Hoax Call: ದೇಶದಲ್ಲಿ ಸೋಮವಾರವೂ 60ಕ್ಕೂ ಹೆಚ್ಚು ವಿಮಾನಗಳಿಗೆ ಬೆದರಿಕೆ ಸಂದೇಶ!
ತಿರುಪತಿಯಲ್ಲಿ ಹೋಟೆಲ್‌ಗಳ ಬಳಿಕ ಈಗ ಇಸ್ಕಾನ್ ದೇಗುಲಕ್ಕೂ ಬೆದರಿಕೆ ಸಂದೇಶ!
Team Udayavani, Oct 28, 2024, 10:28 PM IST
ಹೊಸದಿಲ್ಲಿ: ದೇಶದಲ್ಲಿ ಸೋಮವಾರವೂ 60ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ. ಇದರೊಂದಿಗೆ ಕಳೆದ 15 ದಿನಗಳಲ್ಲಿ 415 ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದಂತಾಗಿದೆ. ಭಾರತೀಯ ವಿಮಾನಯಾನ ಸಂಸ್ಥೆಗಳ ಅಂತಾರಾಷ್ಟ್ರೀಯ ಹಾಗೂ ದೇಶೀಯ ವಿಮಾನಗಳಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ 15 ದಿನಗಳಿಂದ ಸತತವಾಗಿ ಹುಸಿ ಬಾಂಬ್ ಬೆದರಿಕೆಗಳು ಬರುತ್ತಿವೆ.
ಇಸ್ಕಾನ್ ದೇಗುಲಕ್ಕೂ ಬೆದರಿಕೆ
ತಿರುಪತಿ: ದೇಶದ ಹಲವು ವಿಮಾನಗಳು, ಪ್ರತಿಷ್ಠಿತ ಹೊಟೇಲ್‌ಗಳಿಗೆ ಹುಸಿ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ ಈಗ ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿನ ಇಸ್ಕಾನ್ ದೇವಾಲಯಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ.
ಈ ಸಂದೇಶದಲ್ಲಿ ಐಸಿಸ್ ಉಗ್ರರು ದೇವಾಲಯವನ್ನು ಸ್ಫೋಟಿಸಲಿದ್ದಾರೆ ಎಂದು ತಿಳಿಸಲಾಗಿದೆ. ಈ ಸಂದೇಶ ಬಂದ ಬೆನ್ನಲ್ಲೇ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳವೂ ಸ್ಥಳಕ್ಕಾಗಮಿಸಿ ಎಲ್ಲೆಡೆ ಶೋಧ ನಡೆಸಿದೆ. ಆದರೆ, ಯಾವುದೇ ಸ್ಫೋಟಕ, ಅನುಮಾನಾಸ್ಪದ ವಸ್ತುಗಳು ಲಭ್ಯವಾಗಿಲ್ಲ. ಇದರೊಂದಿಗೆ ತಿರುಪತಿಯಲ್ಲಿ ಕಳೆದ 3 ದಿನಗಳಿಂದ ಬಂದ 4ನೇ ಬಾಂಬ್ ಬೆದರಿಕೆ ಇದಾಗಿದೆ. ಶನಿವಾರ 2 ಹೊಟೇಲ್‌ಗಳಿಗೂ ಬಾಂಬ್ ಬೆದರಿಕೆ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.