ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

Team Udayavani, Oct 26, 2024, 6:00 AM IST

ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆ ಮರೆಯಬಾರದು

ಕಳೆದ 2-3 ವಾರಗಳಿಂದ ರಾಜ್ಯದ ರಾಜಧಾನಿ ಬೆಂಗಳೂರು ಸುತ್ತಮುತ್ತ ವ್ಯಾಪಕ ಮಳೆ ಯಾಗಿದೆ. ಇದರ ಪರಿಣಾಮವಾಗಿ ನಗರದ ಹಲವೆಡೆ ಮಳೆ ನೀರು ನುಗ್ಗಿ ಸಮಸ್ಯೆಯನ್ನು ಸೃಷ್ಟಿಸಿದ್ದರೆ ಮತ್ತೆ ಹಲವೆಡೆ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಭಾರೀ ಅಡಚಣೆಯುಂಟಾಗಿತ್ತು. ಇದೇ ವೇಳೆ ಕೆಲವೊಂದು ಅವಘಡ ಸಂಭವಿಸಿ ಜೀವಹಾನಿ, ಆಸ್ತಿಪಾಸ್ತಿಗೆ ನಷ್ಟ ಸಂಭವಿಸಿದೆ.

ಪ್ರತೀ ವರ್ಷವೂ ಈ ಸಮಸ್ಯೆ ತಲೆದೋರುತ್ತಿದ್ದು ಇದರ ನಿವಾರಣೆಗಾಗಿ ಸರಕಾರ ಮತ್ತು ಬೆಂಗಳೂರು ಮಹಾನಗರ ಪಾಲಿಕೆ ಆಡಳಿತ ನಿರಂತರ ಪ್ರಯತ್ನ ನಡೆಸುತ್ತಲೇ ಬಂದಿದೆಯಾದರೂ ಇವೆಲ್ಲವೂ ನಿರೀಕ್ಷಿತ ಫ‌ಲಿತಾಂಶವನ್ನು ತಂದುಕೊಟ್ಟಿಲ್ಲ ಎನ್ನುವುದು ವಾಸ್ತವ. ಬೆಂಗಳೂರಿನಲ್ಲಿ ಮಳೆಯಿಂದಾದ ಅವಾಂತರದ ಹಿನ್ನೆಲೆಯಲ್ಲಿ ಕಾರ್ಪೊರೇಟ್‌ ಕಂಪೆನಿಯ ನಿವೃತ್ತ ಅಧಿಕಾರಿಯೋರ್ವರು ಮಾಡಿದ ಟ್ವೀಟ್‌ ಅನ್ನು ಮುಂದಿಟ್ಟು ಆಂಧ್ರಪ್ರದೇಶದ ಸಚಿವ ನಾರಾ ಲೋಕೇಶ್‌, ಬೆಂಗಳೂರಿನಲ್ಲಿರುವ ಎಲ್ಲ ಬಹುರಾಷ್ಟ್ರೀಯ ಕಂಪೆನಿಗಳು ಆಂಧ್ರಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು.

ಈ ಕಂಪೆನಿಗಳಿಗೆ ಅಗತ್ಯವಿರುವ ವಿಶ್ವದರ್ಜೆಯ ಮೂಲಸೌಕರ್ಯವನ್ನು ಒದಗಿಸಲು ನಮ್ಮ ಸರಕಾರ ಸಿದ್ಧ ಎಂದು ಹೇಳಿದ್ದಾರೆ. ಆಂಧ್ರ ಸಚಿವರ ಈ ಆಹ್ವಾನ ತೀರಾ ಬಾಲಿಶ ಮತ್ತು ಅಪ್ರಬುದ್ಧವೇ ಸರಿ.

ಇದೇ ಮಾರ್ಚ್‌ ಮಾಸಾಂತ್ಯದಲ್ಲಿ ಕೇರಳದ ಕೈಗಾರಿಕ ಸಚಿವರು ಬೆಂಗಳೂರಿನಲ್ಲಿನ ನೀರಿನ ಸಮಸ್ಯೆಯನ್ನು ಮುಂದಿಟ್ಟು ಐಟಿ ಕಂಪೆನಿಗಳು ಕೇರಳಕ್ಕೆ ಸ್ಥಳಾಂತರಗೊಳ್ಳುವಂತೆ ಆಹ್ವಾನ ನೀಡುವ ಮೂಲಕ ನಗೆಪಾಟಲಿಗೀಡಾಗಿದ್ದರು. ಜುಲೈಯಲ್ಲಿ ಉದ್ಯೋಗ ಮೀಸಲು ವಿಷಯವಾಗಿ ಚರ್ಚೆ ಏರ್ಪಟ್ಟಾಗ ಆಂಧ್ರದ ಸಚಿವ ನಾರಾ ಲೋಕೇಶ್‌ ಅವರು ಇಂತಹುದೇ ಹೇಳಿಕೆ ನೀಡಿ ವಿವಾದಕ್ಕೆ ಕಾರಣರಾಗಿದ್ದರು. ಈ ಎರಡೂ ಸಂದರ್ಭಗಳಲ್ಲಿ ಬಹುರಾಷ್ಟ್ರೀಯ ಕಂಪೆನಿಗಳಾಗಲೀ, ಐಟಿಬಿಟಿ ಕಂಪೆನಿಗಳಾಗಲೀ ಈ ನಾಯಕರ ಹೇಳಿಕೆಗಳಿಗೆ ಸೊಪ್ಪು ಹಾಕಿರಲಿಲ್ಲ ಎನ್ನುವುದು ಬೇರೆ ಮಾತು. ಆದರೆ ಈ ನಾಯಕರು ಮತ್ತದೇ ಚಾಳಿಯನ್ನು ಮುಂದುವರಿಸಿರುವುದು ವಿಪರ್ಯಾಸ.

