KEA: ಪರೀಕ್ಷೆ ವೇಳೆ ತುಂಬು ತೋಳಿನ ಶರ್ಟ್‌ಗೆ ಕತ್ತರಿ!
ಕೊಪ್ಪಳದಲ್ಲಿ ಮಹಿಳೆಯರ ಮಾಂಗಲ್ಯ, ಓಲೆ ಬಿಚ್ಚಿಸಿ ಪರೀಕ್ಷೆ ; ದಾವಣಗೆರೆಯಲ್ಲಿ ಹಿಜಾಬ್ ತೆಗೆಯಲು ನಿರಾಕರಣೆ
Team Udayavani, Oct 28, 2024, 1:09 AM IST
ಕೊಪ್ಪಳ/ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ನಡೆದ ಗ್ರಾಮ ಆಡಳಿತಾಧಿ ಕಾರಿ ಪರೀಕ್ಷೆ ಅಭ್ಯರ್ಥಿಗಳ ಶರ್ಟ್‌ನ ತುಂಬು ತೋಳನ್ನು ಕತ್ತರಿಸಲಾಗಿದೆ.
ಅಲ್ಲದೆ ಮಹಿಳೆಯರ ಮಾಂಗಲ್ಯ, ಓಲೆಗಳನ್ನು ಬಿಚ್ಚಿಸಿ ಪರೀಕ್ಷಿಸಲಾಗಿದೆ. ಅಲ್ಲದೆ ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದ ಅಭ್ಯರ್ಥಿ ಗಳನ್ನು ಕೇಂದ್ರದ ಹೊರಗಡೆ ನಿಲ್ಲಿಸಲಾಗಿದೆ. ಮಹಿಳೆಯರ ಮಾಂಗಲ್ಯ, ಕೊರಳಲ್ಲಿನ ಆಭರಣದ ಚೈನ್ ಹಾಗೂ ಕಿವಿಯೋಲೆ ಬಿಚ್ಚಿ ಪರೀಕ್ಷೆ ಮಾಡಲಾಗಿದೆ.
ದಾವಣಗೆರೆಯ ಖಾಸಗಿ ಕಾಲೇಜಿನಲ್ಲಿ ಭಾನುವಾರ ಗ್ರಾಮ ಆಡಳಿತ ಅ ಧಿಕಾರಿ ಹುದ್ದೆಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷಾರ್ಥಿ ಯೊಬ್ಬರು ಹಿಜಾಬ್ ತೆಗೆಯಲು ನಿರಾಕರಿಸಿದ್ದಲ್ಲದೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಮುಖ್ಯ ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷಾರ್ಥಿ ಹಿಜಾಬ್ ಧರಿಸಿ ಬಂದಿದ್ದರು.
ಪರೀಕ್ಷಾ ನಿಯ ಮಾನುಸಾರ ಅವಕಾಶ ಇಲ್ಲ ಎಂದು ಪೊಲೀಸರು ತಿಳಿಸಿದರು. ಹಿಜಾಬ್ ತೆಗೆಯಲು ನಿರಾಕರಿಸಿದ್ದಲ್ಲದೆ ವಾಗ್ವಾದ ನಡೆಸಿದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೋಷಕರು ಸಹ ವಾಗ್ವಾದ ನಡೆಸಿದರು. ಹಿರಿಯ ಪೊಲೀಸ್ ಅ ಧಿಕಾರಿಗಳು ಸ್ಥಳಕ್ಕೆ ಅಗಮಿಸಿ ಪರೀಕ್ಷಾ ನಿಯಮಗಳ ಮನವರಿಕೆ ಮಾಡಿಕೊಟ್ಟ ಅನಂತರ ಹಿಜಾಬ್ ತೆಗೆದು ಪರೀಕ್ಷೆ ಬರೆದರು.
ಪರೀಕ್ಷೆಗೆ ಶೇ. 20 ಗೈರು
ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಯ (ವಿಎಒ) 1 ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವಿವಾರ ನಡೆಸಿದ ಲಿಖಿತ ಪರೀಕ್ಷೆ ಗೆ ಶೇ. 80ರಷ್ಟು ಮಂದಿ ಹಾಜರಾಗಿದ್ದರು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಬೆಂಗಳೂರಿನ 88 ಕೇಂದ್ರ ಸೇರಿದಂತೆ ರಾಜ್ಯದ 1,173 ಕೇಂದ್ರಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಪರೀಕ್ಷೆ ನಡೆಯಿತು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಟ್ಟು 4.79 ಲಕ್ಷ ಅಭ್ಯರ್ಥಿಗಳ ಪೈಕಿ 4.16 ಲಕ್ಷ ಮಂದಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡಿದ್ದರು. ಅವರಲ್ಲಿ ಶೇ. 80ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ವಿವರಿಸಿದರು. ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳನ್ನು ಅತಿ ಸೂಕ್ಷ್ಮಎಂದು ಪರಿಗಣಿಸಿದ್ದ ಕಾರಣ ಆ ಜಿಲ್ಲೆಗಳಲ್ಲಿ ಹೆಚ್ಚಿನ ವಿಶೇಷ ನಿಗಾ ವ್ಯವಸ್ಥೆ ಮಾಡಲಾಗಿತ್ತು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.