Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಬೆಂಗಳೂರಿನ ಇಬ್ಬರು ಸಮುದ್ರಪಾಲು…

Team Udayavani, Oct 26, 2024, 11:19 AM IST

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

ಕುಂದಾಪುರ/ಕೋಟೇಶ್ವರ: ಬೀಜಾಡಿ ಬೀಚ್‌ನ ಅಮಾಸೆ ಕಡುವಿನ ಬಳಿ ಸಮುದ್ರದಲ್ಲಿ ಈಜಲು ತೆರಳಿದ ಬೆಂಗಳೂರು ಮೂಲದ ನಾಲ್ವರ ಯುವಕರ ಪೈಕಿ ಇಬ್ಬರು ಸಾವನ್ನಪ್ಪಿದ ಘಟನೆ ಶನಿವಾರ ಸಂಭವಿಸಿದೆ.

ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯ ಉದ್ಯೋಗಿಗಳಾದ ಅಜಯ್‌ (25) ಮತ್ತು ಸಂತೋಷ್‌ (25) ಮೃತಪಟ್ಟವರು. ಅವರೊಂದಿಗೆ ಈಜಲು ತೆರಳಿದ್ದ ಮೋಕ್ಷಿತ್‌ ಹಾಗೂ ಶ್ರೇಯಸ್‌ ಅಪಾಯದಿಂದ ಪಾರಾಗಿದ್ದಾರೆ.

ಮದುವೆಗೆ ಆಗಮಿಸಿದ್ದರು
ಈ ನಾಲ್ವರ ಸ್ನೇಹಿತ ಅರ್ಜುನ್‌ ಅವರ ಅಕ್ಕನ ಮದುವೆ ಅ. 27ರಂದು ಬ್ರಹ್ಮಾವರದಲ್ಲಿ ನಡೆಯಲಿದ್ದು, ಅದಕ್ಕಾಗಿ ಇವರು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮುಗಿಸಿ ಅ. 25ರಂದು ಸಂಜೆ ಕುಂದಾಪುರಕ್ಕೆ ಆಗಮಿಸಿದ್ದರು. ಅ. 25ರ ರಾತ್ರಿ ಬ್ರಹ್ಮಾವರದಲ್ಲಿ ಮೆಹಂದಿ ಕಾರ್ಯಕ್ರಮ ಮುಗಿಸಿ ರಾತ್ರಿ ಬೀಜಾಡಿ ಕಡಲ ತೀರದಲ್ಲಿರುವ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದರು.

ಅ. 26ರ ಬೆಳಗ್ಗೆ 9 ಗಂಟೆಯ ಸುಮಾರಿಗೆ ಸಮೀಪದ ಬೀಚ್‌ಗೆ ಅಜಯ್‌, ಸಂತೋಷ್‌, ಮೋಕ್ಷಿತ್‌ ಹಾಗೂ ಶ್ರೇಯಸ್‌ ಈಜಲು ತೆರಳಿದ್ದರು. ಅಲೆಗಳ ಅಬ್ಬರಕ್ಕೆ ಸಿಲುಕಿ ಅಜಯ್‌ ಹಾಗೂ ಸಂತೋಷ್‌ ನೀರಲ್ಲಿ ಮುಳುಗಲಾರಂಭಿಸಿದ್ದು, ಇದನ್ನು ಕಂಡ ಮೋಕ್ಷಿತ್‌ ಅವರು ಸಂತೋಷ್‌ರನ್ನು ಮೇಲಕ್ಕೆಳೆದು ತಂದರು. ಅಷ್ಟರೊಳಗೆ ಅಜಯ್‌ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಅಸ್ವಸ್ಥಗೊಂಡಿದ್ದ ಸಂತೋಷ್‌ನನ್ನು ಪರೀಕ್ಷಿಸಿದ ವೈದ್ಯರು ಅದಾಗಲೇ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಬಳಿಕ ಅಜಯ್‌ಗಾಗಿ ಸಮುದ್ರದಲ್ಲಿ ಕುಂದಾಪುರ ಪೊಲೀಸರ ನೇತೃತ್ವದಲ್ಲಿ ಕುಂದಾಪುರ ಅಗ್ನಿ ಶಾಮಕ ದಳ, ಗಂಗೊಳ್ಳಿ ಕರಾವಳಿ ಕಾವಲು ಪಡೆ ಪೊಲೀಸರು, ಮುಳುಗು ತಜ್ಞರು, ಸ್ಥಳೀಯ ಮೀನುಗಾರರು, ಸ್ಥಳೀಯರ ಸಹಕಾರದೊಂದಿಗೆ ಹುಡುಕಾಟ ನಡೆಯಿತು. ಆದರೆ ಅಪರಾಹ್ನ 2 ಗಂಟೆಯ ಸುಮಾರಿಗೆ ಅಜಯ್‌ ಮೃತದೇಹ ಘಟನಾ ನಡೆದ ಸ್ಥಳದಿಂದ ತುಸು ದೂರ ಕಡಲಿನಲ್ಲಿ ಪತ್ತೆಯಾಗಿದೆ.

