Mangaluru: ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ


Team Udayavani, Nov 1, 2024, 2:19 PM IST

22

ಮಂಗಳೂರು: ಭಾರತೀಯ ಚುನಾವಣ ಆಯೋಗವು ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025 ವೇಳಾಪಟ್ಟಿ ಹೊರಡಿಸಿದ್ದು, ಅ.29ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.

ನ.28ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುತ್ತದೆ. ನ.9, 10 ಹಾಗೂ 23, 24ರಂದು ವಿಶೇಷ ನೋಂದಣಿ ಅಭಿಯಾನವು ಆಯಾ ಮತಗಟ್ಟೆಗಳಲ್ಲಿ ನಡೆಯಲಿದೆ. ಡಿ.24ರಂದು ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದ್ದು, ಜ.6ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು.

ಕರಡು ಮತದಾರರ ಪಟ್ಟಿಯಲ್ಲಿ ಜಿಲ್ಲೆಯ ವಿಧಾನಸಭಾ ಕ್ಷೇತ್ರವಾರು ಮತದಾರರ ವಿವರ: ಬೆಳ್ತಂಗಡಿ- 2,32,269, ಮೂಡುಬಿದಿರೆ-2,10,211, ಮಂಗಳೂರು ನಗರ ಉತ್ತರ-2,56,112, ಮಂಗಳೂರು ನಗರ ದಕ್ಷಿಣ- 2,53,407, ಮಂಗಳೂರು- 2,09,955, ಬಂಟ್ವಾಳ- 2,29,236, ಪುತ್ತೂರು-2,16,821, ಸುಳ್ಯ- 2,09,261

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರಡು ಮತದಾರರ ಪಟ್ಟಿಯಲ್ಲಿ 51,815 ಮತದಾರರ ಸೇರ್ಪಡೆ, 22,948 ತೆಗೆದು ಹಾಕಿದ್ದು ಹಾಗೂ 28,827 ಹೆಸರು ತಿದ್ದುಪಡಿ ಮಾಡಲಾಗಿದೆ. 18ರಿಂದ 19 ವರ್ಷದ 19,905 ಮತದಾರರು ಸೇರ್ಪಡೆಯಾಗಿದ್ದಾರೆ. 85 ವರ್ಷ ಮೇಲ್ಪಟ್ಟ 23,894 ಮತದಾರರಿದ್ದಾರೆ. 14,268 ಅಂಗವಿಕಲ ಮತದಾರರಿದ್ದಾರೆ. 258 ಆನಿವಾಸಿ ಭಾರತೀಯ ಮತ್ತು 514 ಸೇವಾ ಮತದಾರರಿದ್ದಾರೆ .

ಯಾವುದಕ್ಕೆ ಯಾವ ಅರ್ಜಿ ನಮೂನೆಗಳು?
-ನಮೂನೆ 6: 18 ವರ್ಷ ತುಂಬಿದವರು ಮತದಾರರ ಪಟ್ಟಿಗೆ ಹೆಸರು ಸೇರಿಸಲು.
-ನಮೂನೆ 6ಎ: ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು.
-ನಮೂನೆ 7: ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು.
-ನಮೂನೆ 8: ವಿಳಾಸ ಬದಲಾವಣೆ, ಮತದಾರರ ಪಟ್ಟಿಯಲ್ಲಿ ಹೆಸರು, ತಂದೆಯ ಹೆಸರು, ವಿಳಾಸ, ವಯಸ್ಸು, ಲಿಂಗ ಮುಂತಾದವುಗಳನ್ನು ತಿದ್ದುಪಡಿ ಮಾಡಲು, ಎಪಿಕ್‌ ಕಾರ್ಡ್‌ ಬದಲಾಯಿಸಲು ಇತ್ಯಾದಿ.
-ನಮೂನೆ 6: ಮತದಾರರ ಗುರುತಿನ ಚೀಟಿಗೆ ಆಧಾರ್‌ ಸಂಖ್ಯೆ ಜೋಡಣೆ ಮಾಡಲು.

ಜ.1, ಎ.1, ಜು.1, ಅ.1ರಂದು 18 ವರ್ಷ ತುಂಬಿರುವ ಮತದಾರರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ನ.9, 10, 23, 24ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿಶೇಷ ನೋಂದಣಿ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ಅರ್ಹ ಮತದಾರರು ಪಟ್ಟಿಗೆ ಹೆಸರು ಸೇರಿಸಲು ಅರ್ಜಿ ಸಲ್ಲಿಸಬಹುದು.
ವೋಟರ್‌ ಹೆಲ್ಪ್ಲೈನ್‌ ಆ್ಯಪ್‌ ಅಥವಾ https://voters.eci.gov.in ವೆಬ್‌ಸೈಟ್‌ ಮೂಲಕವೂ ಅರ್ಜಿ ಸಲ್ಲಿಸಬಹುದು. ವಯಸ್ಸು ಮತ್ತು ವಾಸಸ್ಥಳದ ದಾಖಲೆಗಳು ಮತ್ತು ಒಂದು ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರವನ್ನು ಲಗತ್ತಿಸಬೇಕು.

ಸಾರ್ವಜನಿಕರು ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿ ಕಾರಿಗಳಲ್ಲಿ ಅಥವಾ ಮತದಾರ ನೋಂದಣಾಧಿ ಕಾರಿ ಕಚೇರಿ (ಎ.ಸಿ. ಕಚೇರಿ, ತಹಶೀಲ್ದಾರ್‌ ಕಚೇರಿ) ಭೇಟಿ ನೀಡಿ ಹೆಸರು ನೋಂದಾಯಿಸುವ ಬಗ್ಗೆ ಅಥವಾ ಲೋಪದೋಷಗಳ ಬಗ್ಗೆ ಪರಿಶೀಲಿಸಬಹುದು.

ವೆಬ್‌ ಪೋರ್ಟಲ್‌ www.ecokarnataka.kar.nic.in, https://voters.eci.gov.in ಮತ್ತು www.dk.nic.in
ನಲ್ಲಿ ವಿವರಗಳನ್ನು ಪರಿಶೀಲಿಸಬಹುದು. ಮತದಾರರ ಸಹಾಯವಾಣಿ 1950 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಮತದಾರರ ಪಟ್ಟಿ ಪರಿಷ್ಕರಣೆ ಪರಿಣಾಮಕಾರಿಯಾಗಲು ಎಲ್ಲ ರಾಜಕೀಯ ಪಕ್ಷಗಳು ಪ್ರತಿ ಬೂತ್‌ ಮಟ್ಟದಲ್ಲಿ ಬಿಎಲ್‌ಎಗಳನ್ನು ನೇಮಕಾತಿ ಮಾಡಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.