Waqf Notice: ರಾಜ್ಯ ಸರ್ಕಾರದ ಹುನ್ನಾರದಿಂದ ರೈತರಿಗೆ ಈ ಬಾರಿ ಕರಾಳ ದೀಪಾವಳಿ!
ರಾಜ್ಯ ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ಅಹೋರಾತ್ರಿ ಹೋರಾಟ
Team Udayavani, Oct 29, 2024, 10:39 PM IST
ವಿಜಯಪುರ: ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಎಂದು ನಮೂದಾಗಿರುವುದು ಖಂಡಿಸಿ ಅಖಂಡ ಕರ್ನಾಟಕ ರೈತ ಸಂಘ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮಂಗಳವಾರ ಅಹೋರಾತ್ರಿ ಹೋರಾಟ ಆರಂಭಿಸಿದೆ.
ವಿಜಯಪುರ ಜಿಲ್ಲಾಧಿಕಾರಿ ಕಚೇರಿಗಳ ಆವರಣದಲ್ಲಿ ರೈತ ಮುಖಂಡರು ದೀಪ ಹಚ್ಚಿ ಧರಣಿ ಕುಳಿತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಕ್ಫ್ ಸಚಿವ ಜಮೀರ್ ಭಾವಚಿತ್ರ ಪ್ರದರ್ಶಿಸಿ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಜಿಲ್ಲೆಯಲ್ಲಿ ವಕ್ಫ್ ಆಸ್ತಿ ವಿಚಾರವಾಗಿ ರೈತರಿಗೆ ನೋಟಿಸ್ ಜಾರಿ ಮಾಡಿದ್ದು ಮತ್ತು ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದೆ. ಇದು ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ರೈತರು ನಿರಂತರವಾಗಿ ಪ್ರತಿಭಟನೆಗಳ ಮಾಡುತ್ತಿದ್ದಾರೆ. ಇದೀಗ ಕತ್ತಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೇ ದೀಪಾವಳಿ ಆಚರಣೆಗೆ ನಿರ್ಧಾರ ಮಾಡಿದ್ದಾರೆ. ಮಂಗಳವಾರ ಸಂಜೆ ನಗರದಲ್ಲಿ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಡಿಸಿ ಕಚೇರಿವರೆಗೂ ಮೆರವಣಿಗೆಯಲ್ಲಿ ಬಂದರು.
ರಸ್ತೆ ಬಂದ್‌ಗೊಳಿಸಿ ಪ್ರತಿಭಟನೆ:
ಈ ವೇಳೆ, ವಿಜಯಪುರ-ಅಥಣಿ ರಸ್ತೆಯಲ್ಲಿ ರೈತರು ಕೆಲಕಾಲ ಬಂದ್ ಮಾಡಿ ಪ್ರತಿಭಟಿಸಿದರು. ಪೊಲೀಸರು ಮನವೊಲಿಕೆಗೆ ಪ್ರಯತ್ನಿಸಿದರು. ಆದರೂ, ರೈತರು ಪ್ರತಿಭಟನೆ ಆರಂಭಿಸಿದ್ದಾರೆ. ಸರ್ಕಾರದ ಹುನ್ನಾರದಿಂದ ರೈತರಿಗೆ ಈ ಬಾರಿ ಕರಾಳ ದೀಪಾವಳಿ ಎದುರಾಗಿದೆ. ರೈತರು ದೀಪಾವಳಿ ಆಚರಣೆ ಮಾಡಲ್ಲ. ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ತೆಗೆಯಬೇಕು. ಭವಿಷ್ಯದಲ್ಲಿ ರೈತರಿಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಸರ್ಕಾರ ಕ್ರಮ ವಹಿಸಬೇಕು ಎಂದು ಮುಖಂಡರಾದ ಅರವಿಂದ ಕುಲಕರ್ಣಿ, ಸಂಗಮೇಶ ಸಗರ, ರಾಮನಗೌಡ ಪಾಟೀಲ ಹಾಗೂ ಮತ್ತಿತರರು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.