Kundapura: ಜಿಂಕೆ ಮಾಂಸ ಸಾಗಾಟ; ನ್ಯಾಯಾಂಗ ಬಂಧನ
Team Udayavani, Oct 31, 2024, 9:00 PM IST
ಕುಂದಾಪುರ: ಬೈಕಿನಲ್ಲಿ ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಬಂಧಿಸಿದ್ದು ಇಬ್ಬರು ಪರಾರಿಯಾಗಿದ್ದಾರೆ.
ಬಂಧಿತ ಕೊಡ್ಲಾಡಿ ಗ್ರಾಮದ ಜಗದೀಶ ಮೇಸ್ತ (49)ನಿಗೆ ಮಂಗಳವಾರ ನ್ಯಾಯಾಲಯ ನ. 8ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಕೊಡ್ಲಾಡಿ ಗ್ರಾಮದ ಕೊಳಲಿಯಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆ ಸಿಬಂದಿಗೆ ಬೇಟೆಯಾಡಿದ ಜಿಂಕೆಯ ಮಾಂಸವನ್ನು ಬೈಕಿನಲ್ಲಿ ಸಾಗಾಟ ಮಾಡುತ್ತಿದ್ದ ಆರೋಪಿ ಸಿಕ್ಕಿಬಿದ್ದಿದ್ದು, ಜತೆಗಿದ್ದ ಇಬ್ಬರು ಪರಾರಿಯಾಗಿದ್ದಾರೆ. ಬಂಧಿತನಿಂದ 23 ಕೆಜಿ ಜಿಂಕೆ ಮಾಂಸ, ಬೈಕ್, ಚೂರಿ, ಗನ್ ಪೌಡರ್ ವಶಪಡಿಸಿಕೊಳ್ಳಲಾಗಿದೆ.
ಡಿಎಫ್ಒ ಗಣಪತಿ, ಎಸಿಎಫ್ ಪ್ರಕಾಶ್ ಪೂಜಾರಿ ಮಾರ್ಗದರ್ಶನದಲ್ಲಿ, ವಲಯ ಅರಣ್ಯಾಧಿಕಾರಿ ರಾಘವೇಂದ್ರ ನಾಯ್ಕ, ಉಪ ವಲಯ ಅರಣ್ಯಾಧಿಕಾರಿಗಳಾದ ನಿಂಗಪ್ಪ, ಗುರುರಾಜ, ಸುನಿಲ್, ಶರತ್, ವಿನಯ್, ಅರಣ್ಯ ರಕ್ಷಕರಾದ ಗಂಗಾಧರ, ಅಶೋಕ, ಸುನಿಲ್, ತಿಮ್ಮಪ್ಪ ಕಾರ್ಯಾಚರಣೆ ನಡೆಸಿದ್ದಾರೆ. ಸರಕಾರದ ಪರ ಸಹಾಯಕ ಸರಕಾರಿ ಅಭಿಯೋಜಕ ಉದಯ ಕುಮಾರ್ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.