BJP: ಹೈಕಮಾಂಡ್ ಸೂಚಿಸಿರುವ ಅಭ್ಯರ್ಥಿ ಪರ ಕೆಲಸ: ನಿರಾಣಿ
Team Udayavani, Oct 26, 2024, 12:41 AM IST
ಹುಬ್ಬಳ್ಳಿ: ಶಿಗ್ಗಾಂವಿ ಉಪಚುನಾವಣೆಗೆ ನಾನು ಆಕಾಂಕ್ಷಿಯಾಗಿರಲಿಲ್ಲ. ಈ ಕುರಿತು ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಹೈಕಮಾಂಡ್ ಸೂಚಿಸಿರುವ ಅಭ್ಯರ್ಥಿ ಪರವಾಗಿ ನಾವೆಲ್ಲ ಕೆಲಸ ಮಾಡುತ್ತೇವೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಚುನಾವಣೆ ಮುಗಿಯುವವರೆಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ಉಳಿದು ಗೆಲ್ಲಿಸುವ ಕೆಲಸ ಮಾಡುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ದುರಾಡಳಿತದ ಬಗ್ಗೆ ಕಾಂಗ್ರೆಸ್ ಶಾಸಕರೇ ಭ್ರಮನಿರಸರಾಗಿದ್ದಾರೆ. ಯಾವುದೇ ಅಭಿವೃದ್ಧಿ ಆಗದಿರುವ ಹಿನ್ನೆಲೆಯಲ್ಲಿ ಅವರ ಪಕ್ಷದವರೇ ಅಸಮಾಧಾನದಲ್ಲಿದ್ದಾರೆ. ಹೀಗಾಗಿ ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ದೊಡ್ಡ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.
ಗ್ಯಾರಂಟಿಗಳು ಫಲಾನುಭವಿಗಳಿಗೆ ಮುಟ್ಟಿಲ್ಲ. ಹೀಗಾಗಿ ಜನರು ಕಾಂಗ್ರೆಸ್ ವಿರೋಧವಾಗಿದ್ದಾರೆ. ಬಸವರಾಜ ಬೊಮ್ಮಾಯಿ ಇಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.