Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ
ಅನುಮತಿ ಪಡೆಯದೆ ಮರ ಕಡಿದ ಚಿತ್ರತಂಡದ ಮೇಲೂ ಕೇಸ್‌ಗೆ ಸೂಚನೆ, ಪೀಣ್ಯದಲ್ಲಿರುವ ಎಚ್‌ಎಂಟಿ ಅರಣ್ಯ ಪ್ರದೇಶ
Team Udayavani, Oct 30, 2024, 7:55 AM IST
ಬೆಂಗಳೂರು: ಎಚ್‌ಎಂಟಿ ಅನುಭೋಗದಲ್ಲಿರುವ ಅರಣ್ಯ ಭೂಮಿಯಲ್ಲಿ ಯಶ್ ಅಭಿನಯದ “ಟಾಕ್ಸಿಕ್’ ಎಂಬ ಸಿನಿಮಾ ಚಿತ್ರೀಕರಣ ನಡೆದಿದ್ದು, ಇದಕ್ಕಾಗಿ ನೂರಾರು ಗಿಡ-ಮರಗಳನ್ನು ಕಡಿಯಲಾಗಿದೆ. ಇದಕ್ಕೆ ಅನುಮತಿ ನೀಡಿದ ಅಧಿಕಾರಿ ಅಥವಾ ಅನುಮತಿ ಪಡೆಯದೆ ಮರ ಕಡಿದ ಚಿತ್ರತಂಡದ ವಿರುದ್ಧ ಅರಣ್ಯ ಅಪರಾಧ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಎಚ್‌ಎಂಟಿಗೆ ಭೇಟಿ ನೀಡಿ, ಪುನಶ್ಚೇತನದ ಬಗ್ಗೆ ಘೋಷಿಸಿದಾಗಿನಿಂದಲೂ ಅದು ಅರಣ್ಯ ಭೂಮಿ ಎಂದು ಪ್ರತಿಪಾದಿಸುತ್ತಲೇ ಬಂದಿರುವ ಸಚಿವ ಖಂಡ್ರೆ, ಮಂಗಳವಾರ ಪೀಣ್ಯ ಪ್ಲಾಂಟೇಶನ್ 1 ಮತ್ತು 2ರಲ್ಲಿನ ಎಚ್‌ಎಂಟಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದಿನದ ಆಧಾರದ ಮೇಲೆ ಬಾಡಿಗೆ:
ಬಳಿಕ ಈ ಕುರಿತು ಪ್ರಕಟಣೆ ನೀಡಿರುವ ಅವರು, ಎಚ್‌ಎಂಟಿ ಅನುಭೋಗದಲ್ಲಿರುವ ಜಾಗವು ಅರಣ್ಯ ಇಲಾಖೆಗೇ ಸೇರಿದ್ದು. ತನ್ನ ಸ್ವಾಧೀನದಲ್ಲಿರುವ ಈ ಭೂಮಿಯನ್ನು ವಿವಿಧ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳಿಗೆ ಅಕ್ರಮವಾಗಿ ಮಾರಾಟ ಮಾಡಲಾಗಿದೆ. ಅರಣ್ಯೇತರ ಚಟುವಟಿಕೆಗಳೂ ನಡೆಯುತ್ತಿವೆ. ಈ ಪ್ರದೇಶದಲ್ಲಿದ್ದ ಮರ-ಗಿಡಗಳನ್ನು ಕಡಿದಿರುವುದು ಉಪಗ್ರಹ ಆಧಾರಿತ ಚಿತ್ರದಿಂದ ಗೋಚರಿಸುತ್ತದೆ. ಸಾಲದ್ದಕ್ಕೆ ತನ್ನ ಸುಪರ್ದಿಯಲ್ಲಿದ್ದ ಅರಣ್ಯ ಭೂಮಿ ಹಾಗೂ ಖಾಲಿ ಜಾಗಗಳನ್ನು ಸಿನಿಮಾ ಚಿತ್ರೀಕರಣಕ್ಕೆ ದಿನದ ಆಧಾರದ ಮೇಲೆ ಬಾಡಿಗೆಗೆ ನೀಡುತ್ತಿರುವುದೂ ಗಮನಕ್ಕೆ ಬಂದಿದೆ.
ಅಪರಾಧ ಪ್ರಕರಣ ದಾಖಲಿಸಿ:
ಕೆನರಾ ಬ್ಯಾಂಕ್‌ಗೆ ಮಾರಾಟ ಮಾಡಿದೆ ಎನ್ನಲಾದ ಅರಣ್ಯ ಭೂಮಿಯಲ್ಲಿ ಹಲವು ತಿಂಗಳಿಂದ “ಟಾಕ್ಸಿಕ್’ ಎಂಬ ಹೆಸರಿನ ಚಲನಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಇದಕ್ಕಾಗಿ ನೂರಾರು ಗಿಡ-ಮರಗಳನ್ನು ಕಡಿದು ದೊಡ್ಡ ಸೆಟ್ ಹಾಕಲಾಗಿದೆ. ಇದಕ್ಕೆ ಅನುಮತಿ ನೀಡಿದ್ದರೆ, ಆ ಅಧಿಕಾರಿ ವಿರುದ್ಧ ಕ್ರಮ ಆಗಬೇಕು. ಅನುಮತಿ ಪಡೆಯದೆ ಗಿಡ-ಮರಗಳನ್ನು ಕಡಿದಿದ್ದರೆ, ಚಿತ್ರತಂಡದ ವಿರುದ್ಧ ಸೇರಿದಂತೆ ಕಾರಣರಾದ ಎಲ್ಲರ ವಿರುದ್ಧವೂ ಅರಣ್ಯ ಅಪರಾಧ ಪ್ರಕರಣ ದಾಖಲಿಸಲು ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan; ಜಾಮೀನು ಸಿಕ್ಕ ಬೆನ್ನಲ್ಲೇ ಬಳ್ಳಾರಿ ಜೈಲಿನತ್ತ ಅಭಿಮಾನಿಗಳು:ಲಾಠಿ ಬೀಸಿದ ಪೊಲೀಸರು
B.Z. Zameer Ahmed Khan;ನಾನು ಶುದ್ದ ಹಿಂದೂಸ್ಥಾನಿ ಭಾರತೀಯ, 24 ಕ್ಯಾರೆಟ್ ಗೋಲ್ಡ್..
Waqf; ಬಿಜೆಪಿ ಸರಕಾರದ ಅವಧಿಯಲ್ಲಿ ನೋಟಿಸ್ ನೀಡಿದ್ದರೂ ತಪ್ಪು: ಪ್ರಹ್ಲಾದ ಜೋಶಿ
High Court; ನಟ ದರ್ಶನ್ ಗೆ ಕೊಂಚ ರಿಲೀಫ್:ವೈದ್ಯಕೀಯ ಜಾಮೀನು ಮಂಜೂರು
By-election; ಬಿಜೆಪಿ 3 ವಿಷಯಗಳನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿದೆ: ಸಿ.ಟಿ.ರವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.