Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್
ಈ ಹಿಂದೆಯೂ ಬೆನ್ನು ನೋವಿಗೆ ಗುರಿಯಾಗಿದ್ದರು.. ತಜ್ಞ ವೈದ್ಯರಿಂದ ಪರಿಶೀಲನೆ...
Team Udayavani, Nov 1, 2024, 4:27 PM IST
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಬಂದಿರುವ ನಟ ದರ್ಶನ್ ಅವರು ಶುಕ್ರವಾರ (ನ1ರಂದು) ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.
ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಗೆ ತಜ್ಞ ವೈದ್ಯರು ಚಿಕಿತ್ಸೆ ನೀಡಲು ಪರೀಕ್ಷೆ ಮಾಡುತ್ತಿದ್ದಾರೆ. ರಕ್ತ ಸೇರಿ ವಿವಿಧ ಅಗತ್ಯ ಪರೀಕ್ಷೆ ನಡೆಸಲಾಗಿದ್ದು ರಿಪೋರ್ಟ್ ಬಂದ ನಂತರ ಮುಂದಿನ ಚಿಕಿತ್ಸೆ ನೀಡಲಿದ್ದಾರೆ. ಆಸ್ಪತ್ರೆಯಲ್ಲಿ ಸೂಟ್ ರೂಮ್( suite room) ಬುಕ್ ಮಾಡಲಾಗಿದೆ.
ಈ ಹಿಂದೆಯೂ ದರ್ಶನ್ ಚಿತ್ರವೊಂದರ ಚಿತ್ರೀಕರಣದ ವೇಳೆ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬಿದ್ದು ಬೆನ್ನುನೋವಿಗೆ ಗುರಿಯಾಗಿದ್ದರು. ಹಿಂದೆ ಪಡೆದುಕೊಂಡ ಚಿಕಿತ್ಸೆಯ ಕುರಿತಾಗಿಯೂ ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮತ್ತು ನಟ ಧನ್ವೀರ್ ಅವರಿದ್ದಾರೆ.
ಆಸ್ಪತ್ರೆ ಬಳಿ ಬಿಗಿ ಬಂದೋಬಸ್ತ್
ನೂರಾರು ಅಭಿಮಾನಿಗಳು ಆಸ್ಪತ್ರೆಯ ಬಳಿಯೂ ಜಮಾಯಿಸುತ್ತಿದ್ದ, ಯಾರಿಗೂ ತೊಂದರೆಯಾಗಬಾರದು ಎಂಬ ಉದ್ದೇಶದಿನ ಕೆಎಸ್ ಆರ್ ಪಿ ತುಕಡಿ ಮತ್ತು 50 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಬುಧವಾರ(ಅ30) ಹೈಕೋರ್ಟ್ ದರ್ಶನ್ ಅವರಿಗೆ ಚಿಕಿತ್ಸೆ ಪಡೆದುಕೊಳ್ಳುವ ಸಲುವಾಗಿ ಆರು ವಾರಗಳ ವೈದ್ಯಕೀಯ ಜಾಮೀನು ಮಂಜೂರು ಮಾಡಿ, ತಮ್ಮ ಆಯ್ಕೆಯ ಆಸ್ಪತ್ರೆಗೆ ದಾಖಲಾಗುವಂತೆ ಸೂಚನೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಸ್ನೇಹಿತರಿಗೆ ಕೈ ಜೋಡಿಸಿ ಮನವಿ ಮಾಡಿಕೊಳ್ಳುವೆ, ದಾರಿ ತಪ್ಪಿಸಬೇಡಿ: ಜಮೀರ್
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Deepawali; ಸರಣಿ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Waqf issue: ವಕ್ಫ್ ಬೋರ್ಡ್ ರದ್ದತಿಗೆ ಪತ್ರ ಚಳವಳಿ ನಡೆಸಬೇಕು: ಎಂ.ಪಿ.ರೇಣುಕಾಚಾರ್ಯ ಆಗ್ರಹ
MUST WATCH
ಹೊಸ ಸೇರ್ಪಡೆ
Online Trading: ಆನ್ಲೈನ್ ಲಿಂಕ್ ಅಪ್ಲಿಕೇಶನ್ ಬಳಸಿ 27 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ
Panambur: ಬೀಚ್ ಬಳಿ ನಿಲ್ಲಿಸಿದ್ದ ಕಾರಿನಿಂದ ಚಿನ್ನಾಭರಣ, ನಗದು ಕಳವು
India A vs Australia A: ಸುದರ್ಶನ್ 96, ಪಡಿಕ್ಕಲ್ 80, ಆಸೀಸ್ಗೆ ಭಾರತ ತಿರುಗೇಟು
Jammu – Kashmir: ಮುಂದುವರೆದ ಉಗ್ರರ ದಾಳಿ… ಇಬ್ಬರು ವಲಸೆ ಕಾರ್ಮಿಕರಿಗೆ ಗಾಯ
BJP ಸ್ನೇಹಿತರಿಗೆ ಕೈ ಜೋಡಿಸಿ ಮನವಿ ಮಾಡಿಕೊಳ್ಳುವೆ, ದಾರಿ ತಪ್ಪಿಸಬೇಡಿ: ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.