Mangaluru: ಬಸ್‌ಗಾಗಿ ತೆರಳುವಾಗ ಟೆಂಪೋ ಹರಿದು ವ್ಯಕ್ತಿ ಸ್ಥಳದಲ್ಲೇ ಮೃತ್ಯು!

ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಸಮೀಪದ ಅಡಂಕುದ್ರು ಎಂಬಲ್ಲಿ ದುರ್ಘಟನೆ

Team Udayavani, Oct 31, 2024, 7:59 PM IST

MNG-1

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ಸಮೀಪದ ಅಡಂಕುದ್ರು ಎಂಬಲ್ಲಿ ಗುರುವಾರ ಸಂಜೆ ರಸ್ತೆ ಮಧ್ಯದಲ್ಲೇ ಕೆಟ್ಟು ನಿಂತಿದ್ದ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ನಿಂದ ಕೆಳಗಿಳಿದು, ಖಾಸಗಿ ಬಸ್‌ ಹತ್ತುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಇಂಟರ್ ಲಾಕ್ ತುಂಬಿದ್ದ ಟೆಂಪೋ ಲಾರಿ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಫರಂಗಿಪೇಟೆ ರೊಟ್ಟಿಗುಡ್ಡೆ ನಿವಾಸಿ ಆದಂ (63) ಮೃತಪಟ್ಟ ವ್ಯಕ್ತಿ. ಮಂಗಳೂರಿನಿಂದ ಮುಡಿಪುವಿಗೆ ಚಲಿಸುತ್ತಿದ್ದ ಕೆಎಸ್ಆರ್ ಟಿಸಿ ನಗರ ಸಾರಿಗೆ ಅಡಂಕುದ್ರು ಪ್ರದೇಶದಲ್ಲಿ ಹಾಳಾಗಿ ನಿಂತಿತು. ಈ ವೇಳೆ ಇತರ ಪ್ರಯಾಣಿಕರ ಜತೆ ಬಸ್‌ನಿಂದ ಇಳಿದ ಆದಂ ಅವರು, ಕೆಳಗಿಳಿದು ಮುಂದೆ ನಿಂತಿದ್ದ ಖಾಸಗಿ ಬಸ್‌ ಹತ್ತಲು ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಟೆಂಪೋ ಢಿಕ್ಕಿಯಾಗಿದೆ.

ಟೆಂಪೋ ಚಾಲಕ ಪರಾರಿ: 
ಚಾಲಕನ ನಿಯಂತ್ರಣ ಕಳೆದುಕೊಂಡು ಟೆಂಪೋ ಎಡಕ್ಕೆ ತಿರುಗಿದ್ದು ಹೆದ್ದಾರಿ ಬದಿಯ ಬೇಕರಿ ಮುಂಭಾಗದಲ್ಲಿ ನಿಂತಿದ್ದ ಎಲೆಕ್ಟ್ರಿಕ್ ಕಾರೊಂದಕ್ಕೆ ಮೊದಲು ಢಿಕ್ಕಿ ಹೊಡೆದು ಬಳಿಕ ಆದಂ ಅವರ ಮೇಲೆ ಹರಿದಿದೆ. ಬಳಿಕ ಮುಂದೆ ಸಾಗಿದ ಟೆಂಪೋ ಬೇಕರಿ ಅಂಗಡಿಯ ಬೃಹತ್ ನಾಮಫಲಕದ ಕಮಾನಿಗೂ ಗುದ್ದಿ ಗೂಡಂಗಡಿಯೊಂದಕ್ಕೆ ಢಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿದೆ. ಘಟನೆಯ ಬಳಿಕ ಟೆಂಪೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಕಾರಿನಲ್ಲಿದ್ದವರು ಅಪಾಯದಿಂದ ಪಾರು   
ಅಂಗಡಿಗೆ ಟೆಂಪೋ ಢಿಕ್ಕಿ ಹೊಡೆಯವ ಮೊದಲು ರಸ್ತೆ ಬದಿಯಲ್ಲಿ ನಿಂತಿದ್ದ ಇಲೆಕ್ಟ್ರಿಕ್ ಕಾರಿನ ಅಂಚಿಗೆ ತಾಗಿಕೊಂಡು ತೆರಳಿದೆ. ಆ ಕಾರಿನಲ್ಲಿ ಮಕ್ಕಳು ಸೇರಿ ಆರು ಜನರ ಕೂರಿಸಿದ್ದ ಚಾಲಕ ರಸ್ತೆ ಸಮೀಪದ ಬೇಕರಿಗೆ ತಿಂಡಿ ಖರೀದಿಗಾಗಿ ತೆರಳಿದ್ದರು. ಅದೃಷ್ಟವಶಾತ್ ಘಟನೆಯಿಂದ ಕಾರಿನಲ್ಲಿದ್ದವರು ಕೂದಲೆಳೆಯಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೆಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

court

Himachal Pradesh;ನಷ್ಟದಲ್ಲಿರುವ ಹೊಟೆಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.