿ 3 ಸಾವಿರ ಕೋಟಿ ರೂ. ಸಾಲ ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಇದು ರೆವಿನ್ಯೂ ಬಡಾವಣೆಯಾಗಿದ್ದು, ಈ ಕಟ್ಟಡ ವನ್ನು ಪರವಾನಗಿ ಪಡೆಯದೆ ನಿರ್ಮಿಸಲಾಗಿದೆ. ಅನ ಧಿಕೃತ ಕಾಮಗಾರಿ ಎಂದು ನೋಟೀಸು ನೀಡಲಾಗಿ ದ್ದರೂ, ನಿರ್ಮಾಣ ಮಾಡಿರುವುದರಿಂದ, ಸಂಬಂಧಪಟ್ಟ ಎಇಇ ಯನ್ನು ಅಮಾನತುಗೊಳಿಸಲಾಗಿದೆ. ಈ ಪ್ರದೇ ಶದ ವ್ಯಾಪ್ತಿಗೆ ಬರುವ ವಿಭಾಗೀಯ ಅಧಿಕಾರಿಗೂ ಹಾಗೂ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಅವರಿಗೂ ನೋಟಿಸ್‌ ಜಾರಿಗೊಳಿಸಲು ಸೂಚಿಸಲಾಗಿದೆ ಎಂದರು.

ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದ್ದು, ಘಟನೆಯಲ್ಲಿ ಗಾಯ ಗೊಂಡವರ ಚಿಕಿತ್ಸೆಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ಸಿಎಂ ಹೇಳಿದರು. ಸಾವನ್ನಪ್ಪಿರುವ 8 ಜನರಿಗೆ ಕಾರ್ಮಿಕ ಇಲಾಖೆಯಿಂದ ತಲಾ ತಲಾ 2 ಲಕ್ಷ ರೂ., ಬಿಬಿಎಂಪಿಯಿಂದ 3 ಲಕ್ಷ ರೂ. ಸೇರಿ ಒಟ್ಟು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಲಾಗಿದೆ ಎಂದು ಸಿಎಂ ತಿಳಿಸಿದರು.

“ವಿಪಕ್ಷ ನಾಯಕನಾಗಿದ್ದಾಗ ನಾನು ದೋಣಿಯಲ್ಲಿ ಕುಳಿತು ನೆರೆ ವೀಕಿಸಿದ್ದೆ’

ಮಳೆ ನಿರ್ವಹಣೆಯನ್ನು ಸರ್ಕಾರ ಸಮರ್ಪಕವಾಗಿ ಮಾಡುತ್ತಿಲ್ಲ ಎಂದು ಪ್ರತಿಪಕ್ಷದವರ ಟೀಕೆ ಮಾಡು ತ್ತಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಟೀಕೆಗಳನ್ನು ಮಾಡುವುದು ಸುಲಭ. ಹಿಂದಿನ ಸರ್ಕಾರದ ಅವಧಿಯಲ್ಲೂ ಮಳೆ ಸಂಭವಿಸಿದ್ದು, ಪ್ರತಿಪಕ್ಷದ ನಾಯಕನಾಗಿ ನಾನು ದೋಣಿಯಲ್ಲಿ ಕುಳಿತು ಸ್ಥಳ ವೀಕ್ಷಣೆ ಮಾಡಿದ್ದೆ ಎಂದು ತಿರುಗೇಟು ನೀಡಿದರು.

ಟಾಪ್ ನ್ಯೂಸ್

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

Road Mishap: ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ… ನಾಲ್ವರು ಭಾರತೀಯರು ಮೃತ್ಯು

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

15-dk

Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ

More MLAs from BJP may come to Congress: Eshwar Khandre

Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ

ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Channapatna By election: ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Shiggaon; Ajjamfir Qadri said that Yasir Khan is a BJP agent

Shiggaon ‘ಕೈ’ ಭಿನ್ನಮತ; ಯಾಸಿರ್‌ ಖಾನ್‌ ಬಿಜೆಪಿ ಏಜೆಂಟ್‌ ಎಂದ ಅಜ್ಜಂಫೀರ್‌ ಖಾದ್ರಿ

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!

Pakistan: ಅಂದು ಬಿನ್‌ ಲಾಡೆನ್‌ ಅಡಗಿದ್ದ ಅಬೋಟಾಬಾದ್‌ ಈಗ ಉ*ಗ್ರರ ನೂತನ ತರಬೇತಿ ಕೇಂದ್ರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-railway

Bengaluru: ದೀಪಾವಳಿ ಪ್ರಯುಕ್ತ 14 ರೈಲುಗಳಿಗೆ ಹೆಚ್ಚುವರಿ ಬೋಗಿ

15-dk

Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ

11-bng

Politics: ಬೆಂಗಳೂರನ್ನು ಕಡೆಗಣಿಸಿದ ಕಾಂಗ್ರೆಸ್‌: ಅಶೋಕ್‌ ವಾಗ್ಧಾಳಿ

10-bng

Bengaluru: ಅವಶೇಷಗಳಡಿ ಒಬ್ಬ ಕಾರ್ಮಿಕನಿಗೆ ಶೋಧ

9-bng

Bengaluru: ಮತ್ತೂಬ್ಬ ಎಂಜಿನಿಯರ್‌ ತಲೆದಂಡ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

Road Mishap: ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ… ನಾಲ್ವರು ಭಾರತೀಯರು ಮೃತ್ಯು

19

Panaji: ಪಂಡರಪುರಕ್ಕೆ ತೆರಳುವ ಕನಸು ಕೊನೆಗೂ ನನಸಾಗಲಿಲ್ಲ

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ

16-railway

Bengaluru: ದೀಪಾವಳಿ ಪ್ರಯುಕ್ತ 14 ರೈಲುಗಳಿಗೆ ಹೆಚ್ಚುವರಿ ಬೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.