Forest Land: ಎಚ್ಎಂಟಿ ಜಾಗಕ್ಕೆ ಸಚಿವ ಖಂಡ್ರೆ ಅತಿಕ್ರಮ ಪ್ರವೇಶ: ಎಚ್.ಡಿ.ಕುಮಾರಸ್ವಾಮಿ
ಮಾಜಿ ಸ್ಪೀಕರ್ರಿಂದ ಒತ್ತುವರಿಯಾದ ಅರಣ್ಯ ಭೂಮಿ ತೆರವುಗೊಳಿಸುವ ಧೈರ್ಯ ತೋರಿ, ಎಚ್ಎಂಟಿ ಜಾಗ ವಿಚಾರಕ್ಕೆ ಅರಣ್ಯ ಸಚಿವ-ಕೇಂದ್ರ ಸಚಿವ ಟಾಕ್ಫೈಟ್
Team Udayavani, Oct 31, 2024, 7:50 AM IST
ಚನ್ನಪಟ್ಟಣ: ಅರಣ್ಯ ಸಚಿವ ಈಶ್ವರ ಖಂಡ್ರೆ ಎಚ್ಎಂಟಿ ಜಾಗದಲ್ಲಿ ಅತಿಕ್ರಮವಾಗಿ ಪ್ರವೇಶಿಸಿದ್ದಾರೆ. ಎಚ್ಎಂಟಿ ಅರಣ್ಯ ಪ್ರದೇಶ ಬಗ್ಗೆ ನ್ಯಾಯಾಲಯದಲ್ಲಿ ತಕರಾರು ಅರ್ಜಿ ಇದ್ದು, ಅದರ ತೀರ್ಪಿಗಾಗಿ ಕಾಯುತ್ತಿದ್ದೇವೆ. ನಾವು ಕಾನೂನು ಮೂಲಕ ಹೋರಾಟ ಮಾಡುತ್ತೇವೆ. ಪ್ರಚಾರಕ್ಕಾಗಿ ಈ ವಿಚಾರ ತೆಗೆದುಕೊಳ್ಳಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣದಲ್ಲಿ ಬುಧವಾರ ಮಾಧ್ಯಮಗಳ ಜತೆ ಮಾತನಾಡಿ, ಸಚಿವ ಖಂಡ್ರೆ ಅವರಿಗೆ ಮಾಹಿತಿ ಮತ್ತು ಜ್ಞಾನದ ಕೊರತೆ ಇದೆ. ಅವರು ಭೇಟಿ ನೀಡಿರುವ ಜಾಗವು 2002ರಲ್ಲಿಯೇ ಕೆನರಾ ಬ್ಯಾಂಕಿಗೆ ನೀಡಲಾಗಿದೆ. ಸಚಿವರು ಅನಗತ್ಯ ಗೊಂದಲ ಉಂಟು ಮಾಡುತ್ತಿದ್ದಾರೆ. ಈ ಬಗ್ಗೆ ನಾಳೆ ಅಥವಾ ನಾಡಿದ್ದು ಎಲ್ಲಾ ದಾಖಲೆಗಳ ಸಮೇತ ನಾನು ಮಾಧ್ಯಮಗಳ ಮುಂದೆ ಮಾತನಾಡುತ್ತೇನೆ ಎಂದರು.
ಚಿಕ್ಕಮಗಳೂರು, ಕೊಡಗು, ಬೆಂಗಳೂರು ಸೇರಿದಂತೆ ಅನೇಕ ಕಡೆ ದೊಡ್ಡ ಪ್ರಮಾಣದಲ್ಲಿ ಅರಣ್ಯ ಭೂಮಿ ಒತ್ತುವರಿ ಆಗಿದೆ. ಅದನ್ನೆಲ್ಲ ತೆರವು ಮಾಡುವುದು ಬಿಟ್ಟು ಅರಣ್ಯ ಸಚಿವರು ಎಚ್ ಎಂಟಿ ಮೇಲೆ ಮಾತ್ರ ವಿಶೇಷ ಕಾಳಜಿ ತೋರಿಸುತ್ತಿದ್ದಾರೆ ಎಂದರು. ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ಚಿತ್ರೀಕರಣದ ಸೆಟ್ ಗಾಗಿ ಅರಣ್ಯ ಭೂಮಿಯಲ್ಲಿ ಮರಗಳ ಕಡಿಯಲು ಅನುಮತಿ ನೀಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಈಶ್ವರ್ ಖಂಡ್ರೆ ಮಂಗಳವಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.
ಮಾಜಿ ಸ್ಪೀಕರ್ ಒತ್ತುವರಿ ತೆರವು ಮಾಡಿಸಿಲ್ಲ ಯಾಕೆ?
ಕೋಲಾರದ ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ಒಬ್ಬರು ಒತ್ತುವರಿ ಮಾಡಿರುವ ಅರಣ್ಯ ಭೂಮಿ ತೆರವು ಮಾಡಿಸುವ ಧೈರ್ಯ ಅರಣ್ಯ ಸಚಿವರು ತೋರಿಸಲಿ. ಒತ್ತುವರಿ ತೆರವು ಮಾಡಿಸುವಂತೆ ನ್ಯಾಯಾಲಯ ಆದೇಶ ಕೊಟ್ಟಿವೆ. ಅರಣ್ಯ ಇಲಾಖೆ, ಕೋಲಾರ ಜಿಲ್ಲಾಧಿಕಾರಿಗೆ ನೋಟಿಸ್ ಕೊಟ್ಟಿದೆ. ಆದರೂ ಮಾಜಿ ಸ್ಪೀಕರ್ ಒತ್ತುವರಿ ಜಾಗವನ್ನು ಯಾಕೆ ತೆರವು ಮಾಡುತ್ತಿಲ್ಲ, ಹೇಳಿ ಈಶ್ವರ ಖಂಡ್ರೆ ಅವರೇ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.
120 ಎಕರೆ ಅರಣ್ಯ ಭೂಮಿ ಒತ್ತುವರಿ:
ಶ್ರೀನಿವಾಸಪುರದಲ್ಲಿ 120 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದೆ. 61 ಎಕರೆ ಸರ್ವೆ ಮಾಡಿ ತಕ್ಷಣ ಮುಟ್ಟುಗೋಲು ಹಾಕಿಕೊಳ್ಳಿ ಎಂದು ನ್ಯಾಯಾಲಯದ ಆದೇಶ ಆಗಿದೆ. ಆ ಒತ್ತುವರಿ ಭೂಮಿ ವಿಷಯದಲ್ಲಿ ಅರಣ್ಯ ಸಚಿವರು ಅಧಿಕಾರಿಗಳಿಗೆ ಏನು ಸೂಚನೆ ಕೊಟ್ಟಿದ್ದಾರೆ ಅಂತ ಗೊತ್ತು. ಆ ವಿಚಾರದಲ್ಲಿ ಈಶ್ವರ್ ಖಂಡ್ರೆ ಏನ್ ಮಾಡ್ತಿದ್ದೀಯಪ್ಪ? ಬಡವರಿಗೆ ಒಂದು ನ್ಯಾಯ, ಕಾಂಗ್ರೆಸ್ ನವರಿಗೆ ಒಂದು ನ್ಯಾಯವಾ? ಎಂದು ಖಾರವಾಗಿ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.