Waqf Property: ವಿಪಕ್ಷದಿಂದ ವಕ್ಫ್ ಆಸ್ತಿ ಹೆಸರಿನಲ್ಲಿ ಅಶಾಂತಿ ಮೂಡಿಸಲು ಯತ್ನ: ಭಂಡಾರಿ
ಕಠಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಆಗ್ರಹ
Team Udayavani, Oct 30, 2024, 3:04 AM IST
ಬೆಂಗಳೂರು: ಶಾಂತಿಯುತ ನಾಡಿನಲ್ಲಿ ವಿಪಕ್ಷದವರು ಅಶಾಂತಿಯ ವಾತಾವರಣ ಸೃಷ್ಟಿಸಲು ಮುಂದಾಗಿದ್ದಾರೆ. ಜನಾಂಗದ ನಡುವೆ ದ್ವೇಷದ ವಿಷಬೀಜ ಬಿತ್ತುತ್ತಿದ್ದಾರೆ. ಸಮಾಜದಲ್ಲಿ ಶಾಂತಿ ಕದಡುವವರು ಹಾಗೂ ದ್ವೇಷ ಬಿತ್ತುವವರ ವಿರುದ್ಧ ಸರ್ಕಾರ ಕಠಿನ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಮಂಜುನಾಥ ಭಂಡಾರಿ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರದಲ್ಲಿ ಪ್ರತಿ ಜಾತಿ, ಜನಾಂಗದ ಹಿತ ಕಾಪಾಡುತ್ತಾ ಬಂದಿದೆ. ಸಾಮರಸ್ಯಕ್ಕೆ ಧಕ್ಕೆಯಾಗುವುದಕ್ಕೆ ಆಸ್ಪದ ಕೊಟ್ಟಿಲ್ಲ. ಆದರೆ ಮಹಾರಾಷ್ಟ್ರ ಚುನಾವಣೆ ಹಾಗೂ ರಾಜ್ಯದ ಉಪಚುನಾವಣೆ ಘೋಷಣೆ ಆಗುತ್ತಿದ್ದಂತೆ ವಿಪಕ್ಷದವರು ರಾಜ್ಯದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿ ಕೋಮು ಸೌಹಾರ್ದ ಕದಡುವ ಕೆಲಸಕ್ಕೆ ಕೈಹಾಕಿದ್ದಾರೆ ಎಂದು ದೂರಿದ್ದಾರೆ.
ಶಾಂತಿ ಕದಡುವ ಯತ್ನಕ್ಕೆ ಕಾಂಗ್ರೆಸ್ ಸರಕಾರ ಅವಕಾಶ ನೀಡುವುದಿಲ್ಲ. ಶಾಂತಿ ಸುವ್ಯವಸ್ಥೆ ಕಾಪಾಡಲು ಸರಕಾರ ಮುಂದಾಗಿದೆ. ಅನಗತ್ಯ ಗೊಂದಲಗಳಿಗೆ ರಾಜ್ಯದ ಜನತೆ ಒಳಗಾಗಬಾರದು. ಸಮಾಜದಲ್ಲಿ ಶಾಂತಿ ಭಂಗಗೊಳಿಸಲು ಯತ್ನಿಸುವವರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ
Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ
Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್: ಬಿ.ವೈ.ವಿಜಯೇಂದ್ರ
Govt.,:ಆದಾಯ ಹೆಚ್ಚಳಕ್ಕೆ ಮುಖ್ಯಮಂತ್ರಿ ಗುರಿ! ಈ ವರ್ಷ 1.10 ಲಕ್ಷ ಕೋ.ರೂ. ಸಂಗ್ರಹದ ಲಕ್ಷ್ಯ
MUST WATCH
ಹೊಸ ಸೇರ್ಪಡೆ
Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ
Sports; ‘ಟಾಪ್’ ಕ್ರೀಡಾಪಟುಗಳ ಸಂಖ್ಯೆಗೆ ಕೇಂದ್ರದಿಂದ ಕತ್ತರಿ?
Chennapattana By Election: ಬೊಂಬೆನಗರಿಗೆ ಇದು ಮೂರನೇ ಬಾರಿ ಉಪ ಚುನಾವಣೆ
Voter List: ಕರಡು ಮತದಾರರ ಪಟ್ಟಿ ಪ್ರಕಟ: 221 ಕ್ಷೇತ್ರಗಳಲ್ಲಿ 5.44 ಕೋಟಿ ಮತದಾರರು
Mangaluru: ಉಪಕರಣಗಳ ಸಹಿತ ಮೊಬೈಲ್ ಟವರ್ ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.