Puttur: ಎಲ್ಲೆಡೆ ಬೆಳಕಿನ ಹಬ್ಬದ ಝಗಮಗ

ಪಟಾಕಿ, ಆಕಾಶಬುಟ್ಟಿ, ಹೂವು-ಹಣ್ಣಿನ ಜತೆ ವಸ್ತುಗಳ ಖರೀದಿ ಸಂಭ್ರಮ; ಕೃಷಿಕರ ಮನೆಗಳಲ್ಲಿ ಗೋಪೂಜೆ, ಬಲಿ ಪಾಡ್ಯಮಿಗೂ ಭರದ ಸಿದ್ಧತೆ

Team Udayavani, Oct 31, 2024, 1:06 PM IST

1(1)

ಪುತ್ತೂರು; ಬೆಳ್ತಂಗಡಿ: ದೀಪಾವಳಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಅ. 31ರ ಗುರುವಾರ ನರಕ ಚತುರ್ದಶಿ ತೈಲಾಭ್ಯಂಗ, ಎರಡನೇ ದಿನ ಅಮಾವಾಸ್ಯೆ, ಮೂರನೇ ದಿನ ಗೋಪೂಜೆ, ಬಲೀಂದ್ರ ಪೂಜೆಯ ಸಂಭ್ರಮ ನೆಲೆಸಲಿದೆ. ಬೆಳಕಿನ ಹಬ್ಬ ಸಂಭ್ರಮಕ್ಕೆ ಇಂಬು ನೀಡುವ ಹಾಗೇ ಪುತ್ತೂರಿನ ಮಾರುಕಟ್ಟೆ ಝಗಮಗಿಸುತ್ತಿದೆ. ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಬಿರುಸಾಗಿದ್ದು ಬೆಳಕಿನ ಹಬ್ಬ ಮತ್ತಷ್ಟು ರಂಗೇರಲು ಕಾರಣವಾಗಿದೆ.

ಹೂ-ಹಣ್ಣು, ತರಕಾರಿ, ಹಣತೆ, ಗೂಡುದೀಪ, ಪಟಾಕಿ ಸಹಿತ ಹಬ್ಬಕ್ಕೆ ಬೇಕಾದ ಸಾಮಗ್ರಿ ಖರೀದಿಯಲ್ಲಿ ಗ್ರಾಹಕರು ಉತ್ಸಾಹ ತೋರಿದ್ದಾರೆ. ಆಭರಣ ಮಳಿಗೆ, ಎಲೆಕ್ಟ್ರಾನಿಕ್‌, ಗೃಹಪಯೋಗಿ ಮಳಿಗೆಗಳಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ರಿಯಾಯಿತಿ ದರ ಪ್ರಕಟಿಸಲಾಗಿದ್ದು ಹೀಗಾಗಿ ಖರೀದಿಗೆ ಗ್ರಾಹಕರು ಆಸಕ್ತಿ ತೋರುತ್ತಿರುವ ದೃಶ್ಯ ಕಂಡಿದೆ. ಕಳೆದ ಎರಡು ದಿನಗಳಿಂದ ಸಂಜೆ ಹೊತ್ತು ಮಾರುಕಟ್ಟೆಗಳಲ್ಲಿ ಜನಸಂದಣಿ ಹೆಚ್ಚಾಗಿದೆ.

ಈ ಬಾರಿ ಮಣ್ಣಿನ ಹಣತೆಗೆ ಬೇಡಿಕೆ ಹೆಚ್ಚಾಗಿದೆ. ರೂ.2 ನಿಂದ 20 ರೂ. ತನಕ ಬೆಲೆಬಾಳುವ ಮಣ್ಣಿನ ದೀಪಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಬಹುತೇಕ ವ್ಯಾಪಾರಿಗಳ ಪ್ರಕಾರ, 10 ಗ್ರಾಹಕರ ಪೈಕಿ 7 ಜನ ಮಣ್ಣಿನ ಹಣತೆ ಬಗ್ಗೆ ವಿಚಾರಿಸುತ್ತಾರೆ. ಬೇರೆ ಬೇರೆ ವಿನ್ಯಾಸದ ಮಣ್ಣಿನ ಹಣತೆ ಮಾರುಕಟ್ಟೆಗೆ ಬಂದಿದ್ದು ಗ್ರಾಹಕರ ಆಯ್ಕೆಗೆ ಭರಪೂರ ಅವಕಾಶ ದೊರೆತಿದೆ.

