Mangaluru: ತುಳು ವಿಕ್ಷನರಿ, ವಿಕಿಸೋರ್ಸ್ ಲೈವ್ ಆರಂಭ
Team Udayavani, Nov 1, 2024, 2:25 PM IST
ಮಂಗಳೂರು: ಅಂತರ್ಜಾಲ ನಿಘಂಟು ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್ ಅಧಿಕೃತವಾಗಿ ಲೈವ್ ಆಗಿದ್ದು, ಬಳಕೆದಾರರು ತುಳು ವಿಕ್ಷನರಿಯಲ್ಲಿ ಮಾಹಿತಿ ಹುಡುಕಬಹುದು, ಸಂಪಾದಿಸಬಹುದು ಮತ್ತು ಕೊಡುಗೆ ನೀಡಲು ಅವಕಾಶವಿದೆ.
2018 ಆಗಸ್ಟ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ತುಳು ಸ್ನಾತಕೋತ್ತರ ಪದವಿ ಪ್ರಾರಂಭವಾದ ಸಂದರ್ಭದಲ್ಲಿ ತುಳು ವಿಕ್ಷನರಿಯ ಕೆಲಸವೂ ಪ್ರಾರಂಭವಾಗಿತ್ತು. ಇದು ಜಾಗತಿಕ ಮಟ್ಟದಲ್ಲಿ ತುಳು ಭಾಷೆಯನ್ನು ಗುರುತಿಸಲು ಪ್ರಮುಖ ಸಂಪನ್ಮೂಲವಾಗಿ ಕಾರ್ಯನಿರ್ವಹಿಸುತ್ತದೆ. ತುಳು ಭಾಷಾಭಿಮಾನಿಗಳು ಮತ್ತು ವಿದ್ವಾಂಸರ ಸಹಯೋಗದಿಂದ ಈ ತುಳು ಶಬ್ದಕೋಶವನ್ನು ವಿಸ್ತರಿಸಲು ಮತ್ತು ಪರಿಷ್ಕರಿಸಲು ಡಿಜಿಟಲ್ ಮಾಧ್ಯಮದಲ್ಲಿ ಸಾಧ್ಯವಿದೆ.
ವಿಕ್ಷನರಿ ಒಂದು ಉಚಿತ, ಬಹುಭಾಷಾ ಆನ್‌ಲೈನ್ ನಿಘಂಟು. ವ್ಯಾಖ್ಯಾನಗಳು, ಉತ್ಪತ್ತಿಗಳು, ಉಚ್ಚಾರಣೆಗಳು, ಚಿತ್ರ, ಅನುವಾದಗಳು, ಗಾದೆ, ಒಗಟು, ನುಡಿಗಟ್ಟು ಮತ್ತು ಇನ್ನಿತರ ವಿಷಯಗಳನ್ನು ಸೇರಿಸಿಕೊಳ್ಳಬಹುದು. ಸಾಂಪ್ರದಾಯಿಕ ನಿಘಂಟುಗಳಿಗಿಂತ ಭಿನ್ನವಾಗಿ, ಇದು ಜಗತ್ತಿನಾದ್ಯಂತದ ಸ್ವಯಂಸೇವಕರ ಸಹಯೋಗದೊಂದಿಗೆ ಸಂಪಾದಿ ಸಲ್ಪಡುತ್ತದೆ. ಇದು ನಿರಂತರವಾಗಿ ಮಾರ್ಪಾಡು ಮತ್ತು ವಿಕಸನದಿಂದ ನೈಜ ಸಮಯದಲ್ಲಿ ಬೆಳೆಯುವಂತಹ ನಿಘಂಟು ಅಗಿದೆ. ತುಳು ವಿಕ್ಷನರಿಯಲ್ಲಿ 3000ಕ್ಕೂ ಅಧಿಕ ಶಬ್ದಗಳಿದ್ದು, ವ್ಯವಸ್ಥಿತವಾಗಿ ವ್ಯಾಕರಣ ನೆಲೆಯಲ್ಲಿ ವರ್ಗೀಕರಿಸಲಾಗಿದೆ. ಇದು ತುಳು ಭಾಷೆಯ ಪದಗಳ ಬಗ್ಗೆ ಆಳವಾದ ಮಾಹಿತಿಯನ್ನು ಒದಗಿಸುತ್ತದೆ. ಪದ, ಸಮಾನಾರ್ಥಗಳು, ಸಾಹಿತ್ಯ, ಪಾಡ್ದನ ಇತ್ಯಾದಿ ಬಳಕೆಯ ಉದಾಹರಣೆಗಳು, ಪದದ ಮೂಲಗಳು, ಇತರ ಭಾಷೆಯ ಸಮಾನಾರ್ಥಗಳು ಮತ್ತು ಅವುಗಳಿಗೆ ಲಿಂಕ್ ಮತ್ತು ವ್ಯಾಕರಣ ವಿವರಗಳು ಇತ್ಯಾದಿ ಭಾಷಾ ಕಲಿಕೆಗೆ, ಭಾಷಾಶಾಸ್ತ್ರಜ್ಞರಿಗೆ ಮತ್ತು ಸಾಂಸ್ಕೃತಿಕ ಅಧ್ಯಯನಕ್ಕೆ ಸಹಾಯವಾಗುವುದು.
