Karnataka; ಕನ್ನಡವನ್ನು ಅವಮಾನಿಸಿದರೆ ಕಠಿನ ಕ್ರಮ: ಗುಡುಗಿದ ಸಿಎಂ

ಜಾಲತಾಣದಲ್ಲಿ ಕನ್ನಡ ಅವಹೇಳನ ಪ್ರಕರಣಗಳ ಬೆನ್ನಲ್ಲೇ ಕಿಡಿ

Team Udayavani, Nov 2, 2024, 6:30 AM IST

1-a-cmmm

ಬೆಂಗಳೂರು: ಇಂದು ಸಾಮಾಜಿಕ ಜಾಲತಾಣ ಗಳಲ್ಲಿ ಕನ್ನಡ ಹಾಗೂ ಕನ್ನಡಿಗರನ್ನು ಹೀಯಾಳಿಸುವ ಪ್ರವೃತ್ತಿ ಮುಂದುವರಿದಿದೆ. ಇದನ್ನು ನಾಡದ್ರೋಹ ಎಂದು ಪರಿಗಣಿಸಿ ಅಂತಹ ಕಿಡಿಗೇಡಿಗಳ ವಿರುದ್ಧ ಸರಕಾರ ಕಠಿನ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ಏರ್ಪಡಿ ಸಿದ್ದ 69ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಧ್ವಜಾ ರೋಹಣ ನೆರವೇರಿಸಿ ಅವರು ಮಾತನಾಡಿದರು.
ಕನ್ನಡಕ್ಕೆ 2 ಸಾವಿರ ವರ್ಷಗಳ ಇತಿಹಾಸವಿದ್ದು, ಶಾಸ್ತ್ರೀಯ ಸ್ಥಾನಮಾನ ಲಭಿಸಿದೆ. ಇಂಥ ಭಾಷೆಯನ್ನು ಬಲಿಗೊಡುವಷ್ಟು ಉದಾರಿಗಳು ನಾವಾಗಬಾರದು. ಅತಿಯಾದ ಭಾಷಾ ವ್ಯಾಮೋಹ ಸರಿಯಲ್ಲ. ಆದರೆ ಕನ್ನಡಾಭಿಮಾನವನ್ನು ಎಂದಿಗೂ ಬಿಟ್ಟುಕೊಡಬಾರದು.

ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗ ರಾಗಬೇಕು. ಮಾತೃಭಾಷೆ ಕನ್ನಡವನ್ನು ವ್ಯಾವಹಾರಿಕ ವಾಗಿ ಬಳಸುವುದರ ಜತೆಗೆ ಇತರರು ಕೂಡ ಕನ್ನಡದಲ್ಲಿಯೇ ಮಾತ ನಾಡುವಂತೆ ಉತ್ತೇಜಿಸುವ ಶಪಥ ಕೈಗೊಳ್ಳಬೇಕು ಎಂದರು.

ಪರಭಾಷೆಗಳನ್ನು ಕಲಿಯುವುದು ತಪ್ಪಲ್ಲ, ಇದರಿಂದ ಭಾಷಾ ಸಂಪತ್ತು ಹೆಚ್ಚುತ್ತದೆ. ಕರ್ನಾಟಕದಲ್ಲಿದ್ದು ಇಲ್ಲಿನ ಅನ್ನ, ನೀರು, ಗಾಳಿ ಸೇವಿಸಿದ ಮೇಲೆ ಯಾವುದೇ ಜಾತಿ, ಧರ್ಮ, ಭಾಷೆಯವರೂ ಕೂಡ ಕನ್ನಡಿಗರೇ ಆಗುತ್ತಾರೆ. ಹಾಗಾಗಿ ಕನ್ನಡೇತರರಿಗೂ ಕನ್ನಡವನ್ನು ಕಲಿಸಲು ಪ್ರಯತ್ನಿಸಬೇಕು. ಮಹಾತ್ಮಾ ಗಾಂಧಿ ಕೂಡ ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದು ಉತ್ತಮ ಎಂದು ಪ್ರತಿಪಾದಿಸಿದ್ದಾರೆ.

