Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Team Udayavani, Nov 1, 2024, 10:10 PM IST
ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ (ನ.1) ನಡೆಸಿದ ಕಾರ್ಯಾಚರಣೆಯಲ್ಲಿ ನಗರಕ್ಕೆ ವಿದೇಶದಿಂದ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿ, ಆತನಿಂದ 30 ಲಕ್ಷ ರೂ. ಮೌಲ್ಯದ ಹೈಡ್ರೋವೀಡ್ ಗಾಂಜಾ, 2.5 ಕೆಜಿ ಗಾಂಜಾ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪುತ್ತೂರು ಹಾರಾಡಿಯವನಾಗಿದ್ದು, ಪ್ರಸ್ತುತ ತೊಕ್ಕೊಟ್ಟು ಚೊಂಬುಗುಡ್ಡೆ ಮಸೀದಿ ಹತ್ತಿರದ ನಿವಾಸಿ ಎಚ್. ಮೊಹಮ್ಮದ್ ಹಫೀಜ್ (23) ಬಂಧಿತ ಆರೋಪಿ.
ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ನಗರದ ಕುದ್ರೋಳಿ ಪರಿಸರದಲ್ಲಿ ಹೈಡ್ರೋವೀಡ್ ಗಾಂಜಾ ಮತ್ತು ಗಾಂಜಾವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.
ಈತನ ವಶದಿಂದ 30 ಲಕ್ಷ ರೂಪಾಯಿ ಮೌಲ್ಯದ 300 ಗ್ರಾಂ ಹೈಡ್ರೋವೀಡ್ ಗಾಂಜಾ ಹಾಗೂ 75,000 ರೂ.ಮೌಲ್ಯದ 2.5 ಕೆಜಿ ಗಾಂಜಾ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯಿಂದ ಅಂದಾಜು 30,85,500 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಥೈಲ್ಯಾಂಡ್ ನಿಂದ ಸಾಗಾಟ
ಈ ಹೈಡ್ರೋವೀಡ್ ಗಾಂಜಾವನ್ನು ಥೈಲ್ಯಾಂಡ್‌ನಿಂದ ತಂದಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಅಕ್ರಮ ಮಾದಕ ವಸ್ತು ಮಾರಾಟ ದಂಧೆಯಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
Panambur: ಬೀಚ್ ಬಳಿ ನಿಲ್ಲಿಸಿದ್ದ ಕಾರಿನಿಂದ ಚಿನ್ನಾಭರಣ, ನಗದು ಕಳವು
Waqf ವಿವಾದ ಹಿನ್ನೆಲೆ ಭೂದಾಖಲೆ ಪರಿಶೀಲನೆಗೆ ವಿಎಚ್‌ಪಿ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.