Bantwal: ಪ್ರತೀ ವಾರ ಹೆದ್ದಾರಿ ಪ್ರಗತಿ ಪರಿಶೀಲನೆ

ರಾ. ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ವೇಗ ನೀಡಲು ಸಂಸದ ಕ್ಯಾ| ಬ್ರಿಜೇಶ್‌ ಚೌಟ ಪ್ಲ್ಯಾನ್‌; ಬಂಟ್ವಾಳ, ಪುತ್ತೂರು, ಸುಳ್ಯ ಶಾಸಕರಿಂದಲೂ ಗುತ್ತಿಗೆ ಸಂಸ್ಥೆಗಳು, ಅಧಿಕಾರಿಗಳ ಜತೆ ಚರ್ಚೆ

Team Udayavani, Oct 29, 2024, 12:54 PM IST

1

ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ವೇಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುವುದಾಗಿ ದ.ಕ. ಸಂಸದ ಕ್ಯಾ| ಬ್ರಿಜೇಶ್‌ ಚೌಟ ಮತ್ತು ಹೆದ್ದಾರಿ ಹಾದುಹೋಗುವ ಪ್ರದೇಶದ ಶಾಸಕರಾದ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು, ಅಶೋಕ್‌ ರೈ ಮತ್ತು ಭಾಗೀರಥಿ ಮುರುಳ್ಯ ಹೇಳಿದ್ದಾರೆ.

ಉದಯವಾಣಿ ಸುದಿನದಲ್ಲಿ ಪ್ರಕಟವಾಗುತ್ತಿರುವ ‘ಹೆದ್ದಾರಿ ಕಾಮಗಾರಿ: ಯಾವಾಗ ಮುಗಿಸ್ತೀರಿ?’ ಸರಣಿ ವರದಿಗೆ ಪ್ರತಿಕ್ರಿಯಿಸಿರುವ ನಾಯಕರು, ಕಾಮಗಾರಿ ಪೂರ್ಣಕ್ಕೆ ಡೆಡ್‌ಲೈನ್‌ ವಿಧಿಸುವ ಬಗ್ಗೆಯೂ ಚರ್ಚೆ ನಡೆಸುವುದಾಗಿ ಹೇಳಿದರು.
ಪ್ರತೀ ವಾರ ಸಭೆ: ಕ್ಯಾ| ಬ್ರಿಜೇಶ್‌ ಚೌಟ

ಹೆದ್ದಾರಿ ಕಾಮಗಾರಿಗೆ ವೇಗ ನೀಡುವ ದೃಷ್ಟಿಯಿಂದ ಈಗಾಗಲೇ ದ.ಕ.ಜಿಲ್ಲಾಧಿಕಾರಿಗಳು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜತೆಗೆ ಚರ್ಚೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರತೀ ವಾರ ಅಧಿಕಾರಿಗಳ ಸಭೆ ಕರೆದು ಕಾಮಗಾರಿಯ ಪ್ರಗತಿಯ ವಿವರ ಪಡೆದು ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ದ.ಕ.ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ಭರವಸೆ ನೀಡಿದ್ದಾರೆ.
ವಿಧಾನ ಪರಿಷತ್‌ ಚುನಾವಣೆಯ ನೀತಿಸಂಹಿತೆ ಹಿನ್ನೆಲೆಯಲ್ಲಿ ಕಾಮಗಾರಿಗೆ ಸಂಬಂಧಿಸಿ ಅಧಿಕಾರಿಗಳ ಸಭೆ ನಡೆಸುವುದು ಸಾಧ್ಯವಾಗಿರಲಿಲ್ಲ. ಅದಕ್ಕೂ ಮುನ್ನ ಪ್ರತೀ ವಾರ ಮೀಟಿಂಗ್‌ ನಡೆಸಿ ಕಾಮಗಾರಿಯ ವೇಗದ ಕುರಿತು ಮಾಹಿತಿ ಪಡೆದುಕೊಳ್ಳಲಾಗಿದೆ. ಈಗ ನೀತಿಸಂಹಿತೆ ಮುಗಿದಿದ್ದು, ಮತ್ತೆ ಅಧಿಕಾರಿಗಳಿಂದ ಕಾಮಗಾರಿಯ ಪ್ರಗತಿಯ ವಿವರ ಪಡೆಕೊಳ್ಳಲಿದ್ದೇನೆ ಎಂದು ಸಂಸದರು ಹೇಳಿದರು.

