Actor Darshan: ಬೇರೆ ಅವರನ್ನು ನಿಂದಿಸಬೇಡಿ.. ದರ್ಶನ್ ಅಭಿಮಾನಿಗಳಿಗೆ ʼಡಿ ಕಂಪನಿʼ ಮನವಿ
Team Udayavani, Oct 30, 2024, 2:41 PM IST
ಬೆಂಗಳೂರು: ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ (Darshan) ಅವರಿಗೆ ಬುಧವಾರ (ಅ.30ರಂದು) ಷರತ್ತು ಬದ್ಧ ಜಾಮೀನು ನೀಡಲಾಗಿದೆ.
131 ದಿನಗಳ ಬಳಿಕ ದರ್ಶನ್ ಜೈಲಿನಿಂದ ಹೊರಬರಲಿದ್ದಾರೆ. ಬುಧವಾರ ಸಂಜೆಯ ವೇಳೆ ದರ್ಶನ್ ಜೈಲಿನಿಂದ ಬಂದು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Actor Darshan: ‘ದಾಸʼನ ಜಾಮೀನಿಗೆ ಶ್ಯೂರಿಟಿ ನೀಡಲು ಮುಂದೆ ಬಂದ ಆ ನಟ ಯಾರು?
ತನ್ನ ನೆಚ್ಚಿನ ನಟನಿಗೆ ಜಾಮೀನು ಸಿಕ್ಕ ತಕ್ಷಣ ಅಭಿಮಾನಿಗಳು ಬಳ್ಳಾರಿ ಜೈಲಿನ ಬಳಿ ಜೈಕಾರ ಹಾಕಿದ್ದಾರೆ. ನಟಿ ರಕ್ಷಿತಾ, ಸಂಜನಾ, ನಿರ್ದೇಶಕ ಓಂ ಪ್ರಕಾಶ್ ಸೇರಿದಂತೆ ಹಲವರು ದರ್ಶನ್ ಆಗಮನಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ದರ್ಶನ್ ಫ್ಯಾನ್ಸ್‌ಗಳು ಸೋಶಿಯಲ್ ಮೀಡಿಯಾದಲ್ಲಿ ನಾನಾ ರೀತಿಯ ಫೋಸ್ಟ್‌ಗಳನ್ನು ಹಾಕುತ್ತಿದ್ದಾರೆ. ಹೀಗಾಗಿ ಅವರ ಅಭಿಮಾನಿಗಳಿಗೆ ʼಡಿ ಕಂಪನಿʼ ವಿಶೇಷವಾಗಿ ಮನವಿ ಮಾಡಿದೆ.
View this post on Instagram
ದರ್ಶನ್ ಅವರ ಅಧಿಕೃತ ಫ್ಯಾನ್ಪೇಜ್ ಆದ ‘ಡಿ ಕಂಪನಿʼ ಈ ಕುರಿತು ಪೋಸ್ಟ್ ಮಾಡಿದೆ. ‘ಎಲ್ಲಾ ತೂಗುದೀಪ ಪರಿವಾರದ ಅಭಿಮಾನಿಗಳಿಗೆ ಈ ಮೂಲಕ ತಿಳಿಸುವುದು ಏನೆಂದರೆ, ನಮ್ಮ ಪ್ರೀತಿಯ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರವರಿಗೆ ಜಾಮೀನು ಸಿಕ್ಕಿದೆ. ಈ ಸಂತೋಷದ ಸಂಭ್ರಮದಲ್ಲಿ ಅಭಿಮಾನಿಗಳು ಯಾವುದೇ ಕಾರಣಕ್ಕೂ ಮಾಧ್ಯಮದವರು, ರಾಜಕಾರಣಿಗಳು, ಬೇರೆ ನಟರು ಹಾಗೂ ಕಾನೂನಿನ ಬಗ್ಗೆ ನಿಂದನೆ ಬೇಡ’ ಎಂದು ಕೋರಲಾಗಿದೆ.
ದರ್ಶನ್ ಅವರಿಗೆ 6 ವಾರಗಳ ಕಾಲ ಜಾಮೀನು ಮಂಜೂರು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan: ಜೈಲಿನಿಂದ ಹೊರಬರುತ್ತಿದ್ದಂತೆ ದರ್ಶನ್ ಕಾರು ಅಡ್ಡಗಟ್ಟಿ ಜೈಕಾರ ಕೂಗಿದ ಫ್ಯಾನ್ಸ್
ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ
Actor Darshan: ‘ದಾಸʼನ ಜಾಮೀನಿಗೆ ಶ್ಯೂರಿಟಿ ನೀಡಲು ಮುಂದೆ ಬಂದ ಆ ನಟ ಯಾರು?
Rukmini Vasanth: ‘ಬಘೀರ’ನ ಸ್ನೇಹದರಸಿ ನಾನು…
Toxic: ಚಿತ್ರೀಕರಣಕ್ಕೆ ಅನುಮತಿ ಕೊಟ್ಟ ಅಧಿಕಾರಿ ವಿರುದ್ಧವೂ ಕ್ರಮ: ಅರಣ್ಯ ಸಚಿವ ಖಂಡ್ರೆ
MUST WATCH
ಹೊಸ ಸೇರ್ಪಡೆ
Darshan: ಜೈಲಿನಿಂದ ಹೊರಬರುತ್ತಿದ್ದಂತೆ ದರ್ಶನ್ ಕಾರು ಅಡ್ಡಗಟ್ಟಿ ಜೈಕಾರ ಕೂಗಿದ ಫ್ಯಾನ್ಸ್
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
ನಿರಾಶ್ರಿತ ರೋಹಿಂಗ್ಯಾ ಮಕ್ಕಳ ಶಾಲೆ ಪ್ರವೇಶಕ್ಕೆ ಅನುಮತಿ ಕೊಡಿ: PIL ವಜಾಗೊಳಿಸಿದ ಹೈಕೋರ್ಟ್
Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು
ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.