ಅಜಯ್‌ ಅವರ ಮಾವ ಆನಗಳ್ಳಿಯ ನಿವಾಸಿ ಪ್ರಕಾಶ್‌ ಅವರು ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಕುಂದಾಪುರ ಪೊಲೀಸ್‌ ವೃತ್ತ ನಿರೀಕ್ಷಕ ನಂಜಪ್ಪ, ಎಸ್‌ಐ ಪುಷ್ಪಾ, ಸಿಬಂದಿ ಭೇಟಿ ನೀಡಿದರು.

ಎಚ್ಚರಿಕೆ ನೀಡಿದರೂ ನಿರ್ಲಕ್ಷ್ಯ 
ರಜಾ ದಿನಗಳಲ್ಲಿ ಕಡಲ ತಡಿಗೆ ಆಗಮಿಸುವ ಪ್ರವಾಸಿಗರು ಸ್ಥಳೀಯರು ಎಚ್ಚರಿಕೆ ನೀಡಿದರೂ ಸಮುದ್ರಕ್ಕೆ ಈಜಲು ತೆರಳುವುದರಿಂದ ನೀರು ಪಾಲಾಗುತ್ತಿರುವುದು ಕಂಡು ಬಂದಿದೆ. ರೆಸಾರ್ಟ್‌ ಮಾಲಕರು ಕೂಡ ಅಲ್ಲಿ ತಂಗುವ ಪ್ರತಿಯೋರ್ವ ಪ್ರವಾಸಿಗರಿಗೆ ಸಮುದ್ರಕ್ಕಿಳಿಯದಂತೆ ಸೂಚನೆ ನೀಡಿದರೂ ಸಾಹಸಕ್ಕಿಳಿದು ಜೀವ ಕಳೆದುಕೊಳ್ಳುತ್ತಿರುವ ಇಂತಹ ವಿದ್ಯಮಾನಕ್ಕೆ ಕಡಿವಾಣ ಹೇರಲು ಸಂಬಂಧ ಇಲಾಖೆಗಳ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಊರವರು ಆಗ್ರಹಿಸಿದ್ದಾರೆ.

4 ತಿಂಗಳೊಳಗೆ 2ನೇ ಘಟನೆ
ಬೀಜಾಡಿ ಬೀಚ್‌ನಲ್ಲಿ 4 ತಿಂಗಳಲ್ಲಿ ದೂರದ ಊರಿನಿಂದ ಬಂದ ಪ್ರವಾಸಿಗರು ಈಜಲು ತೆರಳಿ ಸಾವನ್ನಪ್ಪಿದ ಎರಡನೇ ಪ್ರಕರಣ ಇದಾಗಿದೆ. ಕಳೆದ ಜೂನ್‌ನಲ್ಲಿ ಸ್ನೇಹಿತನ ಮದುವೆಗೆಂದು ಬೀಜಾಡಿಗೆ ಬಂದಿದ್ದ ಬೆಂಗಳೂರು ತಿಪಟೂರು ಮೂಲದ ಟಿ.ಆರ್‌. ಯೋಗೀಶ್‌ (23) ಹಾಗೂ ಆತನ ಸ್ನೇಹಿತ ಸಂದೀಪ್‌ (24) ಬೀಜಾಡಿ ಬೀಚ್‌ಗೆ ವಿಹಾರಕ್ಕೆಂದು ತೆರಳಿದ್ದ ವೇಳೆ ಕಡಲಿನ ಅಲೆಗಳ ಅಬ್ಬರಕ್ಕೆ ಸಿಲುಕಿದ್ದು, ಈ ಪೈಕಿ ಸಂದೀಪ್‌ ಅವರನ್ನು ಸ್ಥಳೀಯರು ಪಾರು ಮಾಡಿದ್ದರು. ಯೋಗೀಶ್‌ ಸಾವನ್ನಪ್ಪಿದ್ದರು.

ಟಾಪ್ ನ್ಯೂಸ್

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Naxaliam-End

Naxal Encounter: ದಕ್ಷಿಣ ಭಾರತದಲ್ಲಿ ಇನ್ನುಳಿದಿರುವುದು ಎಂಟೇ ಮಂದಿ ನಕ್ಸಲರು!

Naxal-encounter-Vikram-1

Naxal Encounter: ಬಂಧಿತ ಸುರೇಶ್‌ ಅಂಗಡಿ ಮಾಹಿತಿಯಂತೆ ʼಆಪರೇಷನ್‌ ವಿಕ್ರಂ ಗೌಡʼ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.