ದೀಪಾವಳಿಗೆ ಗೋಪೂಜೆ, ಬಲೀಂದ್ರ ಪೂಜೆ, ಕೆಲವಡೆ ಆಯುಧಪೂಜೆ ನಡೆಯಲಿದೆ. ಇದಕ್ಕಾಗಿ ಕೃಷಿಕರ ಮನೆಗಳಲ್ಲಿ ಸಿದ್ಧತೆಗಳು ಜೋರಾಗಿವೆ. ಲಕ್ಷ್ಮೀ ಪೂಜೆ ಮತ್ತಿತರ ಸಂಭ್ರಮದ ಕಾರಣ ಹೂವಿನ ದರವೂ ಏರಿಕೆ ಕಂಡಿದೆ. ಈಗಾಗಲೇ ನಗರದ ವಿವಿಧ ಭಾಗಗಳಲ್ಲಿ, ರಸ್ತೆ ಬದಿಗಳಲ್ಲಿ ಹೊರ ಜಿಲ್ಲೆಯಿಂದ ಬಂದಿರುವ ನೂರಾರು ವ್ಯಾಪಾರಿಗಳು ಹೂವು ಮಾರಾಟದಲ್ಲಿ ನಿರತರಾಗಿದ್ದಾರೆ.

ನಕ್ಷತ್ರ ಮಾದರಿ, ಕಂದಿಲು ಆಕಾರದ ಆಕಾಶ ಬುಟ್ಟಿಗಳು, ಚಂದ್ರನ ಆಕಾರದ ಆಕಾಶ ಬುಟ್ಟಿಗಳು ಗ್ರಾಹಕರನ್ನು ಆಕರ್ಷಿಸುತ್ತಿದೆ. ಅಲ್ಲಲ್ಲಿ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲಾಗಿದ್ದು ನಾನಾ ಬಗೆಯ ಪಟಾಕಿಗಳನ್ನು ಮಾರಾಟ ಮಾಡಲಾಗುತ್ತಿದೆ. ಇಲ್ಲೂ ಗ್ರಾಹಕರನ್ನು ಸೆಳೆಯಲೆಂದು ಇರುವ ಆಫರ್‌ಗಳು ಗಮನ ಸೆಳೆಯುತ್ತಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಸಂಭ್ರಮ ಕಳೆಗಟ್ಟಿದೆ. ಅ.31ರಂದು ಹೆಚ್ಚಿನ ಕಡೆಗಳಲ್ಲಿ ಅಂಗಡಿ ಮುಂಗಟ್ಟು ವ್ಯಾಪಾರ ವ್ಯವಹಾರಗಳಲ್ಲಿ ಲಕ್ಷ್ಮೀ ಪೂಜೆ ಆಚರಿಸಲಾಗುತ್ತಿದೆ. ದೀಪಾವಳಿ ಪಟಾಕಿ ಸುರಕ್ಷತೆ ದೃಷ್ಟಿಯಿಂದ ತಾಲೂಕು ಆಡಳಿತವು ಪಟಾಕಿ ಮಾರಾಟ ಮಳಿಗೆಗಳನ್ನು ನಗರದಿಂದ ಹೊರ ಪ್ರದೇಶದಲ್ಲಿ ಅಳವಡಿಸುವ ಉದ್ದೇಶದಿಂದ ತಾಲೂಕು ಕ್ರೀಡಾಂಗಣದಲ್ಲಿ ಸ್ಟಾಲ್‌ಗ‌ಳಿಗೆ ವ್ಯವಸ್ಥೆ ಕಲ್ಪಿಸಿದೆ. ಸುಳ್ಯ, ಕಡಬ, ಬಂಟ್ವಾಳ ತಾಲೂಕಿನಲ್ಲೂ ಹಬ್ಬದ ಸಂಭ್ರಮ ಮನೆಮಾಡಿದೆ.