ಈ ಬಾರಿ ಸ್ವಲ್ಪ ಹೆಚ್ಚು ಮಳೆಯಾಗಿದೆ. ಜತೆಗೆ ದೀರ್ಘ‌ ಸಮಯ ಮಳೆಯಾಗಿದೆ. ಹೀಗಾಗಿ ಕಾಮಗಾರಿಯ ವೇಗಕ್ಕೆ ತಡೆ ಬಿದ್ದು, ಒಂದಷ್ಟು ತೊಂದರೆಗಳಾಗಿವೆ. ಜನತೆಗೆ ಹೆಚ್ಚಿನ ಅಡಚಣೆ ಉಂಟಾಗಿರುವ ಕಲ್ಲಡ್ಕ, ಮೆಲ್ಕಾರ್‌, ಮಾಣಿ, ಉಪ್ಪಿನಂಗಡಿ ಭಾಗದಲ್ಲಿನ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿ ವಾಹನಗಳ ಸಾಗಾಟಕ್ಕೆ ಅನುಕೂಲ ಮಾಡುವ ನಿಟ್ಟಿನಲ್ಲಿ ಸೂಚನೆಗಳನ್ನು ನೀಡಲಾಗಿದೆ. ಒಂದಷ್ಟು ಕಡೆಗಳಲ್ಲಿ ಹೆದ್ದಾರಿ ಪಕ್ಕದಲ್ಲೇ ಕಟ್ಟಡಗಳು ಇರುವುದರಿಂದ ಪೂರ್ಣ ಪ್ರಮಾಣದಲ್ಲಿ ಯಂತ್ರೋಪಕರಣಗಳ ಮೂಲಕ ಕಾಮಗಾರಿ ನಡೆಸುವುದಕ್ಕೆ ಸಾಧ್ಯವಾಗದೆ ವಿಳಂಬವಾಗಿರಬಹುದು ಎಂದು ಸಂಸದರು ಹೇಳಿದರು.

ಮುಂದಿನ ದಿನಗಳಲ್ಲಿ ಎಲ್ಲ ರೀತಿಯಿಂದಲೂ ಕಾಮಗಾರಿಯ ವೇಗವನ್ನು ಹೆಚ್ಚಿಸಲು ಪ್ರಯತ್ನ ಮಾಡುವ ಜತೆಗೆ ಜನತೆಗೆ ತೊಂದರೆಯಾಗದಂತೆ ನಿಗಾ ಇರಿಸುವ ನಿಟ್ಟಿನಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ದೀಪಾವಳಿ ಹಬ್ಬದ ಬಳಿಕ ಮತ್ತೂಮ್ಮೆ ಎಲ್ಲಾ ಅಧಿಕಾರಿಗಳ ಜತೆಗೆ ಸಭೆ ನಡೆಸಿ ಕಾಮಗಾರಿ ಪೂರ್ಣಗೊಳಿಸುವುದಕ್ಕೆ ಡೆಡ್‌ಲೈನ್‌ ನಿಗದಿ ಮಾಡುವ ಪ್ರಯತ್ನ ಮಾಡಲಾಗುವುದು ಎಂದು ಸಂಸದರು ವಿವರಣೆ ನೀಡಿದ್ದಾರೆ.

ಮಾರ್ಚ್‌ ಅಂತ್ಯಕ್ಕೆ ಬಹುತೇಕ ಪೂರ್ಣ
ಕಾಮಗಾರಿಯ ವೇಗವನ್ನು ಹೆಚ್ಚಿ ಸುವ ದೃಷ್ಟಿಯಿಂದ ಈಗಾಗಲೇ ಅಧಿಕಾರಿಗಳು ಹಾಗೂ ಗುತ್ತಿಗೆ ಸಂಸ್ಥೆಯ ಪ್ರಮುಖರ ಜತೆಗೆ ಚರ್ಚೆ ನಡೆಸಲಾಗಿದ್ದು, 2025ರ ಮಾರ್ಚ್‌ ಅಂತ್ಯದೊಳಗೆ ಬಹುತೇಕ ಅಂದರೆ ಶೇ. 90ರಷ್ಟು ಕಾಮಗಾರಿಯನ್ನು ಮುಗಿಸಿಕೊಡುವ ಭರವಸೆ ನೀಡಿ ದ್ದಾರೆ. ಕೆಲವೊಂದು ಕಡೆ ಜಾಗದ ಸಮಸ್ಯೆಯಿಂದ 5-10 ಶೇ. ಕಾಮಗಾರಿಗೆ ವಿಳಂಬವಾದರೂ, ಅದನ್ನೂ ಮುಗಿಸುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ. ಮುಂದೆ ಕಾಮಗಾರಿಯು ವೇಗ ಪಡೆಯಲಿದ್ದು, ಮಾರ್ಚ್‌ ಅಂತ್ಯಕ್ಕೆ ಪೂರ್ಣಗೊಳ್ಳುವ ವಿಶ್ವಾಸವಿದೆ.
-ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು, ಶಾಸಕರು, ಬಂಟ್ವಾಳ

