Goa; 8 ಶಾಸಕರ ಅನರ್ಹಕ್ಕೆ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಜಾ
Team Udayavani, Nov 2, 2024, 12:55 AM IST
ಪಣಜಿ: ಬಿಜೆಪಿಗೆ ಪಕ್ಷಾಂತರಗೊಂಡಿರುವ 8 ಶಾಸಕರನ್ನು ಅನರ್ಹಗೊಳಿಸುವಂತೆ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಗೋವಾ ಸ್ಪೀಕರ್ ರಮೇಶ್ ತವಾಡ್ಕರ್ ವಜಾಗೊಳಿಸಿದ್ದಾರೆ. 2022ರ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ 8 ಮಂದಿ ಸ್ವಯಂಪ್ರೇರಿತರಾಗಿ ಪಕ್ಷದ ಸದಸ್ಯತ್ವ ತ್ಯಜಿಸಿದ್ದಾರೆ. ಹೀಗಾಗಿ ಅವರನ್ನು ಅನರ್ಹಗೊಳಿಸಬೇಕು ಎಂದು ಕಾಂಗ್ರೆಸ್ ಅರ್ಜಿ ಸಲ್ಲಿಸಿತ್ತು. ಶಾಸಕರು ತಮ್ಮ ಮೂಲ ಪಕ್ಷವನ್ನು ಮತ್ತೂಂದು ಪಕ್ಷದ ಜತೆಗೆ ವಿಲೀನಗೊಳಿಸಿರುವ ಕಾರಣ ಅನರ್ಹಗೊಳಿಸಲು ಸಾಧ್ಯವಿಲ್ಲ ಎಂದು ಸ್ಪೀಕರ್ ಹೇಳಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.