Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Team Udayavani, Nov 1, 2024, 7:21 PM IST
ಮೂಡಿಗೆರೆ: ಬೈಕಿಗೆ ಬೀದಿನಾಯಿ ಅಡ್ಡಬಂದು ಅಪಘಾತ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಪಟ್ಟಣದಲ್ಲಿ ಶುಕ್ರವಾರ (ನ.1) ನಡೆದಿದೆ.
ಮೃತ ಯುವಕ ಗೋಣಿಬೀಡು ಸಮೀಪದ ಆನೆದಿಬ್ಬ ನಿವಾಸಿ ಜಾಫರ್ (24 ವರ್ಷ).
ಆನೆದಿಬ್ಬ ಗ್ರಾಮದ ಇಸಾಕ್ ಎಂಬುವವರ ಪುತ್ರ ಜಾಫರ್ ಶುಕ್ರವಾರ ಬೆಳಿಗ್ಗೆ ಸಮೀಪದ ಬೆಟ್ಟದಮನೆಯ ಗ್ರಾಮದಲ್ಲಿ ತಾನು ಕೆಲಸ ಮಾಡಿದ್ದ ಹಣವನ್ನು ಪಡೆಯಲು ಹೋಗಿದ್ದರು ಎನ್ನಲಾಗಿದೆ. ಬೆಟ್ಟದಮನೆಯಿಂದ ವಾಪಾಸಾಗುತ್ತಿದ್ದ ವೇಳೆ ಗೋಣಿಬೀಡು ಪಟ್ಟಣ ವ್ಯಾಪ್ತಿಯಲ್ಲಿ ಬೀದಿನಾಯಿಯೊಂದು ಬೈಕಿಗೆ ಅಡ್ಡಬಂದಿದ್ದು, ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಚರಂಡಿಗೆ ಮಗುಚಿದೆ. ಈ ಸಂದರ್ಭ ಚರಂಡಿಗೆ ಅಳವಡಿಸಿದ್ದ ಸಿಮೆಂಟ್ ಚಪ್ಪಡಿಗಳಿಗೆ ಜಾಫರ್ ತಲೆ ಹೊಡೆದಿದ್ದು, ತೀವ್ರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ನಾಯಿಯೂ ಕೂಡ ಸ್ಥಳದಲ್ಲೇ ಮೃತಪಟ್ಟಿದೆ ಎಂದು ತಿಳಿದುಬಂದಿದೆ.
ಗೋಣಿಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸ್ನೇಹಜೀವಿಯಾಗಿದ್ದ ಜಾಫರ್ ನಿಧನಕ್ಕೆ ಸ್ಥಳೀಯರು ಕಂಬನಿ ಮಿಡಿದಿದ್ದಾರೆ.
ಇದನ್ನೂ ಓದಿ: Delhi pollution; ಹಾಳಾದ ರಸ್ತೆಗಳನ್ನು ಸರಿಪಡಿಸುವಲ್ಲಿ ಆಪ್ ವಿಫಲ: ಬಿಜೆಪಿ ವಾಗ್ದಾಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.