ಆದರೆ ಕೆಲವು ಕಿಡಿಗೇಡಿಗಳು ಜಾಲತಾಣಗಳಲ್ಲಿ ಕನ್ನಡವನ್ನು ಅವಹೇಳನ ಮಾಡುವ ಪ್ರವೃತ್ತಿಯನ್ನು ಬೆಳೆಸಿಕೊಂಡಿದ್ದಾರೆ. ಎಂದಿಗೂ ಇದನ್ನು ಸಹಿಸುವುದಿಲ್ಲ, ಇದನ್ನು ಮುಂದುವರಿಸಿದಲ್ಲಿ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದರು.

50ನೇ ಸುವರ್ಣ ಸಂಭ್ರಮ ಬಿಜೆಪಿಗಿಲ್ಲ
ಕರ್ನಾಟಕ ರಾಜ್ಯ ಏಕೀಕರಣಗೊಂಡು 68 ವರ್ಷಗಳು ಕಳೆದಿವೆ. 1953ರಲ್ಲಿ ಫ‌ಜಲ್‌ ಅಲಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪುನರ್‌ ವಿಂಗಡನ ಆಯೋಗ ರಚನೆಯಾಯಿತು. ಆಯೋಗದ ವರದಿಯನ್ನು ಆಧರಿಸಿ ಭಾಷಾವಾರು ರಾಜ್ಯಗಳು ರಚನೆಯಾದವು. 1956ರ ನ. 1ರಂದು ಏಕೀಕರಣಗೊಂಡು ಮೈಸೂರು ರಾಜ್ಯ ಉದಯವಾಯಿತು. 1973ರ ನ. 1ರಂದು ಅಂದಿನ ಮುಖ್ಯಮಂತ್ರಿ ದೇವರಾಜ ಅರಸು ಅವರ ಅವಧಿಯಲ್ಲಿ ಕರ್ನಾಟಕ ಎಂದು ಮರುನಾಮಕರಣ ಮಾಡಲಾಯಿತು. ಮರುನಾಮ ಕರಣಗೊಂಡು 50 ವರ್ಷಗಳು ಸಂದಿವೆ. ಈ ಸುವರ್ಣ ಸಂಭ್ರಮವನ್ನು ಅಂದಿನ ಬಿಜೆಪಿ ಸರಕಾರ ಸಂಭ್ರಮಿಸಲಿಲ್ಲ. ಆದರೆ 2023ರ ನನ್ನ ಅವಧಿಯಲ್ಲಿ “ಕರ್ನಾಟಕ ಸಂಭ್ರಮ’ ಹೆಸರಿನಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಯಿತು ಕನ್ನಡ’ ಎಂಬ ಘೋಷವಾಕ್ಯದಡಿ ಇಡೀ ವರ್ಷ ಕನ್ನಡವನ್ನು ಸಂಭ್ರಮಿಸಲಾಯಿತು ಎಂದರು.

ಅಪೌಷ್ಟಿಕತೆ ನಿವಾರಣೆಗೆ ಸರಕಾರ ಒತ್ತು
ರಾಜ್ಯದಲ್ಲಿ ಯಾವುದೇ ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು, ಗುಣಮಟ್ಟದ ಶಿಕ್ಷ ಒದಗಿಸಬೇಕು ಎಂಬ ಉದ್ದೇಶದಿಂದ 57 ಲಕ್ಷ ಶಾಲಾ ಮಕ್ಕಳಿಗೆ ವಾರದ ಆರೂ ದಿನಗಳು ಮೊಟ್ಟೆ ಹಾಗೂ ಚಿಕ್ಕಿಯನ್ನು ನೀಡಲಾಗುತ್ತಿದೆ. ಮಕ್ಕಳಿಗೆ ಹಾಲಿನ ಜತೆಗೆ ಸಾಯಿ ಅನ್ನಪೂರ್ಣ ಅವರ ಸಹಯೋಗದೊಂದಿಗೆ ರಾಗಿ ಮಾಲ್ಟ್ ನೀಡಲಾಗುತ್ತಿದೆ ಎಂದರು.

