High Court: ಎಸ್ಟಿಎಸ್ ಪುತ್ರನಿಗೆ ಬ್ಲ್ಯಾಕ್ಮೇಲ್: ಉದ್ಯಮಿ ಮೇಲಿನ ಪ್ರಕರಣ ರದ್ದು
Team Udayavani, Oct 29, 2024, 10:01 AM IST
ಬೆಂಗಳೂರು: ಶಾಸಕ ಎಸ್.ಟಿ.ಸೋಮಶೇಖರ್ ಅವರ ಪುತ್ರ ನಿಶಾಂತ್ ಅವರಿಗೆ ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ಆರೋಪಕ್ಕೆ ಸಂಬಂಧಿ ಸಿದಂತೆ ಉದ್ಯಮಿ ರಾಹುಲ್ ಭಟ್ ವಿರುದ್ಧ ದಾಖ ಲಾದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ ನಗರದ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಲ್ಲಿಕೆಯಾದ ಚಾರ್ಜ್ಶೀಟ್ ರದ್ದುಗೊಳಿಸುವಂತೆ ಕೋರಿ ಬೆಂಗಳೂರಿನ ಆರ್.ಟಿ. ನಗರ ನಿವಾಸಿ ರಾಹುಲ್ ಭಟ್ ಅರ್ಜಿ ಸಲ್ಲಿಸಿದರು. ಈ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ ತೀರ್ಪನ್ನು ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿತು.
ಪ್ರಕರಣದ ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲ ವೆಂಕಟೇಶ್ ದಳವಾಯಿ ವಾದ ಮಂಡಿಸಿ ಅರ್ಜಿದಾರರ ವಿರುದ್ಧ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ಅರ್ಜಿದಾರರ ವಿರುದ್ಧ ಮಾಡಲಾ ಗಿರುವ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾಗಿವೆ. ಆದ್ದರಿಂದ ಪ್ರಕರಣ ರದ್ದುಪಡಿಸುವಂತೆ ಕೋರಿದ್ದರು.
ನಿಶಾಂತ್ ಅವರ ಅಶ್ಲೀಲ ವಿಡಿಯೋ ತಯಾರಿಸಿ ವಾಟ್ಸಾಪ್ ಮೂಲಕ ಕಳುಹಿಸಿ ಆರೋಪಿ ರಾಹುಲ್ ಭಟ್ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾನೆ. ಹಣ ನೀಡದಿದ್ದರೆ ಅಶ್ಲೀಲ ವಿಡಿಯೋವನ್ನು ಜಾಲತಾಣದಲ್ಲಿ ಮತ್ತು ಮಾಧ್ಯಮಗಳಿಗೆ ಹರಿದುಬಿಡುವುದಾಗಿ ಬೆದರಿಕೆ ಹಾಕಿರುವುದಾಗಿ ಶಾಸಕ ಎಸ್. ಟಿ. ಸೋಮಶೇಖರ್ ಆಪ್ತ ಸಹಾಯಕ ಸಿಸಿಬಿ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.