Mangaluru: ವೆನ್ಲಾಕ್‌ಗೆ ಬಂದಿದ್ದ ಯುವತಿ ನಾಪತ್ತೆ
Team Udayavani, Oct 31, 2024, 9:30 PM IST
ಮಂಗಳೂರು: ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲು ವೆನ್ಲಾಕ್ ಆಸ್ಪತ್ರೆಗೆ ಬಂದಿದ್ದ ವಾಮಂಜೂರು ಪಡ್ಡಾಯಿಬೆಟ್ಟು ಕೆಲರೈ ಕೋಡಿ ನಿವಾಸಿ ರೇಣುಕಾ ದೇವಿಂದ್ರಪ್ಪ ಏರಿಮನಿ (29) ಅವರು ನಾಪತ್ತೆಯಾಗಿದ್ದಾರೆ.
ರೇಣುಕಾ ಅವರು ಎಲ್‌ಎಲ್‌ಬಿ ಮುಗಿಸಿದ್ದು, ಮಂಗಳೂರು ಕೋರ್ಟ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಅ. 28ರಂದು ಬೆಳಗ್ಗೆ 9.30ಕ್ಕೆ ತಾಯಿ ನೀಲವ್ವ ದೇವಿಂದ್ರಪ್ಪ ಏರಿಮನಿ ಅವರನ್ನು ವೆನ್ಲಾಕ್‌ಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಿದ್ದರು. 10 ಗಂಟೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಚೀಟಿ ಮಾಡಿಸುವ ವೇಳೆ ರೇಣುಕಾ ಅವರು ವಾಶ್ ರೂಂಗೆ ಹೋಗಿ ಬರುವುದಾಗಿ ತಿಳಿಸಿ ಹೋದವರು ವಾಪಾಸು ಬಂದಿಲ್ಲ.
ಆಸ್ಪತ್ರೆ ಸುತ್ತಮುತ್ತ ಹಾಗೂ ನೆರೆಕರೆಯವರಲ್ಲಿ ಸಂಬಂಧಿಕರಲ್ಲಿ ವಿಚಾರಿಸಿ ಹುಡುಕಿದರೂ ಪತ್ತೆಯಾಗಿಲ್ಲ. 5.2 ಅಡಿ ಎತ್ತರ, ಗೋಧಿ ಮೈಬಣ್ಣ, ಪಿಂಕ್ ಬಣ್ಣದ ಚೂಡಿದಾರ, ಕಪ್ಪು ಬಣ್ಣದ ವೇಲ್ ಮತ್ತು ಕಪ್ಪು ಪ್ಯಾಂಟ್ ಧರಿಸಿದ್ದಾರೆ. ಕನ್ನಡ, ತುಳು, ಇಂಗ್ಲಿಷ್ ಮತ್ತು ಹಿಂದಿ ಭಾಷೆ ಬಲ್ಲವರಾಗಿದ್ದಾರೆ. ಇವರ ಬಗ್ಗೆ ಮಾಹಿತಿ ಇದ್ದಲ್ಲಿ ಪಾಂಡೇಶ್ವರ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Golden Jubilee: ಸುವರ್ಣ ಮಹೋತ್ಸವ ಪ್ರಶಸ್ತಿ ಮೊತ್ತ 1ಲಕ್ಷ ರೂ.ಗೆ ಏರಿಕೆ: ಸಚಿವ ತಂಗಡಗಿ
Rain Alert: ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ನ.1ರಂದು ಭಾರೀ ಮಳೆ ಸಾಧ್ಯತೆ
Thokottu: ಮೊಹಮ್ಮದ್ ಸೈಫ್ವಾನ್ ಕೊಲೆ ಆರೋಪಿಗಳು ಖುಲಾಸೆ
TPG Passes Away: ಬಿಪಿಎಲ್ ಸಮೂಹ ಸಂಸ್ಥೆ ಸ್ಥಾಪಕ ಟಿ.ಪಿ.ಗೋಪಾಲನ್ ನಂಬಿಯಾರ್ ನಿಧನ
Mangaluru: ವೆನ್ಲಾಕ್‌ಗೆ ಬಂದಿದ್ದ ಯುವತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.