Healthy lifestyle: ಸ್ವಸ್ಥ ಆರೋಗ್ಯಕ್ಕೆ ಸ್ವಸ್ಥ ಜೀವನ ಕ್ರಮ


Team Udayavani, Oct 30, 2024, 3:37 PM IST

11-

ಆರೋಗ್ಯ ಎಂದರೆ ಒಬ್ಬ ವ್ಯಕ್ತಿಯ ದೇಹ, ಮನಸ್ಸು ಮತ್ತು ಅವರ ಸಾಮಾಜಿಕ ಸ್ಥಿತಿ. ಈ ಮೂರೂ ಸುಸ್ಥಿಯಲ್ಲಿ ಇದ್ದರೆ ಮನುಷ್ಯನು ಆರೋಗ್ಯವಾಗಿ ಇರುತ್ತಾನೆ. ಮನುಷ್ಯ ಆರೋಗ್ಯವಾಗಿ ಇರಲು ಉತ್ತಮ ಆಹಾರ ಶುದ್ಧವಾದ ಗಾಳಿ ಮತ್ತು ಶುದ್ಧವಾದ ನೀರು ಸೇವನೆ ಮಾಡಬೇಕು. ಒಂದು ಜೀವಿಯ ದೇಹ ಮತ್ತು ಮನಸ್ಸು ಸಂಪೂರ್ಣ ಸಮತೋಲನದಲ್ಲಿ ಇರುವ ಸ್ಥಿತಿಯನ್ನು ಆರೋಗ್ಯ ಎಂದು ಕರೆಯಬಹುದು. ವಿಶ್ವ ಆರೋಗ್ಯಸಂಸ್ಥೆಯ ಪ್ರಕಾರ ಆರೋಗ್ಯ ಎಂದರೆ ಮನುಷ್ಯನ ದೇಹದ ಸಂಪೂರ್ಣ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸುಸ್ಥಿತಿಯೇ ಆಗಿದೆ.

ಆರೋಗ್ಯಕರ ಜೀವನವೆಂದರೆ ಉತ್ತಮ ಆರೋಗ್ಯ ಮತ್ತು ವಿವೇಕಯುತ ಮನಸ್ಸು. ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿರಲು ಬಯಸಿದರೆ, ಪ್ರತಿದಿನ ಉತ್ತಮ ಅಭ್ಯಾಸಗಳನ್ನು ರೂಡಿಸಿಕೊಳ್ಳಬೇಕು. ಮನಸ್ಸು ಮತ್ತು ದೇಹಕ್ಕೆ ಸೂಕ್ತ ಆಗಿರುವುದನ್ನು ಮಾತ್ರ ಮಾಡಬೇಕು. ಜೀವನಶೈಲಿ ಮತ್ತು ಅಭ್ಯಾಸಗಳನ್ನು ಚೆನ್ನಾಗಿ ನಿರ್ವಣೆ ಮಾಡುವುದರಿಂದ ವ್ಯಕ್ತಿಯ ಬಗ್ಗೆ ಸದಭಿಪ್ರಾಯ ಮೂಡುತ್ತದೆ. ಇದು ವ್ಯಕ್ತಿಯ ಸ್ವಾಭಿಮಾನ ಮತ್ತು ವ್ಯಕ್ತಿತ್ವವನ್ನು ರೂಪಿಸುತ್ತದೆ. ವ್ಯಕ್ತಿಯು ಈಗಾಗಲೇ ಅನಾರೋಗ್ಯಕರ ಜೀವನಶೈಲಿಗೆ ಒಗ್ಗಿಕೊಂಡಿದ್ದರೆ ಅದನ್ನು ಸುಧಾರಿಸಲು ಸಾಕಷ್ಟು ಉತ್ತಮ ಅವಕಾಶಗಳು ಇವೆ. ಪ್ರತಿದಿನದ ನಮ್ಮ ದಿನಚರಿಯಲ್ಲಿ ಪಾಲಿಸಬೇಕಾದ ಕೆಲವು ಆರೋಗ್ಯಕರ ಅಭ್ಯಾಸಗಳಿದ್ದು, ಅವುಗಳು ನಮ್ಮ ಜೀವನಶೈಲಿಯನ್ನು ಸುಧಾರಿಸುತ್ತದೆ. ವ್ಯಕ್ತಿಯ ಜೀವನಶೈಲಿಯನ್ನು ಉತ್ತಮಪಡಿಸಲು ಪ್ರಮುಖ ಐದು ಅಭ್ಯಾಸಗಳೆಂದರೆ,

