Lucknow: ಹೊಟೇಲ್ ಬಳಿಕ 7 ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ
Team Udayavani, Nov 1, 2024, 11:03 AM IST
ಲಕ್ನೋ: ದೇಶಾದ್ಯಂತ ಹುಸಿ ಬಾಂಬ್ ಕರೆಗಳ ಸರಣಿ ಮುಂದುವರೆದಿದ್ದು, ಲಕ್ನೋದ 7 ಖಾಸಗಿ ಆಸ್ಪತ್ರೆಗಳಿಗೆ ಬುಧವಾರ ಬಾಂಬ್ ಬೆದರಿಕೆ ಎದುರಾಗಿದೆ.
ಲಕ್ನೋದ ವಿವಿಧ ಸ್ಥಳಗಳಲ್ಲಿರುವ ಆಸ್ಪತ್ರೆಗಳಿಗೆ ಇಮೇಲ್ ಮೂಲಕ ಬೆದರಿಕೆ ಒಡ್ಡಲಾಗಿತ್ತು. ಇಮೇಲ್ನಲ್ಲಿ ಆಸ್ಪತ್ರೆಗಳ ಆವರಣದಲ್ಲಿ ಇರಿಸಲಾಗಿರುವ ಬಾಂಬ್ಗಳು ಕೆಲವೇ ಗಂಟೆಗಳಲ್ಲಿ ಸ್ಫೋಟಿಸಲಿದೆ ಎಂದು ಎಚ್ಚರಿಸಲಾಗಿತ್ತು. ಬೆದರಿಕೆ ಬೆನ್ನಲ್ಲೇ ಸ್ಥಳಕ್ಕಾಗಮಿಸಿದ ಭದ್ರತಾ ಪಡೆಗಳು ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ದೊರೆಯದ ಹಿನ್ನೆಲೆಯಲ್ಲಿ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ದೃಢಪಡಿಸಿದ್ದಾರೆ. ಕಳೆದ ವಾರ ಲಕ್ನೋದ 9 ಹೊಟೇಲ್ಗಳು ಮತ್ತು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಒಡ್ಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…
Dr Bibek Debroy: ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ
Mangaluru: ಇಂದು ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ
Mangaluru: ಕರಾವಳಿ ಕೆಥೋಲಿಕರಿಂದ ಮೃತರು, ಸಂತ ಭಕ್ತರ ವಿಶಿಷ್ಟ ಸ್ಮರಣೆ
Mangaluru: ತುಳು ವಿಕ್ಷನರಿ, ವಿಕಿಸೋರ್ಸ್ ಲೈವ್ ಆರಂಭ
MUST WATCH
ಹೊಸ ಸೇರ್ಪಡೆ
Indrali ರೈಲ್ವೇ ನಿಲ್ದಾಣಕ್ಕೆ ಶೆಲ್ಟರ್ ಅಳವಡಿಕೆ
Deepavali ಹಿರಿಯರ ನೆನಪಿನ ಬೆಳಕು; ನರಕ ಚತುರ್ದಶಿಗೂ ಮೊದಲೇ ನಡೆಯುತ್ತದೆ ಸೈತಿನಕ್ಲೆನ ಪರ್ಬ
Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…
Dr Bibek Debroy: ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ
Waqf ವಿವಾದ ಹಿನ್ನೆಲೆ ಭೂದಾಖಲೆ ಪರಿಶೀಲನೆಗೆ ವಿಎಚ್ಪಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.