Shiggaon: ಜಮೀರ್‌ ಅಹಮ್ಮದ್‌ ಖಾನ್‌ ಮನೆಯಲ್ಲೇ ಖಾದ್ರಿಗೆ “ಗೃಹ ಬಂಧನ’?

Team Udayavani, Oct 28, 2024, 6:45 AM IST

Shiggaon: ಜಮೀರ್‌ ಅಹಮ್ಮದ್‌ ಖಾನ್‌ ಮನೆಯಲ್ಲೇ ಖಾದ್ರಿಗೆ “ಗೃಹ ಬಂಧನ’?

ಬೆಂಗಳೂರು: ಶಿಗ್ಗಾಂವಿ ಬಂಡಾಯದ ಬಿಸಿ “ಕೈ’ ಪಾಳೆಯಕ್ಕೆ ತುಸು ಜೋರಾಗಿ ತಟ್ಟುವ ಲಕ್ಷಣಗಳು ಕಾಣುತ್ತಿದ್ದು, ಇದನ್ನು ಶಮನಗೊಳಿಸಲು ಪಕ್ಷದ ನಾಯಕರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಇದರ ಭಾಗವಾಗಿ ಕಾಂಗ್ರೆಸ್‌ ಮುಖಂಡ ಅಜ್ಜಂಪೀರ್‌ ಖಾದ್ರಿ ಅವರನ್ನು ಜಮೀರ್‌ ಅಹಮ್ಮದ್‌ ಖಾನ್‌ ಗೃಹ ಬಂಧನದಲ್ಲಿ ಇರಿಸಿದ್ದಾರೆ ಎನ್ನಲಾಗುತ್ತಿದೆ.

ಯಾಸಿರ್‌ ಅಹಮದ್‌ ಖಾನ್‌ ಪಠಾಣ್‌ ಅವರನ್ನು ಶಿಗ್ಗಾಂವಿಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಘೋಷಿಸಿದ ಬೆನ್ನಲ್ಲೇ ಮುನಿಸಿಕೊಂಡ ಅಜ್ಜಂಪೀರ್‌ ಖಾದ್ರಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇದು ಕಾಂಗ್ರೆಸ್‌ನ ನಿದ್ದೆಗೆಡಿಸಿದೆ.

ಹಾಗಾಗಿ, ಅವರ ಮನವೊಲಿಕೆ ಕಸರತ್ತು ನಡೆದಿದೆ. ಸಚಿವ ಜಮೀರ್‌ ಅಹಮದ್‌ ಖಾನ್‌ ಈ ಪ್ರಯತ್ನ ನಡೆಸಿದ್ದು, ಇದರಿಂದ ಇಡೀ ದಿನ ಖಾದ್ರಿ ಜಮೀರ್‌ ಮನೆಯಲ್ಲೇ ಇರಬೇಕಾಯಿತು. ಅಷ್ಟೇ ಅಲ್ಲ, ನಾಮಪತ್ರ ಹಿಂಪಡೆಯುವ ಕೊನೆಯ ದಿನ (ಅ. 30)ರವರೆಗೂ ಅವರು ಸಚಿವರ ಅತಿಥಿಯಾಗಿಯೇ ಇರಲಿದ್ದಾರೆ. ಅಂದು ನೇರವಾಗಿ ಶಿಗ್ಗಾಂವಿ ಚುನಾವಣಾಧಿಕಾರಿ ಕಚೇರಿಗೆ ತೆರಳಿ ತಮ್ಮ ಉಮೇದುವಾರಿಕೆ ಹಿಂಪಡೆಯಲಿದ್ದಾರೆ ಎನ್ನಲಾಗಿದೆ.

ಹಲವು ಸುತ್ತಿನ ಮಾತುಕತೆ ಬಳಿಕ ಅಜ್ಜಂಪೀರ್‌ ಖಾದ್ರಿ ಅವರ ಮನವೊಲಿಕೆಯಲ್ಲಿ ಕಾಂಗ್ರೆಸ್‌ ನಾಯಕರು ಭಾಗಶಃ ಯಶಸ್ವಿಯಾಗಿದ್ದಾರೆ. ಆದರೆ, ಕ್ಷೇತ್ರಕ್ಕೆ (ಶಿಗ್ಗಾಂವಿಗೆ) ತೆರಳಿದಾಗ ಅಲ್ಲಿ ಹಿಂಪಡೆಯದಿರಲು ಕಾರ್ಯಕರ್ತರ ಒತ್ತಡ ಹೆಚ್ಚಾಗಬಹುದು. ಆಗ ಕೊನೆಯ ಕ್ಷಣದಲ್ಲಿ ಮನಸ್ಸು ಬದಲಿಸಬಹುದು ಎಂಬ ಆತಂಕವೂ ಇದೆ. ಈ ಹಿನ್ನೆಲೆಯಲ್ಲಿ ಅ. 30ರ ವರೆಗೆ ಅಜ್ಜಂಪೀರ್‌ ಖಾದ್ರಿ ಅವರಿಗೆ ಸಚಿವರು ತಮ್ಮ ಮನೆಯಲ್ಲೇ ಆತಿಥ್ಯ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

ಕನ್ನಡದಲ್ಲಿ ಎಂಜಿನಿಯರಿಂಗ್‌ ಓದಲು ಹಿಂದೇಟು! ಕಳೆದ 4 ವರ್ಷಗಳಲ್ಲೂ ಪ್ರವೇಶಕ್ಕೆ ನಿರಾಸಕ್ತಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.