Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ
Team Udayavani, Oct 26, 2024, 4:18 PM IST
ಮಡಿಕೇರಿ: ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಣ ಕಾವೇರಿ ನದಿ ನೀರಿನ ಹಂಚಿಕೆ ವಿವಾದ ಆರಂಭಗೊಂಡು ಶತಮಾನ ಪೂರೈಸಿದೆ. ಈ ಸಂಕಷ್ಟದಿಂದ ಜನರು ನೆಮ್ಮದಿಯನ್ನು ಕಳೆೆದುಕೊಂಡಿದ್ದು, ಸುದೀರ್ಘ ಅವಧಿಯಿಂದ ನಡೆದುಕೊಂಡು ಬಂದಿರುವ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕಾಗಿದೆ ಎಂದು ಮೈಸೂರು ಆದಿ ಚುಂಚನಗಿರಿ ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ ತಿಳಿಸಿದ್ದಾರೆ.
ತಲಕಾವೇರಿಯಲ್ಲಿ ಕಾವೇರಿ ನದಿ ರಕ್ಷಣ ಸಮಿತಿಯಿಂದ ಆಯೋಜಿತ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು, ಮಾತೆ ಕಾವೇರಿಗೆ ಪೂಜೆ ನೆರವೇರಿಸಿ, ನದಿ ವಿವಾದ ಪರಿಹಾರಕ್ಕೆ ನೋಂದಾವಣೆ ಮಾಡಿರುವ ಸಮಿತಿಗೆ ಶುಭ ಹಾರೈಸಿ ಅವರು ಮಾತನಾಡಿದರು.
ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ರಾಜ್ಯದ ವಿವಿಧ ಮಠಾಧೀಶರು, ಸರ್ವೋಚ್ಚ ನ್ಯಾಯಾಲಯ ಮತ್ತು ರಾಜ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ನೀರಾವರಿ ತಜ್ಞರು, ಕಾನೂನು ತಜ್ಞರನ್ನು ಒಳಗೊಂಡ ನೂರು ಮಂದಿಯ ವಿಶೇಷ ಸಮಿತಿಯನ್ನು ರಚಿಸಿ ನೋಂದಾವಣೆ ಮಾಡಲಾಗಿದೆ. ಈ ಸಮಿತಿ, ಕಾವೇರಿ ನದಿ ನೀರಿನ ಹಂಚಿಕೆ ವಿವಾದ ಪರಿಹಾರಕ್ಕೆ ಮುಂದಾಗಿರುವುದಾಗಿ ಮಾಹಿತಿ ನೀಡಿದರು. ಕಾವೇರಿ ನದಿ ವಿವಾದ ಪರಿಹಾರಕ್ಕೆ ರಚಿಸಲಾಗಿರುವ ಕಾವೇರಿ ನದಿ ರಕ್ಷಣ ಸಮಿತಿಯನ್ನು ಬೆಂಗಳೂರಿನಲ್ಲಿ ನೋಂದಾವಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.