ವ್ಯಾಯಾಮಕ್ಕೆ ಹೆಚ್ಚಿನ ಪ್ರಾಶಸ್ತ್ಯ: ಸದೃಢವಾದ ಆರೋಗ್ಯ ಹೊಂದಲು ಕೆಲಸವಷ್ಟೇ ಮಾಡಿದರೆ ಆಗುವುದಿಲ್ಲ, ಬದಲಿಗೆ ಸದೃಢ ಆರೋಗ್ಯಕ್ಕೆ ದಿನನಿತ್ಯ ನಿಗದಿತ ಅವಧಿಯ ವ್ಯಾಯಾಮವನ್ನು ಮಾಡಬೇಕು. ಮನುಷ್ಯ ಜೀವದಲ್ಲಿ ಪ್ರತಿದಿನ ಪ್ರತೀಕ್ಷಣ ದೈಹಿಕವಾಗಿ ಕ್ರಿಯಾಶೀಲರಾಗಿ ಇರಬೇಕು. ದೇಹದ ಬೆಳವಣಿಗೆಗೆ ಪ್ರತಿದಿನ ತಪ್ಪದೇ ವ್ಯಾಯಾಮ ಮಾಡಬೇಕು. ಬೆಳಿಗ್ಗೆ ಮತ್ತು ಸಂಜೆಯ ವೇಳೆ ದೀರ್ಘ‌ ಅವಧಿಯ ನಡಿಗೆಯೂ ಹೆಚ್ಚು ಉಪಯುಕ್ತ.

ಮನಸ್ಸಿನ ಒತ್ತಡವನ್ನು ಕಡಿಮೆ ಮಾಡಿ : ಅತಿಯಾದ ಮಾನಸಿಕ ಒತ್ತಡವು ಆರೋಗ್ಯಕ್ಕೆ ಹಾನಿ ಉಂಟುಮಾಡುತ್ತದೆ. ಮಾನಸಿಕ ಆರೋಗ್ಯದ ವ್ಯತ್ಯಾಸವು ದೈಹಿಕ ಆರೋಗ್ಯದಲ್ಲೂ ಗಂಭೀರ ವ್ಯತ್ಯಾಸವನ್ನು ಮಾಡುತ್ತದೆ. ಮನಸ್ಸಿನಲ್ಲಿ ಉಂಟಾಗುವ ಆತಂಕವನ್ನು ಕಳೆಯುವ ರೀತಿ ಮತ್ತು ಮನಸ್ಸಿನ ಖನ್ನತೆಯನ್ನು ಕಡಿಮೆ ಮಾಡುವ ವಿಧಾನವನ್ನು ತಿಳಿದು ಒತ್ತಡ ನಿರ್ವಹಣೆ ಅಭ್ಯಸಿಸಬೇಕು.

ಉಪಾಹಾರಕ್ಕೆ ಹೆಚ್ಚಿನ ಪ್ರಾಶಸ್ತ್ಯ: ಬೆಳಗಿನ ಉಪಾಹಾರವೇ ಮನುಷ್ಯನ ದಿನದ ಆರಂಭಕ್ಕೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ. ಯಾವುದೇ ಸಂದರ್ಭದಲ್ಲಿ ಬೆಳಗ್ಗಿನ ಉಪಹಾರವನ್ನು ತ್ಯಜಿಸಬಾರದು. ಪೌಷ್ಟಿಕವಾದ ಉಪಹಾರವು ಮನುಷ್ಯನನ್ನು ದಿನಪೂರ್ತಿ ಶಕ್ತಿಯುತ ಮತ್ತು ಕ್ರಿಯಾಶೀಲವಾಗಿ ಇರಿಸುತ್ತದೆ. ಮನುಷ್ಯ ದಿನದಲ್ಲಿ ಸೇವಿಸುವ ಯಾವುದೇ ಆಹಾರಗಳೂ ಬೆಳಗ್ಗಿನ ಉಪಹಾರದ ಪೋಷಕಾಂಶವನ್ನು ನೀಡುವುದಿಲ್ಲ.