ಅಧಿಕಾರಿಗಳ ಜತೆ ಸ್ಥಳ ಪರಿಶೀಲನೆ
ಉದಯವಾಣಿ ಸುದಿನ ಅಭಿಯಾನದ ಹಿನ್ನೆಲೆಯಲ್ಲಿ ಹೆದ್ದಾರಿ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜತೆ ನೆಕ್ಕಿಲಾಡಿ ಬಳಿ ಸ್ಥಳ ಪರಿಶೀಲನೆ ನಡೆಸಿದ್ದೇನೆ. ಅಲ್ಲಿನ ಸಮಸ್ಯೆಗಳ ಬಗ್ಗೆ ಅವರ ಗಮನಕ್ಕೆ ತಂದಿದ್ದು, ಡಿಸೆಂಬರ್‌ ಒಳಗಾಗಿ ಬಹುತೇಕ ಸಮಸ್ಯೆ ನಿವಾರಿಸುವ ಭರವಸೆ ನೀಡಿದ್ದಾರೆ. ಒಂದು ಕಡೆ ಕಾಮಗಾರಿಗೆ ವೇಗ ನೀಡಬೇಕು, ಇನ್ನೊಂದು ಕಡೆ ಕಾಮಗಾರಿಯಿಂದ ಈಗ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು. ಎರಡೂ ಕೆಲಸಗಳನ್ನು ಸರಿದೂಗಿಸಿ ಕೊಂಡು ಹೋಗಲು ತಿಳಿಸಲಾಗಿದೆ. ಚರಂಡಿ ಸಮಸ್ಯೆ, ಧೂಳು ಸಮಸ್ಯೆ ತತ್‌ಕ್ಷಣ ನಿವಾರಿಸುವಂತೆ ಸೂಚಿಸಿದ್ದೇನೆ.
-ಅಶೋಕ್‌ ಕುಮಾರ್‌ ರೈ, ಶಾಸಕರು, ಪುತ್ತೂರು

ಪೆರಿಯಶಾಂತಿಗೆ ಭೇಟಿ ಇಂದು
ಉದಯವಾಣಿ ಸುದಿನದಲ್ಲಿ ಪ್ರಕಟವಾಗು ತ್ತಿರುವ ಸರಣಿ ವರದಿಗಳನ್ನು ಗಮನಿಸಿದ್ದೇನೆ. ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಸಾರ್ವಜನಿ ಕರ ಅಹವಾಲನ್ನು ಪಡೆದು ಈಗಾ ಗಲೇ ಸಂಸದರು, ಕೇಂದ್ರ ಸಚಿವರ ಜತೆ ಮಾತನಾಡಿದ್ದೇನೆ. ನಿಧಾನ ಕಾಮಗಾರಿ, ಸಮಸ್ಯೆಗಳ ಬಗ್ಗೆ ಚರ್ಚಿಸಿ ವೇಗ ನೀಡಲಾಗುವುದು. ಮಂಗಳವಾರ ಪೆರಿಯಶಾಂತಿಗೆ ಭೇಟಿ ನೀಡಿ ಹೆದ್ದಾರಿ ಕಾಮಗಾರಿ ವೀಕ್ಷಿಸಿ ಮಾಹಿತಿ ಪಡೆಯುವೆ. ಕಾಮಗಾರಿ ಗಡುವಿನೊಳಗೆ ಮುಗಿದು ಸಂಚಾರ ಸುಗಮಗೊಳಿಸಲು ಪ್ರಯತ್ನಿಸಲಾಗುವುದು.
-ಭಾಗೀರಥಿ ಮುರುಳ್ಯ, ಶಾಸಕರು, ಸುಳ್ಯ

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

5-vitla

Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.