Intra-Squad Match: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸ… ಅಭ್ಯಾಸ ಪಂದ್ಯ ಕೈಬಿಟ್ಟ ಭಾರತ
Team Udayavani, Nov 2, 2024, 7:10 AM IST
ನವದೆಹಲಿ: ಬಾರ್ಡರ್-ಗಾವಸ್ಕರ್ ಸರಣಿಗಾಗಿ ಆಸ್ಟ್ರೇಲಿಯಕ್ಕೆ ತೆರಳಲಿರುವ ಭಾರತ ತಂಡ, ಅಲ್ಲಿ ಭಾರತ “ಎ’ ತಂಡದೆದುರಿನ ತ್ರಿದಿನ ಅಭ್ಯಾಸ ಪಂದ್ಯವನ್ನು ರದ್ದು ಮಾಡಿದೆ. ಇದರ ಬದಲು ಹೆಚ್ಚುವರಿ ನೆಟ್ ಅಭ್ಯಾಸ ನಡೆಸಿ ಸರಣಿಗೆ ಅಣಿಯಾಗುವುದು ಭಾರತ ತಂಡದ ಉದ್ದೇಶವಾಗಿದೆ ಎಂದು ತಿಳಿದು ಬಂದಿದೆ.
ಸರಣಿಯ ಮೊದಲ ಟೆಸ್ಟ್ ನ.22ರಂದು ಪರ್ಥ್ನಲ್ಲಿ ಆರಂಭವಾಗಲಿದೆ. ಇದಕ್ಕೂ ಮುನ್ನ ಋತುರಾಜ್ ಗಾಯಕ್ವಾಡ್ ನೇತೃತ್ವದ ಭಾರತ “ಎ’ ವಿರುದ್ಧ ಭಾರತ ತಂಡ ಪರ್ಥ್ನಲ್ಲೇ ಅಭ್ಯಾಸ ಪಂದ್ಯವೊಂದನ್ನು (ನ.15-17) ಆಡುವ ಕಾರ್ಯಕ್ರಮವಿತ್ತು. ಕೋಚ್ ಗೌತಮ್ ಗಂಭೀರ್ ಮತ್ತು ತಂಡದ ಕೆಲವು ಹಿರಿಯ ಆಟಗಾರರು ಹೆಚ್ಚುವರಿ ಅಭ್ಯಾಸದ ಅವಧಿಯನ್ನು ಬಯಸಿದ್ದರಿಂದ ಈ ಪಂದ್ಯವನ್ನು ಕೈಬಿಡಲಾಗಿದೆ ಎಂದು ತಿಳಿದು ಬಂದಿದೆ.
ಸದ್ಯ ಭಾರತ “ಎ’ ತಂಡ ಆಸ್ಟ್ರೇಲಿಯಾ “ಎ’ ವಿರುದ್ಧ ಅನಧಿಕೃತ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಭಾರತ ಹಿಂದಿನೆರಡೂ ಆಸ್ಟ್ರೇಲಿಯಾ ಪ್ರವಾಸದ ವೇಳೆ ಅಭ್ಯಾಸ ಪಂದ್ಯವನ್ನಾಡಿಯೇ ಟೆಸ್ಟ್ ಸರಣಿಯನ್ನು ಆಡಲಿಳಿದಿತ್ತು. 2018-19ರಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ ಇಲೆವೆನ್ ವಿರುದ್ಧ ಚತುರ್ದಿನ ಪಂದ್ಯ, 2020-21ರಲ್ಲಿ ಆಸ್ಟ್ರೇಲಿಯ “ಎ’ ವಿರುದ್ಧ ತ್ರಿದಿನ ಅಭ್ಯಾಸ ಪಂದ್ಯದಲ್ಲಿ ಪಾಲ್ಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KKR: ಕೆಕೆಆರ್‌ಗೆ ಅಗರ್ತಲಾ ಮೈದಾನ 2ನೇ ತವರು ಅಂಗಳ?
India A vs Australia A: ಸುದರ್ಶನ್ 96, ಪಡಿಕ್ಕಲ್ 80, ಆಸೀಸ್‌ಗೆ ಭಾರತ ತಿರುಗೇಟು
1st ODI: ಇಂಗ್ಲೆಂಡ್ ವಿರುದ್ಧ ವಿಂಡೀಸ್‌ಗೆ 8 ವಿಕೆಟ್ ಜಯ
INDvsNZ: ಮತ್ತೆ ಬ್ಯಾಟಿಂಗ್ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ
MI: ಸೂರ್ಯ, ಹಾರ್ದಿಕ್ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್: ರೋಹಿತ್ ಹೇಳಿದ್ದೇನು?
MUST WATCH
ಹೊಸ ಸೇರ್ಪಡೆ
Taliban; ಮಹಿಳೆಯರ ಪ್ರಾರ್ಥನೆ ವಿಚಾರದಲ್ಲಿ ಮತ್ತೊಂದು ವಿಲಕ್ಷಣ ನಿಯಮ!!
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣದ ಸಿಬಂದಿಗೆ ಬೆದರಿಕೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Prashant Kishor; ಸಲಹೆ ನೀಡಲು ಒಂದು ಚುನಾವಣೆಗೆ ಪಡೆಯುಯುತ್ತಿದ್ದ ಶುಲ್ಕ ಬಹಿರಂಗ!
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.