Haveri: ಸಚಿವ ಜಮೀರ್ ಅಹ್ಮದ್ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ
Team Udayavani, Oct 26, 2024, 12:47 AM IST
ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಅಸಮಾಧಾನ ಸ್ಫೋಟಗೊಂಡಿದ್ದು ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಸಮಾಧಾನಪಡಿಸಲು ಕ್ಷೇತ್ರಕ್ಕೆ ಆಗಮಿಸಿದ್ದ ಸಚಿವ ಜಮೀರ್ ಅಹ್ಮದ್ ಕಾರಿನ ಮೇಲೆ ಕೆಲ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ ಘಟನೆ ನಡೆದಿದೆ.
ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಯಾಗಿ ನಾಮಪತ್ರ ಸಲ್ಲಿಸಿರುವ ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಮನವೊಲಿಸಲು ಸಚಿವ ಜಮೀರ್ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್‌ಖಾನ್ ಪಠಾಣ ಕಾರಿನಲ್ಲಿ ಹುಲಗೂರಿನಲ್ಲಿರುವ ಖಾದ್ರಿ ಅವರ ಮನೆಗೆ ಹೋಗಿದ್ದರು.
ವಾಪಸ್ ಕಳುಹಿಸಿದರು
ಟಿಕೆಟ್ ಕೈ ತಪ್ಪಿದ್ದರಿಂದ ಆಕ್ರೋಶ ಗೊಂಡಿರುವ ಖಾದ್ರಿ ಬೆಂಬಲಿಗರು ಕಾರಿನ ಮೇಲೆ ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಸ್ಥಳೀಯ ಕಾಂಗ್ರೆಸ್ ಮುಖಂಡರು ಜಮೀರ್ ಅವರನ್ನು ಪಾರು ಮಾಡಿ ವಾಪಸ್ ಕಳುಹಿಸಿದರು.
10 ನಿಮಿಷ ಇರುವಾಗ ಓಡಿ ಬಂದು ನಾಮಪತ್ರ ಸಲ್ಲಿಕೆಯಾಸೀರ್‌ಖಾನ್ ಪಠಾಣ್‌ಗೆ ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್‌ಗೆ ಸಂಕಷ್ಟ ಎದುರಾಗಿದೆ. ಟಿಕೆಟ್ ವಂಚಿತರಾದ ಅಜ್ಜಂಪೀರ್ ಖಾದ್ರಿ ಹಾಗೂ ಮಾಜಿ ಸಂಸದ ಮಂಜುನಾಥ ಕುನ್ನೂರ ಕೊನೆ ಕ್ಷಣದಲ್ಲಿ ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಅಜ್ಜಂಪೀರ್ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸದಂತೆ ತಡೆಯಲು ಸಚಿವ ಜಮೀರ್ ಅಹ್ಮದ್ ಸಾಕಷ್ಟು ಕಸರತ್ತು ನಡೆಸಿದರೂ ಕೊನೆ ಕ್ಷಣದಲ್ಲಿ ಬೈಕ್‌ನಲ್ಲಿ ಬಂದು ಖಾದ್ರಿ ನಾಮಪತ್ರ ಸಲ್ಲಿಸಿದರು. ಬೈಕ್‌ನಲ್ಲಿ ತಹಸೀಲ್ದಾರ್ ಕಚೇರಿಗೆ ಆಗಮಿಸಿದ ಅವರು ಕೇವಲ 10 ನಿಮಿಷ ಸಮಯ ಇದ್ದಿದ್ದರಿಂದ ಓಡೋಡಿ ಹೋಗಿ ಚುನಾವಣಾ ಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಅಲ್ಲದೇ ಮಾಜಿ ಸಂಸದ ಮಂಜುನಾಥ ಕುನ್ನೂರ ಸಹ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರಿಂದ ಅಖಾಡ ಮತ್ತಷ್ಟು ರಂಗೇರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.