Waqf Property:ಜಂಟಿ ಸಂಸದೀಯ ಸಮಿತಿ ಕರ್ನಾಟಕದ ರೈತರ ಸಮಸ್ಯೆಗಳ ಆಲಿಸಲಿ: ತೇಜಸ್ವಿ ಸೂರ್ಯ
ಜೆಪಿಸಿ ಚೇರ್ಮನ್ ಜಗದಾಂಬಿಕಾ ಪಾಲ್‌ಗೆ ಪತ್ರ ಬರೆದು ಆಗ್ರಹಿಸಿದ ಬೆಂಗಳೂರು ದಕ್ಷಿಣ ಸಂಸದ
Team Udayavani, Oct 30, 2024, 7:37 PM IST
ಬೆಂಗಳೂರು: ವಿಜಯಪುರ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳ ರೈತರ ಜಮೀನುಗಳಿಗೆ ವಕ್ಫ್ ಮಂಡಳಿ ನೋಟಿಸ್ ನೀಡಿರುವ ಕುರಿತು ವಕ್ಫ್ (ತಿದ್ದುಪಡಿ) ಮಸೂದೆ 2024ರ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯ ಅಧ್ಯಕ್ಷ ಜಗದಾಂಬಿಕಾ ಪಾಲ್ ರೈತರ ಭೇಟಿಯಾಗಿ ಸಮಸ್ಯೆಗಳ ಆಲಿಸಬೇಕು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪತ್ರ ಬರೆದು ಮನವಿ ಮಾಡಿದ್ದಾರೆ.
ವಿಜಯಪುರ ಮತ್ತು ರಾಜ್ಯದ ಇತರ ಜಿಲ್ಲೆಗಳ ರೈತರ ಜಮೀನುಗಳ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಕುರಿತು, ಜೆಪಿಸಿ ಚೇರ್ಮನ್ ಜಗದಾಂಬಿಕಾ ಪಾಲ್ ಅವರಿಗೆ ಪತ್ರ ಬರೆದಿದ್ದೇನೆ. ನೋಟಿಸ್‌ಗಳ ಹೊರತಾಗಿಯೂ ಹಲವರ ಪಹಣಿ (ಆರ್ ಟಿ ಸಿ) ಗಳಲ್ಲಿಯೂ ಯಾವುದೇ ಸಮರ್ಪಕ ಕಾನೂನುಗಳ ಪಾಲಿಸದೇ ವಕ್ಫ್ ಆಸ್ತಿಗಳೆಂದು ತಿದ್ದುಪಡಿ ಮಾಡಲಾಗಿದ್ದು, ಈ ರೀತಿ ತೊಂದರೆಗೆ ಒಳಗಾಗಿರುವ ರೈತರ ನಿಯೋಗವನ್ನು ಭೇಟಿಯಾಗಿ ಅವರ ಸಮಸ್ಯೆಗಳ ಆಲಿಸಬೇಕು. ಇದರಿಂದ ವಕ್ಫ್‌ನಿಂದ ಆಗಿರುವ ಭೂಮಿ ಅತಿಕ್ರಮಣದ ನೇರ ಮಾಹಿತಿ ದೊರಕಲಿದೆ’ ಎಂದು ಮನವಿ ಮಾಡಿದ್ದಾರೆ.
ಜಂಟಿ ಸಂಸದೀಯ ಸಮಿತಿ ಸದಸ್ಯರೂ ಆದ ಬೆಂಗಳೂರು ದಕ್ಷಿಣ ಸಂಸದ ಇತ್ತೀಚೆಗೆ ವಿಜಯಪುರ ಜಿಲ್ಲೆ ಮತ್ತು ಸುತ್ತಮುತ್ತಲಿನ ಇತರ ಪ್ರದೇಶಗಳ ರೈತರ ನಿಯೋಗದೊಂದಿಗೆ ಭೇಟಿಯಾಗಿದ್ದರು. ಸುಮಾರು ಒಂದು ಶತಮಾನದಿಂದ ತಮ್ಮ ಜಮೀನುಗಳನ್ನು ಸಾಗುವಳಿ ಮಾಡಿರುವ ಈ ರೈತರು 1920 ಮತ್ತು 1930 ರ ದಶಕದ ಹಿಂದಿನ ದಾಖಲೆಗಳ ಹೊಂದಿದ್ದಾರೆ. ಆದರೆ, ಇತ್ತೀಚಿನ ತಿಂಗಳಲ್ಲಿ, ಅವರಲ್ಲಿ ಅನೇಕರಿಗೆ ಯಾವುದೇ ಸಾಕ್ಷ್ಯ ಅಥವಾ ವಿವರಣೆಯಿಲ್ಲದೆ ತಮ್ಮ ಭೂಮಿ ವಕ್ಫ್ ಆಸ್ತಿ ಎಂದು ಘೋಷಿಸಿ ನೋಟಿಸ್ ನೀಡಲಾಗಿದೆ. ಸುಮಾರು 1,500 ಎಕರೆಗಳ ಅವರ ಹಳ್ಳಿಯಲ್ಲಿಯೇ ವಕ್ಫ್ ಆಸ್ತಿ ಎಂದು ಗೊತ್ತುಪಡಿಸಲಾಗಿದೆ ಎಂದು ಪಾಲ್‌ಗೆ ಬರೆದ ಪತ್ರದಲ್ಲಿ ಆರೋಪಿಸಿದ್ದಾರೆ.
Have written to the Chairperson of the JPC on Waqf Amendment Bill Shri Jagdambika Pal Ji, drawing attention to the plight of farmers from Vijayapura District & other areas in the vicinity in Karnataka, who have been wrongfully served notices claiming their land as Waqf property.… pic.twitter.com/PyiE29kmuI
— Tejasvi Surya (@Tejasvi_Surya) October 30, 2024
ರೈತರಿಗೆ ನೋಟಿಸ್‌ಗಳ ನೀಡಿದ್ದರ ಹೊರತಾಗಿ, ಕಾನೂನು ಪ್ರಕ್ರಿಯೆಗಳ ಅನುಸರಿಸದೆ ಕೆಲವು ಜಮೀನುಗಳ ಆರ್‌ಟಿಸಿ, ಪಹಣಿ ಮತ್ತು ಮ್ಯುಟೇಶನ್ ರಿಜಿಸ್ಟರ್‌ಗಳಲ್ಲಿ ಬದಲಾವಣೆಗಳ ಮಾಡಲಾಗಿದೆ. ಸಮಿತಿಯ ಮುಂದೆ ಸಾಕ್ಷಿಗಳಾಗಿ ಈ ರೈತರ ನಿಯೋಗವನ್ನು ಆಹ್ವಾನಿಸಲು ಮತ್ತು ಈ ಸಮಸ್ಯೆಯ ಪ್ರಮಾಣ ನೇರವಾಗಿ ಅರ್ಥಮಾಡಿಕೊಳ್ಳಲು ಮನವಿ ಮಾಡಲಾಗಿದೆ. ಅಷ್ಟೇ ಅಲ್ಲದೆ, ಸಾರ್ವಜನಿಕ ವಿಚಾರಣೆಗಾಗಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಮನವಿ ಮಾಡಲಾಗಿದೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.