Manipal: ಬೆಳಗ್ಗೆ, ಸಂಜೆ ಚರಂಡಿಗೆ ಉರುಳಿದ ಕಾರು!
ಕೆಳಪರ್ಕಳದಲ್ಲಿ ಮುಗಿಯದ ರಾಷ್ಟ್ರೀಯ ಹೆದ್ದಾರಿ ಗೋಳು
Team Udayavani, Oct 27, 2024, 8:16 AM IST
ಮಣಿಪಾಲ: ಸಮೀಪದ ಈಶ್ವರ ನಗರದ ನಗರಸಭೆಯ ಪಂಪ್ ಹೌಸ್ ಬಳಿ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯಿಂದಾಗಿ ಅಪಘಾತಗಳು ನಿರಂತರವಾಗಿದ್ದು, ರವಿವಾರ ಬೆಳಗ್ಗೆ ಮತ್ತು ರಾತ್ರಿ ಕಾರುಗಳೆರಡು ಚರಂಡಿಗೆ ಉರುಳಿವೆ.
ಬೆಳಗ್ಗೆ ಉಡುಪಿಯಿಂದ ಕುದುರೆಮುಖಕ್ಕೆ ಪ್ರವಾಸ ಹೊರಟಿದ್ದವರ ಕಾರು ಇಲ್ಲಿ ಉರುಳಿಬಿದ್ದಿದೆ. ಪ್ರವಾಸಿಗರು ಅಪಾಯದಿಂದ ಪಾರಾಗಿದ್ದಾರೆ. ರಾತ್ರಿ ವೇಳೆ ತುಳು ಚಿತ್ರ/ರಂಗಭೂಮಿಯ ಕಲಾವಿದರೊಬ್ಬರ ಕಾರು ಅಪಘಾತಕ್ಕೀಡಾಗಿದೆ. ಹಿರೇಬೆಟ್ಟಿನಲ್ಲಿ ನಡೆಯಲಿದ್ದ “ಏರ್ಲಾ ಗ್ಯಾರಂಟಿ ಅತ್ತ್’ ನಾಟಕ ಪ್ರದರ್ಶನಕ್ಕೆ ಅವರು ತಂಡದೊಂದಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಕಲಾವಿದರು ಅಪಾಯದಿಂದ ಪಾರಾಗಿದ್ದಾರೆ.
ಇಲ್ಲಿ ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕವಾಗಿ ಅಡ್ಡವಾಗಿ ರಸ್ತೆ ಆಗೆದಿದ್ದು ಮತ್ತೆ ಹೊಂಡ ಬಿದ್ದಿದೆ, ರಸ್ತೆಯ ಸುತ್ತಮುತ್ತ ಹೊಂಡ ಇರುವುದರಿಂದ ವಾಹನ ಚಾಲಕರು ಅತ್ತಿಂದಿತ್ತ ಚಲಿಸಿ ನಿಯಂತ್ರಣ ತಪ್ಪಿ ಅಪಘಾತವು ದಿನನಿತ್ಯ ಆಗುವಂತಾಗಿದೆ. ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Udupi: ಗೀತೆಯ ಸಂದೇಶ ಪ್ರತೀ ಮನೆಯನ್ನೂ ಪ್ರವೇಶಿಸಲಿ: ಕಾಂಚಿ ಶ್ರೀ
Udupi: ಎಂಜಿಎಂ ಕಾಲೇಜಿನಲ್ಲಿ ನ.29 ರಿಂದ ಡಿ.1ವರೆಗೆ ಅಮೃತ ಮಹೋತ್ಸವ ಸಂಭ್ರಮ
Udupi: ಗೀತಾರ್ಥ ಚಿಂತನೆ-100: ಸತ್ತಾಗ ದುಃಖ, ಸಾಯುತ್ತಿರುವಾಗಲ್ಲ!
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
MUST WATCH
ಹೊಸ ಸೇರ್ಪಡೆ
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.