Politics: ಬೆಂಗಳೂರನ್ನು ಕಡೆಗಣಿಸಿದ ಕಾಂಗ್ರೆಸ್: ಅಶೋಕ್ ವಾಗ್ಧಾಳಿ
Team Udayavani, Oct 25, 2024, 11:57 AM IST
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ನಂತರ ಬ್ರ್ಯಾಂಡ್ ಬೆಂಗಳೂರು ಎಂಬ ಹೆಸರು ಹುಟ್ಟುಹಾಕಿದ್ದಾರೆ. ಆದರೆ ನಗರದಲ್ಲಿ ದಿನಕ್ಕೊಂದು ಅವಘಡ ಸಂಭವಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಬೆಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಮೃತಪಟ್ಟವರ ಕುಟುಂಬದ ಶಾಪ ಸರ್ಕಾರಕ್ಕೆ ತಟ್ಟಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದರು.
ಬಾಬುಸಾಬ್‌ಪಾಳ್ಯದಲ್ಲಿ ಕಟ್ಟಡ ಕುಸಿದ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ ಅವರು, ಸಂತ್ರಸ್ತರು ಹಾಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಟ್ಟಡ ಕುಸಿತದ ಪ್ರಕರಣದಲ್ಲಿ 8 ಜನ ಮೃತರಾಗಿದ್ದಾರೆ. ಇಲ್ಲಿನ 20 ಅಡಿ ರಸ್ತೆಗೆ ಹೆಚ್ಚೆಂದರೆ 3 ಮಹಡಿ ನಿರ್ಮಿಸಬಹುದು.
ಆದರೆ 7 ಮಹಡಿ ನಿರ್ಮಿಸಲು ಹೊರಟಿದ್ದರಿಂದ ಅವಘಡ ನಡೆದಿದೆ. ಬಿಬಿಎಂಪಿ ಅಧಿಕಾರಿಗಳು ಇದನ್ನು ಸರಿಯಾಗಿ ನಿರ್ವಹಣೆ ಮಾಡಿದ್ದರೆ ಎಲ್ಲವೂ ಸರಿ ಇರುತ್ತಿತ್ತು ಎಂದು ದೂರಿದರು. ಕಾಂಗ್ರೆಸ್ ಸರ್ಕಾರ ಇಂತಹ ಯಾವುದೇ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಬರುವ ರಸ್ತೆಯ ಎರಡೂ ಬದಿ ಕಸ ರಾಶಿಯಾಗಿ ಬಿದ್ದಿದೆ. ಅಂದರೆ ಉಪಮುಖ್ಯಮಂತ್ರಿಯಾಗಲಿ, ಮುಖ್ಯಮಂತ್ರಿಯಾಗಲಿ, ಇಲ್ಲಿ ಯಾರಿಗೂ ಬೆಲೆ ಇಲ್ಲ. ಒಂದು ವಾರದಿಂದ ಸರಿಯಾಗಿ ಕಸ ವಿಲೇವಾರಿ ಮಾಡಿಲ್ಲ. ವಿದ್ಯುತ್ ಕಂಬಗಳಿಂದ ಇನ್ನೆಷ್ಟು ಜನ ಸಾಯುತ್ತಾರೆಂದು ಗೊತ್ತಿಲ್ಲ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.