Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು
ನಗರಸಭಾ ಅಧ್ಯಕ್ಷರಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣ
Team Udayavani, Oct 26, 2024, 1:55 AM IST
ಕಾಸರಗೋಡು: 2007ರಲ್ಲಿ ಹೊಸದುರ್ಗ ನಗರಸಭಾ ಅಧ್ಯಕ್ಷರಾಗಿದ್ದ ನ್ಯಾಯವಾದಿ ಎಸ್.ಪಿ. ಖಾಲಿದ್ ಅವರ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿ ಬೆದರಿಕೆ ಒಡ್ಡಿದ ಪ್ರಕರಣದ ಆರೋಪಿ ಮಾವೋವಾದಿಯ ಕಬನಿ ದಳ ಕಮಾಂಡರ್ ಕಲ್ಪೆಟ್ಟಾ ನಿವಾಸಿ ಸೋಮನ್‌ನನ್ನು ಪೊಲೀಸರು ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ) ದಲ್ಲಿ ಬಿಗಿ ಪೊಲೀಸ್ ಬಂದೋಬಸ್ತಿನಲ್ಲಿ ಹಾಜರುಪಡಿಸಲಾಯಿತು.
ಅಕ್ರಮವಾಗಿ ಅಧ್ಯಕ್ಷರ ಕಚೇರಿಗೆ ನುಗ್ಗಿ ಕುತ್ತಿಗೆಗೆ ಚಪ್ಪಲಿ ಹಾರ ಹಾಕಿದ ಪ್ರಕರಣ ನಡೆದಿತ್ತು. ಕಾನೂನು ಉಲ್ಲಂಘಿಸಿ ಕಟ್ಟಡವೊಂದಕ್ಕೆ ಲೈಸನ್ಸ್ ನೀಡಲಾಗಿದೆ ಎಂದು ಆರೋಪಿಸಿ ಸೋಮನ್ ಸಹಿತ ಒಂದು ತಂಡ ನಗರಸಭಾ ಅಧ್ಯಕ್ಷರ ಕಚೇರಿಗೆ ಅಕ್ರಮವಾಗಿ ಪ್ರವೇಶಿಸಿ ಚಪ್ಪಲಿ ಹಾರ ಹಾಕಿ ಪರಾರಿಯಾಗಿತ್ತು.
ಕಳೆದ ಜುಲೈ 28ರಂದು ಶೊರ್ನೂರು ರೈಲು ನಿಲ್ದಾಣ ಪರಿಸರದಿಂದ ಸೋಮನ್‌ನನ್ನು ನಕ್ಸಲ್ ನಿಗ್ರಹ ದಳ ಬಂಧಿಸಿತ್ತು. ಆತನನ್ನು ವಿಯೂರ್ ಸೆಂಟ್ರಲ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು. ಸೋಮನ್ ವಿರುದ್ಧ ಕಾಸರಗೋಡು, ಕಣ್ಣೂರು, ಕಲ್ಲಿಕೋಟೆ, ಮಲಪ್ಪುರಂ ಮತ್ತು ಪಾಲ್ಘಾಟ್ ಜಿಲ್ಲೆಯಲ್ಲಿ ಮಾವೋವಾದಿ ಚಟುವಟಿಕೆಗಳಿಗೆ ಸಂಬಂಧಿಸಿ ಒಟ್ಟು 66 ಪ್ರಕರಣಗಳು ದಾಖಲಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಕೊಲೆ ಯತ್ನ; ವೀಡಿಯೋ ಕಾನ್ಫರೆನ್ಸ್ ಮೂಲಕ ನಕ್ಸಲ್ ಸೋಮನ್ ವಿಚಾರಣೆ
Kasaragod: 300 ಪವನ್ ಚಿನ್ನ, 1 ಕೋಟಿ ರೂ. ಕಳವು ಕರ್ನಾಟಕ, ತಮಿಳುನಾಡಿಗೆ ತನಿಖೆ ವಿಸ್ತರಣೆ
Road Mishap: ಲಾರಿ ಹರಿದು ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು
Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು
Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.