ಗದಗ: ಜನಮಾನಸದಲ್ಲಿ ಅಚ್ಚಳಿಯದ ರಾಣಿ ಚನ್ನಮ್ಮ
Team Udayavani, Oct 29, 2024, 4:40 PM IST
■ ಉದಯವಾಣಿ ಸಮಾಚಾರ
ಗದಗ: ಬ್ರಿಟಿಷರ ವಿರುದ್ಧ ರಣಚಂಡಿಯಾಗಿ ಹೋರಾಟ ನಡೆಸಿ ಕಿತ್ತೂರು ಸಂಸ್ಥಾನದ ಸ್ವಾಭಿಮಾನ, ನಾಡಪ್ರೇಮವನ್ನು ದೇಶದ ಸ್ವಾತಂತ್ರ್ಯ ಪ್ರಿಯರಿಗೆ ತೋರಿಸಿಕೊಟ್ಟ ರಾಣಿ ಚನ್ನಮ್ಮ ಜನಮಾನದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಎಂದು ಉಪನ್ಯಾಸಕ
ಎಸ್.ಎ. ಆವಾರಿ ಹೇಳಿದರು.
ನಗರದ ತೋಂಟದ ಸಿದ್ಧಲಿಂಗ ಶ್ರೀಗಳ ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜರುಗಿದ ಸಾಹಿತ್ಯ ಸಿಂಚನ ಮಾಲಿಕೆಯಲ್ಲಿ ಮಾತನಾಡಿದ ಅವರು, ಕಿತ್ತೂರು ರಾಣಿ ಚನ್ನಮ್ಮ ಕಾಕತಿ ದೇಸಾಯಿ ಧೂಳಪ್ಪಗೌಡ ಹಾಗೂ ಪದ್ಮಾವತಿ ದಂಪತಿಯ ಪುತ್ರಿಯಾಗಿ 1778ರಲ್ಲಿ ಜನಿಸಿದರು.
ಧೂಳಪ್ಪಗೌಡ ದೇಸಾಯಿ ಯುದ್ಧ ಕಲೆಯಲ್ಲಿ ನಿಪುಣರಾಗಿದ್ದರು. ಅವರು ತಮ್ಮ ಮಗಳಿಗೆ ಸರ್ವ ವಿದ್ಯೆಯನ್ನೂ ಕಲಿಸಿದ್ದರು. ರಾಜಕಳೆಯ ಹೆಣ್ಣು ಮಗುವೇ ಮುಂದೆ ಕಿತ್ತೂರು ಮಹಾಸಂಸ್ಥಾನದ ಮಹಾರಾಣಿ ಪಟ್ಟ ವಹಿಸಿಕೊಂಡು ಕಿತ್ತೂರು ನಾಡನ್ನು ಸಮೃದ್ಧ ನಾಡಾಗಿ ಬೆಳೆಸಿದರು ಎಂದರು.
ಬ್ರಿಟಿಷರು ಭಾರತದಲ್ಲಿ ಕಾಲೂರುವ ಸಮಯದಲ್ಲಿ ಇಲ್ಲಿಯ ರಾಜಕೀಯ ಪರಿಸ್ಥಿತಿ ವಿಲಕ್ಷಣವಾಗಿತ್ತು. ಉತ್ತರ ಹಿಂದೂಸ್ಥಾನದಲ್ಲಿ ಮೊಘಲ ಬಾದಶಾಹಿ ದುರ್ಬಲವಾಗಿತ್ತು. ದಕ್ಷಿಣದಲ್ಲಿ ಸ್ವರಾಜ್ಯದ ವಿಸ್ತರಣೆಗಾಗಿ ಹೋರಾಡುತ್ತಿದ್ದ ಪೇಶ್ವೆ, ಆಕ್ರಮಣಕಾರಿ ಧೋರಣೆಯ ಹೈದರಾಬಾದಿನ ನಿಜಾಮಶಾಹಿ ಹಾಗೂ ಮೈಸೂರಿನ ಹೈದರ್ ಅಲಿ, ಇವರೆಲ್ಲರ ನಡುವೆ ತಮ್ಮ ಉಳಿವಿಗಾಗಿ ಹೋರಾಡುತ್ತಿದ್ದ ಚಿಕ್ಕಪುಟ್ಟ ಪಾಳೆಗಾರರು ಇಂತಹ ರಾಜಕೀಯ ಪರಿಸ್ಥಿತಿ ಧೂರ್ತ, ಕ್ರೂರ ಧೋರಣೆಯ ಬ್ರಿಟಿಷರ
ಈಸ್ಟ್ ಇಂಡಿಯಾ ಕಂಪನಿಗೆ ಸುವರ್ಣಾವಕಾಶವನ್ನು ಒದಗಿಸಿತ್ತು.
