Udupi: ಇಂದ್ರಾಳಿ ಮೇಲ್ಸೇತುವೆ: ಜ. 15 ರೊಳಗೆ ಮುಗಿಸಲು ಗಡುವು
ಪೊಲೀಸ್ ಠಾಣೆಯಲ್ಲಿ ಗಡುವಿಗೆ ಸಮ್ಮತಿಸಿ ಗುತ್ತಿಗೆದಾರರಿಂದ ಮುಚ್ಚಳಿಕೆ
Team Udayavani, Oct 30, 2024, 6:53 AM IST
ಉಡುಪಿ: ಐದು ವರ್ಷಗಳಿಂದ ಬಹುತೇಕ ಸ್ಥಗಿತಗೊಂಡಂತಿದ್ದ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಗೆ ಈಗ ಜೀವ ಬಂದಿದ್ದು, 2025ರ ಜನವರಿ 15 ರೊಳಗೆ ಮುಗಿಯುವ ಸಾಧ್ಯತೆ ಗೋಚರಿಸಿದೆ.
ಈ ಸಂಬಂಧ ಕಾಮಗಾರಿ ಕೈಗೊಂಡಿರುವ ಗುತ್ತಿಗೆದಾರರು ಮುಚ್ಚಳಿಕೆಯನ್ನೂ ಬರೆದು ಕೊಟ್ಟಿದ್ದಾರೆ. ರೈಲ್ವೇ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ನಡುವಿನ ಗೊಂದಲವೂ ಕಾಮಗಾರಿ ವಿಳಂಬಕ್ಕೆ ಕಾರಣವಾಗಿತ್ತು.ಗರ್ಡರ್ ಬಂದು ತಿಂಗಳುಗಳು ಕಳೆದಿದ್ದರೂ ಕಾಮಗಾರಿ ಆರಂಭವಾಗಿರಲಿಲ್ಲ. ಈ ಪರಿಸರದಲ್ಲಿ ಅಪಘಾತಗಳೂ ಹೆಚ್ಚಾಗಿವೆ.
ಇವೆಲ್ಲದರಿಂದ ಆಕ್ರೋಶಗೊಂಡ ಸಾರ್ವಜನಿಕರೇ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳೂ ಎಚ್ಚೆತ್ತು ಗುತ್ತಿಗೆದಾರರಿಗೆ ಗಡುವು ವಿಧಿಸಿದ್ದಾರೆ.
ಸುಮಾರು 420 ಟನ್ ಸ್ಟೀಲ್‌ಗಳಿಂದ ಸಿದ್ಧವಾದ ಗರ್ಡರ್ ಬಳಸಿ ಸುಮಾರು 58 ಮೀಟರ್ ಉದ್ದದ ಸೇತುವೆ ನಿರ್ಮಿಸಲಾಗುತ್ತಿದೆ. ಇದು 12.50 ಮೀಟರ್ ಅಗಲ ಇರಲಿದ್ದು, ಸೇತುವೆಯ ಎರಡೂ ಬದಿಗಳಲ್ಲಿ 1.50 ಮೀಟರ್ ಅಗಲದ ಪಾದಚಾರಿ ಮಾರ್ಗ ಬರಲಿದೆ. ಎಲ್ಲ ಪರಿಕರಗಳು ಇಂದ್ರಾಳಿಗೆ ಬಂದು ಬಿದ್ದಿದ್ದು, ಜೋಡಣೆ ಕಾರ್ಯ ಮಾತ್ರ ಬಾಕಿಯಿದೆ.
ಕಾಮಗಾರಿಯನ್ನು ಮುಂದಿನ ಜ.15ರೊಳಗೆ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತ ಮಾಡಬೇಕು ಎಂದು ನಗರ ಸಂಚಾರ ಠಾಣೆಯಲ್ಲಿ ಗುತ್ತಿಗೆ ದಾರರಿಂದ ಮುಚ್ಚಳಿಕೆಯನ್ನು ಬರೆ ಸಿಕೊಳ್ಳಲಾಗಿದೆ. ಗಡುವು ಮೀರಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಎಚ್ಚರಿಕೆಯನ್ನೂ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ನೀಡಿದ್ದಾರೆ.
ವೆಲ್ಡಿಂಗ್ ವರ್ಕ್: ಸೇತುವೆ ಸಂಬಂಧ ವೆಲ್ಡಿಂಗ್ ವರ್ಕ್ ಪೂರೈಸಲೇ ಹೆಚ್ಚು ಕಾಲಾವಕಾಶ ಬೇಕು. ರೈಲ್ವೇಯಿಂದ ಮಾನ್ಯತೆ ಪಡೆದ ಸಂಸ್ಥೆಯೇ ಕಾಮಗಾರಿ ನಡೆಸುತ್ತಿದ್ದು, ಪ್ರತಿಯೊಂದಕ್ಕೂ ಪ್ರತ್ಯೇಕ ಅನುಮತಿ ಪಡೆಯಬೇಕಿದೆ. ರೈಲ್ವೆ ಅಧಿಕಾರಿಗಳು ಖುದ್ದು ಪರಿಶೀಲನೆಯ ಬಳಿಕ ಗುತ್ತಿಗೆದಾರರು ಕಾಮಗಾರಿ ಮುಂದುವರಿಸಬೇಕಿದೆ.
ಐದು ವರ್ಷ : ಶೂನ್ಯ ಸಂಪಾದನೆ
ಹಿಂದಿನ ಐದು ವರ್ಷ ಕಾಮಗಾರಿಯಲ್ಲಿ ಹೇಳಿಕೊಳ್ಳುವಂಥದ್ದೇನೂ ಆಗಲಿಲ್ಲ. ಕ್ಷೇತ್ರದ ಸಂಸದರೇ ಕೇಂದ್ರ ಸಚಿವರೂ ಆಗಿದ್ದರು. ಆದರೂ ಕಾಮಗಾರಿಯ ಒಂದು ಕಲ್ಲೂ ಸಹ ಅತ್ತಿತ್ತ ಸರಿದಿರಲಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ರೈಲ್ವೆ ಇಲಾಖೆಗಳೆರಡೂ ಒಂದೇ ಕೇಂದ್ರ ಸರಕಾರದಡಿ ಕಾರ್ಯ ನಿರ್ವಹಿಸಿದರೂ ಕಾಮಗಾರಿಗೆ ವೇಗ ಸಿಕ್ಕಿರಲಿಲ್ಲ. ಎರಡೂ ಇಲಾಖೆಗಳ ನಡುವಿನ ಗೊಂದಲ, ವಿಳಂಬದಿಂದ ಸಾರ್ವಜನಿಕರು ಸಂಕಷ್ಟಕ್ಕೀಡಾಗಿದ್ದರು. ಐದು ವರ್ಷಗಳ ಹಿಂದೆಯೇ ಈ ಕಾಮಗಾರಿ ಮುಗಿದು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಿತ್ತು. ಆದರೆ ಈ ಬಗ್ಗೆ ಸ್ಥಳೀಯ ಸಂಸದರೇ ಕೇಂದ್ರ ಸಚಿವರಾಗಿದ್ದಾಗಲೂ ಯಾವ ಪ್ರಯೋಜನವೂ ಆಗಿರಲಿಲ್ಲ ಎಂಬುದು ಸಾರ್ವಜನಿಕರ ಅಭಿಪ್ರಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.