Arrested: 2.3 ಕೋಟಿ ರೂ.ಡ್ರಗ್ಸ್ ಜಪ್ತಿ: ವಿದೇಶಿ ಪೆಡ್ಲರ್ ಸೆರೆ
Team Udayavani, Oct 30, 2024, 1:24 PM IST
ಬೆಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವಿದೇಶಿ ಡ್ರಗ್ ಪೆಡ್ಲರ್‌ನನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಬಂಧಿಸಿದ್ದಾರೆ. ಆಫ್ರಿಕಾ ಮೂಲದ ಇನಾಯಂಗ್ ಯುನಿಮೈ ಬೋನಿಫೇಸ್ (31) ಬಂಧಿತ.
ಆರೋಪಿಯಿಂದ 2.36 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. 2020ರಲ್ಲಿ ಮೆಡಿಕಲ್ ವೀಸಾ ಪಡೆದು ಬೆಂಗಳೂರಿಗೆ ಬಂದಿರುವ ಆರೋಪಿ, ದೆಹಲಿ ಬಳಿಯ ಗ್ರೇಟರ್ ನೋಯ್ಡಾದಲ್ಲಿ ವಾಸವಾಗಿದ್ದು, ಕಟಿಂಗ್ ಶಾಪ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ಬಳಿಕ ಬೆಂಗಳೂರಿನಲ್ಲಿ ತನ್ನ ದೇಶದ ಮಹಿಳಾ ಸ್ನೇಹಿತೆಯ ಪರಿಚಯವಾಗಿದೆ. ಆಕೆಯ ಸೂಚನೆ ಮೇರೆಗೆ ಬೆಂಗಳೂರಿಗೆ ಬಂದ ಆರೋಪಿ, ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯ ದೊಡ್ಡನಾಗಮಂಗ ಲದಲ್ಲಿ ವಾಸವಾಗಿದ್ದ. ನಂತರ ಆಕೆಯಿಂದ ಎಂಡಿಎಂಎ ಕ್ರಿಸ್ಟಲ್ ಅನ್ನು ಪಡೆದು, ಆಕೆ ತಿಳಿಸುವ ಗ್ರಾಹಕರು ಮತ್ತು ತನಗೆ ಪರಿಚಯವಿರುವ ಗ್ರಾಹಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಈ ಮಾಹಿತಿ ಮೇರೆಗೆ ಅ.24ರಂದು ಆತನ ಮನೆ ಮೇಲೆ ದಾಳಿ ನಡೆಸಿ ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tollywood: ಚಳಿಗಾಲದಲ್ಲಿ ಈ ದಿನ ನೆರವೇರಲಿದೆ ನಾಗಚೈತನ್ಯ – ಶೋಭಿತಾ ವಿವಾಹ
Home made food ನಿಜವಾಗಿಯೂ ಪೋಷಕಾಂಶದಿಂದ ತುಂಬಿದೆಯೇ…?
Rajyotsava Award: ಅರುಣ್ ಯೋಗಿರಾಜ್ ಸೇರಿ 69 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ
ಕುಂಬಾರರ ಬದುಕಿನಲ್ಲಿಲ್ಲ ದೀಪಾವಳಿ ಬೆಳಕು: ಮಾರುಕಟ್ಟೆಗೆ ಲಗ್ಗೆ ಇಟ್ಟ ಪಿಂಗಾಣಿ ಹಣತೆ
ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.