ಪಟಾಕಿ ಕಣ್ಣಿನ ಬಗ್ಗೆ ಎಚ್ಚರವಿರಲಿ
ದೀಪಾವಳಿ ಬೆಳಕಿನ ಹಬ್ಬವಾದರೂ ಪ್ರತೀ ವರ್ಷ ಹಲವರ ಬದುಕಲ್ಲಿ ಕತ್ತಲನ್ನು ಸಹ ಆವರಿಸುತ್ತದೆ. ದೀಪಾವಳಿ ಸಂದರ್ಭ ಪಟಾಕಿ ಸಿಡಿತದಿಂದ ಕಣ್ಣಿನ ಸಮಸ್ಯೆಯ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತವೆ. ಸಿಡಿಯುವ ಪಟಾಕಿಯಿಂದ ಸಣ್ಣ ಮಕ್ಕಳು ಗಾಯಗೊಳ್ಳುವುದು ಸೇರಿದಂತೆ ಹಲವು ದುರ್ಘ‌ಟನೆಗಳು ಸಂಭವಿಸುತ್ತವೆ. ಪಟಾಕಿ ಸಿಡಿಸುವಾಗ ಕನ್ನಡ ಧರಿಸುವುದು ಒಳ್ಳೆಯದು. ಪಟಾಕಿ ಸಿಡಿಸದೆ ಹಬ್ಬ ಆಚರಿಸಿ ಎನ್ನುವುದು ಸಾಧ್ಯವಾಗದ ಮಾತು. ಹಸುರು ಪಟಾಕಿ ಕೂಡ ಸಿಡಿಯುವಂತದ್ದೆ. ಪಟಾಕಿ ಸಿಡಿಸುವಾಗ ಕೈಯಲ್ಲಿ ಹಿಡಿದು ಮೇಲಿನ ಪೇಪರ್‌ ಸುಲಿದು ಬೆಂಕಿ ಹಚ್ಚುವ ಪ್ರಯತ್ನ ಬೇಡ. ಪಟಾಕಿ ಹಚ್ಚುವಾಗ ಕಿವಿಗೆ ಹತ್ತಿ ಹಾಗೂ ಮುಖಕ್ಕೆ ಮಾಸ್ಕ್ ಹಾಕಿಕೊಳ್ಳಿ, ಭಾರೀ ಸದ್ದು ಮಾಡುವ ಪಟಾಕಿಗಳಿಂದ ದೂರ ಸರಿಯಿರಿ. ಇಲ್ಲವಾದಲ್ಲಿ ಕಿವಿಯ ತಮಟೆಗೆ ಹಾನಿಯಾಗುವ ಸಾಧ್ಯತೆ ಹೆಚ್ಚು.

ಮನೆಮನೆಗಳಲ್ಲಿ ಸಂಭ್ರಮ
ಗ್ರಾಮೀಣ, ನಗರ ಭಾಗದಲ್ಲಿ ಹಬ್ಬದ ಸಂಭ್ರಮ ಹೆಚ್ಚಿದೆ. ಬುಧವಾರ ಸಂಜೆ ಹಂಡೆಗೆ ನೀರು ತುಂಬಿಸುವ ಶಾಸ್ತ್ರ ನಡೆದು ಮರುದಿನ ಬೆಳಗ್ಗಿನ ತೈಲಾಭ್ಯಂಗಕ್ಕೆ ಮನೆಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮುಂದಿನ ಮೂರು ದಿನಗಳಲ್ಲಿ ದೀಪೋತ್ಸವ, ವಿಶೇಷ ಪೂಜೆಗಳು, ಬಲಿಪಾಡ್ಯಮಿ, ಗೋಪೂಜೆ, ಅಂಗಡಿಪೂಜೆ, ಲಕ್ಷ್ಮೀ ಪೂಜೆ ಇತ್ಯಾದಿಗಳು ಮನೆ ಹಾಗೂ ದೇವಸ್ಥಾನಗಳಲ್ಲಿ ನಡೆಯಲಿದೆ.

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

5-vitla

Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.