Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
ಹಾಸನಾಂಬೆ ದರ್ಶನಕ್ಕೆ ಪಾಸ್ ಹಂಚಿಕೆ: ತನಿಖೆಗೆ ಆಗ್ರಹ
Team Udayavani, Nov 1, 2024, 6:40 AM IST
ಹಾಸನ: ಹಾಸನಾಂಬೆ ದೇಗುಲದ ಬಾಗಿಲು ತೆರೆದ 7 ದಿನಗಳ ಅನಂತರ ಮಾಜಿ ಸಚಿವ ಎಚ್.ಡಿ. ರೇವಣ್ಣ ಗುರುವಾರ ಪತ್ನಿಯೊಂದಿಗೆ ಆಗಮಿಸಿ ದೇವಿಯ ದರ್ಶನ ಪಡೆದರು.
ಇದೇ ವೇಳೆ ವಿಶೇಷ ಪಾಸ್‌ಗಳನ್ನು ಬೇಕಾಬಿಟ್ಟಿ ಹಂಚಲಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ವಿರುದ್ಧ ಹರಿಹಾಯ್ದರು. ಹಾರ ಹಾಕಿ ಸ್ವಾಗತಿಸಲು ಮುಂದಾದ ಎಸಿ ಮಾರುತಿ ವಿರುದ್ಧವೂ ಗರಂ ಆದರು. ಹಾರ ಹಾಕಿಸಿಕೊಳ್ಳದೆ ಕೈಯಿಂದ ಮಾರುತಿ ಅವರನ್ನು ತಳ್ಳಿದರು.
ದೇವರ ದರ್ಶನ ಬಳಿಕ ಮಾತನಾಡಿ, ವಿಶೇಷ ಪಾಸ್ ಅಂತ ಕೊಟ್ಟು ಶಾಸಕರ ಗೌರವವನ್ನು ಗಾಳಿಗೆ ತೂರಿದ್ದಾರೆ. ನಾವೇನಾದರೂ ಪಾಸ್ ಕೊಡಿ ಅಂತ ಕೇಳಿದ್ದೆವಾ, ಯಾರನ್ನು ಕೇಳಿ ಪಾಸ್ ಮಾಡಿಸಿದಿರಿ? ನನ್ನ ಜೀವನದಲ್ಲಿ ಇಂತಹ ಹಲವು ಜಿಲ್ಲಾಧಿಕಾರಿಗಳನ್ನು ನೋಡಿದ್ದೇನೆ. ಜಿಲ್ಲೆಯಲ್ಲಿ ಏನೇನು ನಡೆಯುತ್ತಿದೆ ಎಂಬ ಬಗ್ಗೆ ಸಮಗ್ರವಾಗಿ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯುತ್ತೇನೆ. ಎರಡೂವರೆ ಲಕ್ಷ ವಿಐಪಿ, ವಿವಿಐಪಿ ಪಾಸ್ ಹಂಚಿರುವ ಬಗ್ಗೆ ತನಿಖೆ ನಡೆಯಲಿ ಎಂದು ರೇವಣ್ಣ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ
Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ
Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್ ಬಿಸಿ!
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
MUST WATCH
ಹೊಸ ಸೇರ್ಪಡೆ
New Delhi: ಹಬ್ಬದ ಋತು; ದೇಶದಲ್ಲಿ 4.5 ಲಕ್ಷ ವಾಹನಗಳ ದಾಖಲೆ ಮಾರಾಟ!
Karnataka Rajyotsava: ಮನೆ ತುಂಬಾ 5 ಲಕ್ಷ ಕನ್ನಡ ಪುಸ್ತಕ: ಹರಿಹರಪ್ರಿಯರ ಪ್ರಪಂಚ!
Ranchi: ಹೇಮಂತ್ ಸೊರೇನ್ ವಯಸ್ಸು 5 ವರ್ಷದಲ್ಲಿ 7 ವರ್ಷ ಹೆಚ್ಚಳ!; ಬಿಜೆಪಿ
Dhananjay: ಮದುವೆಗೆ ಸಿದ್ದವಾದ್ರು ಡಾಲಿ; ದುರ್ಗದ ಹುಡುಗಿಯ ಕೈ ಹಿಡಿಯಲಿದ್ದಾರೆ ಧನಂಜಯ
Goddess Lakshmi: ಲಕ್ಷ್ಮೀ ಆರಾಧನೆಯ ಪರ್ವ ಸಮಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.