Forest Land: ಯಶ್ ಅಭಿನಯದ ʼಟಾಕ್ಸಿಕ್ʼ ಚಿತ್ರೀಕರಣಕ್ಕಾಗಿ ಪರಿಸರ ನಾಶಗೈದ ಚಿತ್ರ ತಂಡ?
ಅಕ್ರಮ ಕೃತ್ಯಗೈದವರ ವಿರುದ್ಧ ತಕ್ಷಣವೇ ಕಠಿನ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದ ಅರಣ್ಯ ಸಚಿವ ಖಂಡ್ರೆ
Team Udayavani, Oct 29, 2024, 7:52 PM IST
ಬೆಂಗಳೂರು: ನಟ, ರಾಕಿಂಗ್ ಸ್ಟಾರ್ ಯಶ್ ಅಭಿನಯದ ʼಟಾಕ್ಸಿಕ್ʼ ಚಿತ್ರ ತಂಡವು ಚಿತ್ರೀಕರಣಕ್ಕಾಗಿ ಎಚ್.ಎಂ.ಟಿ. ವ್ಯಾಪ್ತಿಯ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ನೂರಾರು ಮರಗಳನ್ನು ಕಡಿದು ಹಾನಿಗೊಳಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಎಚ್. ಎಂ.ಟಿ. ವ್ಯಾಪ್ತಿಯಲ್ಲಿನ ಅರಣ್ಯ ಭೂಮಿಯಲ್ಲಿ ಮರಗಳ ಕಡಿದಿರುವುದು ಸ್ಯಾಟಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದೆ. ಈ ಉಪಗ್ರಹ ತೆಗೆದಿರುವ ಚಿತ್ರದಲ್ಲಿ ‘ಟಾಕ್ಸಿಕ್’ ಚಿತ್ರದ ಚಿತ್ರೀಕರಣಕ್ಕೆ ಸೆಟ್ ಹಾಕಲು ನೂರಾರು ಮರಗಳ ಮಾರಣಹೋಮ ಆಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಮೊದಲು ಹಸಿರು ತುಂಬಿದ ಭೂಮಿ ಹಾಗೂ ನೂರಾರು ಮರಗಳಿರುವುದು ಚಿತ್ರದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಚಿತ್ರೀಕರಣ ಬಳಿಕ ಮರಗಳಿಲ್ಲದೇ ಖಾಲಿ ಪ್ರದೇಶವಾಗಿರುವುದು ಚಿತ್ರದಲ್ಲಿ ಕಾಣಬಹುದಾಗಿದೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಪರಿಶೀಲನೆ ವೇಳೆ ಬಹಿರಂಗ:
ಎಚ್. ಎಂ.ಟಿ. ಅರಣ್ಯ ಭೂಮಿ ವ್ಯಾಪ್ತಿ ಪ್ರದೇಶದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪರಿ ವೀಕ್ಷಣೆ ವೇಳೆ 6 ತಿಂಗಳ ಹಿಂದಿನ ಉಪಗ್ರಹ ಚಿತ್ರ ಹಾಗೂ ಈಗಿನ ಉಪಗ್ರಹ ಚಿತ್ರಗಳ ಪರಿಶೀಲಿಸಿದಾಗ ಕೇವಲ ನೂರಾರು ಮರಗಳಲ್ಲ, ಸಾವಿರಾರು ಮರಗಳು ನಾಶವಾಗಿರುವುದು ಕಂಡು ಬಂದಿದೆ. ಈ ವಿಚಾರವಾಗಿ ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಚಿವರು ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.
ಕಠಿನ ಕ್ರಮಕ್ಕೆ ಬದ್ಧ : ಸಚಿವ ಖಂಡ್ರೆ
ಈ ವಿಚಾರ ಬಗ್ಗೆ ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳು ಚಿತ್ರೀಕರಣಕ್ಕೆ ಅವಕಾಶ ನೀಡಿದ್ರೆ ಅವರ ಮೇಲೂ ಶಿಸ್ತು ಕ್ರಮ ಕೈಗೊಳ್ಳಬೇಕು ಅಥವಾ ಅಧಿಕಾರಿಗಳ ಗಮನಕ್ಕೆ ಬಾರದೇ ಮರಗಳ ಕಡಿದಿದ್ದರೂ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದ್ದು, ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡು ಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದು ಎಕ್ಸ್ ಖಾತೆಯಲ್ಲಿ ಸಚಿವ ಖಂಡ್ರೆ ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.