ಸಿಎಂ ಗುಡುಗಿದ್ದೇಕೆ ?
ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಕನ್ನಡದ ಮೇಲಿನ ಅವಹೇಳನ
ಬೆಂಗಳೂರಿನಿಂದ ಉತ್ತರ ಭಾರತೀಯರು ಹೋದರೆ ಬೆಂಗಳೂರು ಖಾಲಿಯಾಗುತ್ತದೆ, ಪಿಜಿಗಳು ಖಾಲಿಯಾಗಿ ನೀವು ಹಣ ಗಳಿಸುವು ದಿಲ್ಲ ಎಂಬ ಉದ್ಧಟತನದ ಹೇಳಿಕೆ ನೀಡಿದ್ದ ಸುಗಂಧಾ ಶರ್ಮಾ
ಇಂಥ ಹೇಳಿಕೆಗಳ ವಿರುದ್ಧ ಕನ್ನಡಿಗರು, ಕನ್ನಡಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ, ಪ್ರತಿಭಟನೆ
ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕನ್ನಡ ವನ್ನು ಹೀಯಾಳಿಸುವವರ ವಿರುದ್ಧ ಕಠಿನ ಕ್ರಮದ ಎಚ್ಚರಿಕೆ ರವಾನೆ

ಟಾಪ್ ನ್ಯೂಸ್

bagheera movie review

Bagheera Review: ಕಣ್ಣಾಮುಚ್ಚಾಲೆ ಆಟದಲ್ಲಿ ಬಘೀರ!

7-belagavi

Belagavi: ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

1-reee

Karnataka Rajyotsava; ಬಾಬು ಪಿಲಾರ್‌ ಬದಲು ಬಾಬು ಕಿಲಾರ್‌ಗೆ ಪ್ರಶಸ್ತಿ!!

6-dkshi

Bengaluru: ಕನ್ನಡ ಬದುಕಿನ ಭಾಷೆಯಾಗಿಸುವುದೇ ನಮ್ಮ ಗುರಿ: ಡಿ.ಕೆ. ಶಿವಕುಮಾರ್‌

5-belagavi

Belagavi: ಎಂಇಎಸ್‌ ಕಾರ್ಯಕರ್ತರ ಪುಂಡಾಟ

4-bng

Bengaluru: ಪಟಾಕಿ ಸಿಡಿದು 54 ಮಂದಿಗೆ ಗಾಯ

3-muddebihala

Muddebihal: ಅರೆನಗ್ನಾವಸ್ಥೆಯಲ್ಲಿ ಅನಾಮಧೇಯ ಮಹಿಳೆಯ ಶವ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-cm

Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ

1-reee

Karnataka Rajyotsava; ಬಾಬು ಪಿಲಾರ್‌ ಬದಲು ಬಾಬು ಕಿಲಾರ್‌ಗೆ ಪ್ರಶಸ್ತಿ!!

6-dkshi

Bengaluru: ಕನ್ನಡ ಬದುಕಿನ ಭಾಷೆಯಾಗಿಸುವುದೇ ನಮ್ಮ ಗುರಿ: ಡಿ.ಕೆ. ಶಿವಕುಮಾರ್‌

5-belagavi

Belagavi: ಎಂಇಎಸ್‌ ಕಾರ್ಯಕರ್ತರ ಪುಂಡಾಟ

DKShi

Congress; ಮಲ್ಲಿಕಾರ್ಜುನ ಖರ್ಗೆ ಬುದ್ಧಿಮಾತು ಕೇಳುತ್ತೇವೆ: ಡಿ.ಕೆ. ಶಿವಕುಮಾರ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

bagheera movie review

Bagheera Review: ಕಣ್ಣಾಮುಚ್ಚಾಲೆ ಆಟದಲ್ಲಿ ಬಘೀರ!

8-cm

Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ

1-mlr-a

Karnataka Rajyotsava; ದಕ್ಷಿಣ ಕನ್ನಡ, ಉಡುಪಿ ಜಿಲ್ಲಾಡಳಿತದಿಂದ ಕರ್ನಾಟಕ ರಾಜ್ಯೋತ್ಸವ

1-udayavani

Udayavani ರೇಷ್ಮೆ ಜತೆ ದೀಪಾವಳಿ; ಸ್ಪರ್ಧೆಗೆ ಫೋಟೋ ಕಳುಹಿಸಲು ನ.6 ಕೊನೆಯ ದಿನ

lakshmi hebbalkar

Waqf property: ಹಿಂದೂ- ಮುಸ್ಲಿಂ ತಳುಕು ಹಾಕುವುದು ಸಲ್ಲದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.