ಇಂತಹ ಸಮಯದಲ್ಲಿ ಮಲ್ಲಸಜ್ಜನ ದೊರೆಯನ್ನು ಟಿಪ್ಪು ಸುಲ್ತಾನ್ ಸೆರೆ ಹಿಡಿದು ಕಪಾಲದುರ್ಗದಲ್ಲಿ ಸೆರೆಯಿಟ್ಟಿದ್ದನು.
ಉಪಾಯದಿಂದ ತಪ್ಪಿಸಿಕೊಂಡ ದೊರೆ 1803ರಲ್ಲಿ ವೆಲ್ಲೆಸ್ಲಿಗೆ ನೆರವು ನೀಡಿ ಕಿತ್ತೂರನ್ನು ಭದ್ರಗೊಳಿಸಿದ್ದನ್ನು ಸ್ಮರಿಸಿದರು.
ವಿಶ್ರಾಂತ ಉಪನ್ಯಾಸಕ ಬಿ.ಎಸ್. ಮಾನೇದ ಮಾತನಾಡಿ, ದೇಶದ ಸ್ವಾತಂತ್ರ್ಯ ಸಂಗ್ರಾಮದ 1857ರ ಸಿಪಾಯಿ ದಂಗೆಯೇ ಮೊದಲನೆಯ ದಂಗೆ ಎಂದು ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಅದಕ್ಕೂ ಮುಂಚೆ ಅಂದರೆ 1824ರಲ್ಲಿಯೇ ಕಿತ್ತೂರ ರಾಣಿ ಚನ್ನಮ್ಮ ತನ್ನ ಚಿಕ್ಕ ಸೈನ್ಯದ ಜತೆಗೂಡಿ ದೈತ್ಯ ಬ್ರಿಟಿಷ್ ಸೈನ್ಯದ ವಿರುದ್ಧ ಹೋರಾಡಿ ಸ್ವಾತಂತ್ರ್ಯ ಹೋರಾಟದ ಬೆಳ್ಳಿಚುಕ್ಕಿಯಾಗಿ ಮಿಂಚಿದ್ದರು.
ಅವರ ಸಂಯಮ, ಔದಾರ್ಯತೆ, ನಿಷ್ಠೆ ಇಂದಿನ ಮಹಿಳೆಯರಿಗೆ ಮಾದರಿಯಾಗಿದೆ ಎಂದರು. ಕಸಾಪ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕೆ.ಎಚ್. ಬೇಲೂರ, ಡಾ| ಧನೇಶ ದೇಸಾಯಿ, ಡಾ| ಜಿ.ಬಿ. ಪಾಟೀಲ,
ಸಿದ್ಧಲಿಂಗೇಶ ಸಜ್ಜನಶೆಟ್ಟರ, ಸಿ.ಎಂ. ಮಾರನಬಸರಿ, ಆರ್.ಡಿ. ಕಪ್ಪಲಿ, ಲಿಂಗನಗೌಡ ಪಾಟೀಲ, ಡಿ.ಎಸ್. ಬಾಪೂರಿ ಇದ್ದರು. ಶ್ರೀಕಾಂತ ಬಡ್ನೂರ ಸ್ವಾಗತಿಸಿದರು. ಶಿವಾನಂದ ಗಿಡ್ನಂದಿ ನಿರೂಪಿಸಿದರು. ರಕ್ಷಿತಾ ಗಿಡ್ನಂದಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.