ರಾಜ್ಯ ಸರಕಾರಗಳು ತಮ್ಮ ರಾಜ್ಯದ ಪ್ರಗತಿಯ ದೃಷ್ಟಿಯಿಂದ ಬಂಡವಾಳ ಆಕರ್ಷಿಸಲು ಹಾಗೂ ಕಂಪೆನಿಗಳು ಮತ್ತು ಬೃಹತ್‌ ಉದ್ಯಮಗಳನ್ನು ಸಳೆಯಲು ವಿವಿಧ ಮೂಲಸೌಕರ್ಯಗಳ ಒದಗಣೆ, ಉತ್ತೇಜನದಾಯಕ ಕ್ರಮಗಳನ್ನು ಕೈಗೊಳ್ಳುವುದು ಹೊಸದೇನಲ್ಲ. ತನ್ಮೂಲಕ ಆಯಾಯ ರಾಜ್ಯದಲ್ಲಿ ಉದ್ಯಮಗಳು ಸ್ಥಾಪನೆಯಾಗಿ, ರಾಜ್ಯದ ಬೊಕ್ಕಸಕ್ಕೆ ಆದಾಯ ಹರಿದುಬರುವುದರ ಜತೆಯಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತವೆ. ಇದು ಸಹಜ ಪ್ರಕ್ರಿಯೆ ಕೂಡ. ಆದರೆ ನೈಸರ್ಗಿಕ ಸಮಸ್ಯೆ, ಲೋಪದೋಷಗಳನ್ನು ಮುಂದಿಟ್ಟು ಇನ್ನೊಂದು ರಾಜ್ಯದಲ್ಲಿರುವ ಕಂಪೆನಿಗಳನ್ನು ನಮ್ಮ ರಾಜ್ಯಕ್ಕೆ ಸ್ಥಳಾಂತರಗೊಳ್ಳಿ ಎನ್ನುವುದು ದಾಷ್ಟéìವಲ್ಲದೆ ಇನ್ನೇನು?. ಇಂತಹ ಕಾರಣಗಳನ್ನೇ ಮುಂದಿಟ್ಟು ನಮ್ಮ ರಾಜ್ಯಕ್ಕೆ ಸ್ಥಳಾಂತರಗೊಳ್ಳಿ ಎಂದು ಪ್ರತಿಯೊಂದು ರಾಜ್ಯವೂ ಬೇರೆ ರಾಜ್ಯದಲ್ಲಿನ ಕಂಪೆನಿಗಳಿಗೆ ಸ್ಥಳಾಂತರ ಗೊಳ್ಳುವಂತೆ ಆಹ್ವಾನ ನೀಡಲಾರಂಭಿಸಿದರೆ ರಾಜ್ಯಗಳ ನಡುವೆ ಬಲುದೊಡ್ಡ ಕಾದಾಟವೇ ನಡೆದೀತು. ರಾಜ್ಯ-ರಾಜ್ಯಗಳ ನಡುವಿನ ಸಂಬಂಧದ ಸೂಕ್ಷ್ಮತೆಯನ್ನು ಆಳುವವರು ಅರ್ಥಮಾಡಿಕೊಳ್ಳಬೇಕು. ಇಲ್ಲದೇ ಇದ್ದರೆ ಸದೃಢ ಗಣತಂತ್ರಕ್ಕೆ ಅಪಾಯ ಎದುರಾಗಬಹುದು.

ರಾಜಕೀಯ ಧುರೀಣರ ಬಾಲಿಶತನದ ಹೇಳಿಕೆಗಳೇನೇ ಇರಲಿ, ಅವೆಲ್ಲವನ್ನು ಪಕ್ಕಕ್ಕಿರಿಸಿ, ಆ ಹೇಳಿಕೆಗೆ ಕಾರಣವಾದ ವಿಷಯ, ಅಂಶಗಳತ್ತ ನಮ್ಮ ಸರಕಾರ ಒಂದಿಷ್ಟು ಗಮನ ಹರಿಸಬೇಕು. ಮಳೆ ಬಂದಾಕ್ಷಣ ಇಡೀ ನಗರದಲ್ಲಿನ ಜನಜೀವನ ಅಸ್ತವ್ಯಸ್ತಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗುವುದನ್ನು ನಿವಾರಿಸಬೇಕಾದ ಅನಿವಾ ರ್ಯತೆಯಂತೂ ಇದ್ದೇ ಇದೆ. ನಗರ ಬೆಳೆದಂತೆ ಈ ಸಮಸ್ಯೆಗಳೆಲ್ಲ ಮಾಮೂಲು ಎಂಬ ಉಡಾಫೆಯ ಮಾತಿಗಿಂತ ದೂರದೃಷ್ಟಿಯಿಂದ ಕೂಡಿದ ಮೂಲಸೌಕರ್ಯ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದು ಅತ್ಯಗತ್ಯ. ಇತ್ತ ರಾಜ್ಯ ಸರಕಾರ ಮತ್ತು ಬೆಂಗಳೂರು ಮಹಾನಗರ ಪಾಲಿಕೆ ತುರ್ತು ಗಮನ ಹರಿಸಬೇಕೆಂಬುದರಲ್ಲಿ ಎರಡು ಮಾತಿಲ್ಲ.

ಟಾಪ್ ನ್ಯೂಸ್

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.