ಸರಿಯಾದ ಸಮಯಕ್ಕೆ ನಿದ್ರೆ: ಮನುಷ್ಯನ ದೈನಂದಿನ ಮಲಗುವ ಸಮಯವು ಆತನ ಮನಸ್ಥಿತಿ ಮತ್ತು ಆರೋಗ್ಯದ ನಿರ್ಧಾರಕ. ಪ್ರತಿದಿನ ಸರಿಯಾದ ಸಮಯಕ್ಕೆ ಮಲಗದೇ ಇದ್ದರೆ ಅದು ದಿನವಿಡೀ ನಮ್ಮ ಜೀವನಶೈಲಿಯ ಮೇಲೆ ಪ್ರಭಾವ ಬೀರುತ್ತದೆ. ತಡವಾಗಿ ನಿದ್ರಿಸಿದರೆ ಅದು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಹಾಳುಗೆಡವುತ್ತದೆ. ಆರೋಗ್ಯಕರ ಜೀವನದ ಜೀವಾಳವೇ ಧಾರಾಳ ನಿದ್ರೆ ಮಾಡುವುದು. ತಡವಾಗಿ ಮಲಗುವುದನ್ನು ಸಾಧ್ಯವಾದಷ್ಟು ತಪ್ಪಿಸಬೇಕು.

ಪೋಷಕಾಂಶಯುಕ್ತ ಆಹಾರ ಸೇವನೆ: ಮನುಷ್ಯ ಸದಾ ಆರೋಗ್ಯವಾಗಿ ಇರಲು ಹೆಚ್ಚಿನ ಪೋಷಕಾಂ ಶ ಇರುವ ಆಹಾರವನ್ನು ಸೇವಿಸಬೇಕು. ಸಮತೋಲಿತ ಆಹಾರ ಕ್ರಮವು ಮನುಷ್ಯನ ದೇಹಕ್ಕೆ ಅಗತ್ಯವಿರುವ ಎಲ್ಲಾ ಪೋಷಕಾಂಶಗಳನ್ನು ಒದಗಿಸುತ್ತದೆ. ದೇಹ ಮತ್ತು ಮನಸ್ಸಿನ ಕಾರ್ಯನಿರ್ವಹಣೆ ಸರಿಯಾಗಿ ಇರಬೇಕೆಂದರೆ ಉತ್ತಮ ಆಹಾರಕ್ರಮಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಆಹಾರಕ್ರಮ ಸುಧಾರಣೆಯೇ ಜೀವನಶೈಲಿಯ ಸುಧಾರಣೆಯ ಪ್ರಮುಖ ಹೆಜ್ಜೆ. ಆರೋಗ್ಯವೇ ಭಾಗ್ಯ ಎನ್ನುವ ಮಾತಿನಂತೆ ಮನುಷ್ಯನು ಅಮೂಲ್ಯವಾದ ತನ್ನ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಅದಕ್ಕಾಗಿ  ಉತ್ತ ಮಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು.

ಆರೋಗ್ಯಕರ ಜೀವನಶೈಲಿಯು ಹಲವು ರೋಗಗಳನ್ನು ತಡೆದು ದೀರ್ಘ‌ಕಾಲದ ಕಾಯಿಲೆಗಳಿಂದ ನಮ್ಮನ್ನು ದೂರ ಇರಿಸುತ್ತದೆ. ಒಳ್ಳೆಯ ಅಭ್ಯಾಸಗಳು ಮನುಷ್ಯನ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಿ ದೇಹ ಸದೃಢವಾಗಿ ಇಡುತ್ತದೆ. ವ್ಯಕ್ತಿಯ ಒಟ್ಟಾರೆ ಆರೋಗ್ಯವು ಆತ ಯಾವ ರೀತಿಯ ಜೀವನ ಶೈಲಿಯನ್ನು ಆಯ್ಕೆ ಮಾಡಿಕೊಳ್ಳುತ್ತಾನೆ ಎನ್ನುವುದನ್ನು ಅವಲಂಬಿಸಿದೆ ಎನ್ನುವುದನ್ನು ಮರೆಯಬಾರದು.

- ಸಂತೋಷ್‌ ರಾವ್‌ ಪೆರ್ಮುಡ

ಬೆಳ್ತಂಗಡಿ

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

UV Fusion: ಒಂದು ಪುಟ್ಟ ಸಹಾಯ ಒಬ್ಬರ ಬದುಕನ್ನೇ ಬದಲಾಯಿಸಬಹುದು…

14-uv-fusion

UV Fusion: ಮೊದಲ ಬಾರಿ ಲೇಖನಿ ಹಿಡಿದ ಅನುಭವ

13–uv-fusion

UV Fusion: ಹೃದಯದಲ್ಲಿ ಬಾಲ್ಯದ ಮಿಡಿತ

12-uv-fusion

UV Fusion: ಇನ್ನಾದರು ಎಚ್ಚೆತ್ತುಕೊಂಡು ಕನ್ನಡ ಶಾಲೆ ರಕ್ಷಿಸಿ

11-uv-fusion

UV Fusion: ಕುಟುಂಬ ಎಂಬ ಬೆಚ್ಚಗಿನ ರಕ್ಷಾ ಕವಚ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.