![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 27, 2024, 2:14 AM IST
ಮಲ್ಪೆ: ಡಾ| ಜಿ. ಶಂಕರ್ ಮಾಲಕತ್ವದ ಕೋಸ್ಟಲ್ ವುಡ್ ರೆಸಾರ್ಟ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಇಲ್ಲಿನ ಪಡುಕರೆ ಶಾಂತಿನಗರ ಕಿನಾರ ಫ್ರೆಂಡ್ಸ್ ಸಹಕಾರದಲ್ಲಿ ಶಾಂತಿನಗರದಲ್ಲಿ ಸುಮಾರು 35 ಲಕ್ಷ ರೂ. ವೆಚ್ಚದಲ್ಲಿ ಸುಂದರವಾಗಿ ನಿರ್ಮಾಣಗೊಂಡ ಸುಸಜ್ಜಿತ ಆಧುನಿಕ ಸಲಕರಣೆಗಳನ್ನೊಳಗೊಂಡ ಫ್ರೆಂಡ್ಸ್ ಪಾರ್ಕ್‌ನ ಉದ್ಘಾಟನ ಸಮಾರಂಭವು ಅ. 26ರಂದು ನಡೆಯಿತು.
ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ನೂತನ ಪಾರ್ಕ್ ಉದ್ಘಾಟಿಸಿ ಶುಭ ಹಾರೈಸಿದರು. ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ| ಜಿ. ಶಂಕರ್, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಉಚ್ಚಿಲ ದಸರಾ ಸಮಿತಿಯ ಅಧ್ಯಕ್ಷ ವಿನಯ ಕರ್ಕೇರ, ಶ್ಯಾಮಿಲಿ ಶಂಕರ್, ಕಾಂಗ್ರೆಸ್ ನಾಯಕ ಪ್ರಸಾದ್‌ರಾಜ್ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಸಮಾಜ ಸೇವಕ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ, ಪರ್ಸಿನ್ ಮೀನುಗಾರರ ಸಂಘದ ಅಧ್ಯಕ್ಷ ನಾಗರಾಜ್ ಸುವರ್ಣ, ಮಲ್ಪೆ ಸೆಂಟ್ರಲ್ ವಾರ್ಡ್‌ನ ನಗರಸಭಾ ಸದಸ್ಯೆ ಎಡ್ಲಿನ್ ಕರ್ಕಡ, ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಜಯಂತ್ ಕೋಡಿ, ಮಾಜಿ ಅಧ್ಯಕ್ಷ ರಾಜೇಂದ್ರ ಸುವರ್ಣ, ಶನೀಶ್ವರ ಪೂಜಾ ಮಂದಿರದ ಅಧ್ಯಕ್ಷ ರವಿ ಕರ್ಕೇರ, ಶಾಂತಿನಗರ ಕಿನಾರ ಫ್ರೆಂಡ್ಸ್‌ನ ಅಧ್ಯಕ್ಷ ಕಿರಣ್, ಸದಸ್ಯರು ಪಾಲ್ಗೊಂಡಿದ್ದರು. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಸುಸಜ್ಜಿತ ಜಿಮ್ ನಿರ್ಮಾಣಗೊಳ್ಳಲಿದೆ.
ಯುವ ಜನತೆಗೆ ಉದ್ಯೋಗ ಪಡುಕರೆ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಜಿಲ್ಲಾಧಿಕಾರಿ, ಶಾಸಕರು ಸೇರಿದಂತೆ ವಿವಿಧ ಅಧಿಕಾರಿಗಳಲ್ಲಿ ಸ್ಥಳೀಯ ಮುಖಂಡರು ಮನವಿ ಮಾಡಿದ್ದರು. ಪ್ರವಾಸೋದ್ಯಮ ಅಭಿವೃದ್ಧಿಯಾದರೆ ಸ್ಥಳೀಯ ಯುವಜನತೆಗೆ ಉದ್ಯೋಗವಕಾಶಗಳು ಸಿಗಲು ಸಾಧ್ಯ. ಜನರ ಜೀವನ ಶೈಲಿ ಬದಲಾಗುವುದರೊಂದಿಗೆ ಆ ಪ್ರದೇಶವು ಅಭಿವೃದ್ಧಿ ಹೊಂದಲಿದೆ ಎಂದು ಶಾಂತಿನಗರದ ನಾಗರಿಕರು ಮತ್ತು ಕಿನಾರ ಫ್ರೆಂಡ್ಸ್‌ನ ಅಧ್ಯಕ್ಷರು ಮನವಿಯಲ್ಲಿ ಒತ್ತಾಯಿಸಿದ್ದರು.
ಆರೋಗ್ಯಪೂರ್ಣ ವಾತಾವರಣ ಆಗಿರಲಿ
ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಈ ಪಾರ್ಕ್ ಹಿರಿಯ ನಾಗರಿಕರು, ಯುವಕರು, ಮಕ್ಕಳನ್ನು ಸೇರಿ ಎಲ್ಲರಿಗೂ ಅನುಕೂಲವಾಗುವ ರೀತಿಯಲ್ಲಿದೆ. ಇಲ್ಲಿ ಪ್ರಕೃತಿಯ ಸೌಂದರ್ಯ ಸವಿಯುವ ಜತೆಗೆ ಆರೋಗ್ಯ ಪೂರ್ಣ ವಾತಾವರಣ ನಿರ್ಮಾಣವಾಗುವಂತಾಗಲಿ ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.