FIR : ಆನ್ಲೈನ್ನಲ್ಲಿ ಪಟಾಕಿ ಮಾರಾಟ ಜಾಹೀರಾತು; ವ್ಯಕ್ತಿ ವಿರುದ್ಧ ಎಫ್ಐಆರ್
Team Udayavani, Oct 29, 2024, 9:58 AM IST
ಬೆಂಗಳೂರು: ಪರವಾನಗಿ ನಿಯಮ ಉಲ್ಲಂ ಸಿ ಆನ್ ಲೈನ್ನಲ್ಲಿ ಪಟಾಕಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನ ವಿರುದ್ಧ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಎಚ್ಎಸ್ಆರ್ ಲೇಔಟ್ನ ಶಿವಾನಂದ ಸ್ಟೋರ್ ಮಾಲಿಕ ಸುಪ್ರೀತ್ ವಿರುದ್ಧ ಪ್ರಕರಣ ದಾಖಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಆರೋಪಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಆರೋಪಿ ಸುಪ್ರೀತ್ ವರ್ಷ ಪೂರ್ತಿ ಪಟಾಕಿ ಮಾರಾಟಕ್ಕೆ ಪರವಾನಗಿ ಪಡೆದುಕೊಂಡಿದ್ದಾರೆ. ಪರವಾನಗಿ ನಿಯಮದ ಪ್ರಕಾರ ಅಂಗಡಿಯಲ್ಲಿ ಮಾತ್ರ ಪಟಾಕಿ ಮಾರಾಟ ಮಾಡಬೇಕು. ಆದರೆ, ಸುಪ್ರೀತ್ ಆನ್ಲೈನ್ನಲ್ಲಿ ಪಟಾಕಿ ಮಾರಾಟದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ನೀಡಿದ್ದರು. ಆನ್ಲೈನ್ನಲ್ಲಿ ಪಟಾಕಿ ಬುಕ್ ಮಾಡಿದರೆ, ಮನೆ ಬಾಗಿಲಿಗೆ ಪಟಾಕಿ ತಂದು ಕೊಡುವುದಾಗಿ ತಿಳಿಸಿದ್ದರು. ಹೀಗಾಗಿ ಪರವಾನಗಿ ನಿಯಮ ಉಲ್ಲಂ ಸಿದ ಆರೋಪದಡಿ ಸುಪ್ರೀತ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.