ತುಳು ವಿಕ್ಷನರಿಯ ಜತೆಗೆ ತುಳು ವಿಕಿಸೋರ್ಸ್ ಕೂಡ ಪ್ರಾರಂಭವಾಗಿದೆ. ವಿಕಿಸೋರ್ಸ್ ಉಚಿತ ಆನ್‌ಲೈನ್ ಡಿಜಿಟಲ್ ಲೈಬ್ರೆರಿ. ಸಾರ್ವಜನಿಕ ಡೊಮೇನ್‌ನಲ್ಲಿ ಅಥವಾ ಮುಕ್ತ ಹಕ್ಕುಸ್ವಾಮ್ಯದ ಅಡಿಯಲ್ಲಿ ಮೂಲ ಪಠ್ಯಗಳನ್ನು ಹೊಂದಿದ್ದು, ಓದುಗರು, ಪುಸ್ತಕ ಬಳಕೆದಾರರು ವಿಷಯದ ನಿಖರತೆಯನ್ನು ಖಚಿತಪಡಿಸಿಕೊಳ್ಳಲು ಪಠ್ಯಗಳನ್ನು ವಿಕಿಸೋರ್ಸ್ ಸಹಕಾರಿ. ಪುಸ್ತಕವನ್ನು ಲಿಪ್ಯಂತರ ಮತ್ತು ಪ್ರೂಫ್ ರೀಡಿಂಗ್ ಓದುವ ಅನುಕೂಲವನ್ನು ಸಂಪಾದಕರು ಮಾಡಿಕೊಡುವರು. ಹೀಗೆ ಸಂಪಾದನೆಯಾದ ಪುಸ್ತಕವನ್ನು ಓದಬಹುದು ಮತ್ತು ಸಂಗ್ರಹಿಸಿ ಇಟ್ಟುಕೊಳ್ಳಬಹುದು. ತುಳು ವಿಕಿಸೋರ್ಸ್ ಪುಸ್ತಕಗಳು, ಪತ್ರಗಳು, ಐತಿಹಾಸಿಕ ಪಠ್ಯಗಳು ಮತ್ತು ಸಾಹಿತ್ಯ ಕೃತಿಗಳಂತಹ ಮೂಲ ತುಳು ದಾಖಲೆಗಳನ್ನು ಸಂರಕ್ಷಿಸಲು ಗಮನಹರಿಸುತ್ತದೆ. ಇದು ಸಂಶೋಧಕರು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ತುಳು ಸಾಹಿತ್ಯ ಪರಂಪರೆಯ ಸಂರಕ್ಷಣೆಯಲ್ಲಿ ಆಸಕ್ತಿ ಹೊಂದಿರುವವರಿಗೆ ವಿಶೇಷವಾಗಿ ಉಪಯುಕ್ತವಾಗಿದೆ.
ಇದಕ್ಕೆ ಡಾ|ಯು.ಬಿ. ಪವನಜ, ಕರಾವಳಿ ವಿಕಿಮೀಡಿಯನ್ ಯೂಸರ್ ಗ್ರೂಪಿನ ಸದಸ್ಯರಾದ ಡಾ|ವಿಶ್ವನಾಥ ಬದಿಕಾನ, ದಿ|ರವೀಂದ್ರ ಮುಡ್ಕೂರು, ಭರತೇಶ ಅಲಸಂಡೆಮಜಲು, ಡಾ|ಕಿಶೋರ್ ಕುಮಾರ್ ರೈ ಶೇಣಿ ಮತ್ತು ಯಕ್ಷಿತಾ ಮೂಡುಕೊಣಾಜೆ, ಅನೂಪ್ ರಾವ್ ಕಾರ್ಕಳ, ಚಿದಾನಂದ ಕಂಪ, ಸಹಕರಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್ “ಉದಯವಾಣಿ’ಗೆ ಪ್ರತಿಕ್ರಿಯಿಸಿ “ತುಳು ವಿಕ್ಷನರಿ ಮತ್ತು ತುಳು ವಿಕಿಸೋರ್ಸ್ ಇವುಗಳ ಪ್ರಾರಂಭವು ಜಾಗತಿಕ ವೇದಿಕೆಯಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವ ಮತ್ತು ಸಂರಕ್ಷಿಸುವ ಪ್ರಮುಖ ಹೆಜ್ಜೆಯಾಗಿದೆ. ಭವಿಷ್ಯದ ಪೀಳಿಗೆಯು ಈ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಕಲಿಯಲು ಒಂದು ಉತ್ತಮ ಅವಕಾಶವಾಗಲಿದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.