Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ
Team Udayavani, Oct 25, 2024, 2:44 PM IST
ನಟ ಧನಂಜಯ್ “ಹಲಗಲಿ’ ಸಿನಿಮಾ(Halagali Cinema) ದಲ್ಲಿ ನಟಿಸುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರಕ್ಕೆ ನಾಯಕಿಯ ಆಯ್ಕೆಯಾಗಿದೆ. “ಕಾಂತಾರ’ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಬೆಳಕಿಗೆ ಬಂದ ಸಪ್ತಮಿ ಗೌಡ (Saptami Gowda) “ಹಲಗಲಿ’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಸಪ್ತಮಿಗೆ ಮತ್ತೂಂದು ಬಿಗ್ ಬಜೆಟ್ ಸಿನಿಮಾ ಸಿಕ್ಕಂತಾಗಿದೆ.
ಬ್ರಿಟಿಷರ ವಿರುದ್ಧ ಮೊದಲ ಗೆರಿಲ್ಲಾ ಯುದ್ಧ ಮಾಡಿದ ನಮ್ಮದೇ ರಾಜ್ಯದ ಹಲಗಲಿಯ ಊರಿನ ಬೇಡರ ಕುರಿತು ಕೇಳಿರಬಹುದು. ಈಗ ಆ ವೀರರ ಆಚಾರ- ವಿಚಾರ ಹಾಗೂ ಅವರ ಹೋರಾಟದ ಹೆಜ್ಜೆ ಗುರುತುಗಳನ್ನು ತೆರೆ ಮೇಲೆ ತರುವುದಕ್ಕೆ ಹೊರಟಿದ್ದಾರೆ ನಿರ್ದೇಶಕ ಸುಕೇಶ್ ಡಿ. ಕೆ.
ಅದ್ಧೂರಿ ಬಜೆಟ್‌ನಲ್ಲಿ ತಯಾರಾಗುತ್ತಿರುವ ಈ ಚಿತ್ರವನ್ನು ಬಳ್ಳಾರಿಯ ಕಲ್ಯಾಣ್ ಚಕ್ರವರ್ತಿ ಧೂಳಿಪಾಳ್ಳ ನಿರ್ಮಿಸುತ್ತಿದ್ದಾರೆ. ಎರಡು ಭಾಗಗಳಲ್ಲಿ, ಮೂಡಿ ಬರಲಿರುವ ಈ ಸಿನಿಮಾ ಕೋಟಿ ವೆಚ್ಚದಲ್ಲಿ ತಯಾರಾಗುತ್ತಿದೆ ಎಂಬುದು ವಿಶೇಷ. ಇತಿಹಾಸದ ನೆರಳಿನಲ್ಲಿ ಮೂಡಿ ಬರುತ್ತಿರುವ ಈ ಐತಿಹಾಸಿಕ ಚಿತ್ರಕ್ಕೆ ಇತ್ತೀಚೆಗಷ್ಟೆ ಮುಹೂರ್ತ ಆಗಿದೆ.
ಮೈಸೂರಿನ ಲಲಿತ್ ಮಹಲ್ ನಲ್ಲಿ ಚಿತ್ರಕ್ಕೆ ಮುಹೂರ್ತ ನಡೆದಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ ಮೂಡಿ ಬರಲಿದೆ. ಕನ್ನಡದ ವಾಸುಕಿ ವೈಭವ್ ಸಂಗೀತ ಇದೆ. ವಿಕ್ರಮ್ ಮೋರ್ ಅವರ ಸಾಹಸ “ಹಲಗಲಿ’ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ ಪೊಲೀಸ್ ವಶಕ್ಕೆ
Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.