Karnataka Rajyotsava; ದಕ್ಷಿಣ ಕನ್ನಡ, ಉಡುಪಿ ಜಿಲ್ಲಾಡಳಿತದಿಂದ ಕರ್ನಾಟಕ ರಾಜ್ಯೋತ್ಸವ

ಕೇಂದ್ರದಿಂದ ರಾಜ್ಯಕ್ಕೆ ಆರ್ಥಿಕ ಅನ್ಯಾಯ: ದಿನೇಶ್‌

Team Udayavani, Nov 2, 2024, 10:29 AM IST

1-mlr-a

ಮಂಗಳೂರು: ಅತ್ಯಧಿಕ ಜಿಎಸ್‌ಟಿ ಸಂಗ್ರಹಿಸುವ ರಾಜ್ಯವಾಗಿದ್ದರೂ ಕರ್ನಾಟಕಕ್ಕೆ ತೆರಿಗೆಯಲ್ಲಿ ಸಿಗಬೇಕಾದ ನಿಯಮಬದ್ಧ ಪಾಲು ಕೇಂದ್ರದಿಂದ ಸಿಗುತ್ತಿಲ್ಲ. ಆದ್ದರಿಂದ ಕರ್ನಾಟಕವು ಆರ್ಥಿಕ ಅನ್ಯಾಯಕ್ಕೆ ಗುರಿಯಾಗಿದೆ. ರಾಜ್ಯ ಸರಕಾರ ಇದನ್ನು ಪ್ರಶ್ನಿಸಿದ್ದು, ರಾಜ್ಯದ ಹಿತಾಸಕ್ತಿ ರಕ್ಷಣಗೆ ಬದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ನೆಹರೂ ಮೈದಾನದಲ್ಲಿ ಶುಕ್ರವಾರ ಜರಗಿದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋ ತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.

ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ಅಗ್ರಪಂಕ್ತಿಯಲ್ಲಿದ್ದರೂ ಹಣಕಾಸು ಆಯೋಗದಿಂದ ಸಿಗಬೇಕಾದ ಹಣದಲ್ಲಿ ಕಡಿತವಾಗಿದೆ. ಜಿಎಸ್‌ಟಿಯಿಂದಾಗಿ ನಮ್ಮ ರಾಜ್ಯದ ತೆರಿಗೆಯನ್ನು ರಾಜ್ಯದ ಅನುಕೂಲಕ್ಕೆ ತಕ್ಕಂತೆ ಬಳಸುವ ಅಧಿಕಾರ ಇಲ್ಲವಾಗಿದೆ. ಇದಕ್ಕೆ ಪರಿಹಾರ ರೂಪದಲ್ಲಿ ಸಿಗಬೇಕಾದ ಹಣವೂ ಸಿಕ್ಕಿಲ್ಲ ಎಂದರು.

ಸ್ವಾತಂತ್ರ್ಯಾನಂತರ ಕರ್ನಾಟಕವು ಜನ ಸಂಖ್ಯಾ ನಿಯಂತ್ರಣಕ್ಕೆ ಅವಿರತವಾಗಿ ಶ್ರಮಿಸಿಯಶಸ್ಸು ಕಂಡಿದೆ. ಆದರೆ ಶಿಕ್ಷಣದಲ್ಲಿ ಹಿಂದು ಳಿದ ಮತ್ತು ಜನಸಂಖ್ಯಾ ನಿಯಂತ್ರಣವನ್ನು ಸಮರ್ಪಕವಾಗಿ ಅಳವಡಿಸದ ಉತ್ತರ ರಾಜ್ಯ ಗಳಿಗೆ ಹೆಚ್ಚು ಸಂಸದರನ್ನು ನೀಡಿ ಕಡಿಮೆ ಜನಸಂಖ್ಯೆ ಇರುವ ದಕ್ಷಿಣ ರಾಜ್ಯಗಳಿಗೆ ಕಡಿಮೆ ಸಂಸದರ ಸಂಖ್ಯೆ ಕಡಿಮೆ ಮಾಡಿ ಕೇಂದ್ರ ಮಟ್ಟದಲ್ಲಿ ದಕ್ಷಿಣ ಭಾರತ ಹಾಗೂ ಕರ್ನಾಟಕದ ಜನರ ಪ್ರಾತಿನಿಧ್ಯವೇ ಇಲ್ಲದಂತಾಗಿದೆ ಎಂದರು.

ಗ್ಯಾರಂಟಿ ಅನುಷ್ಠಾನಕ್ಕೆ ಬದ್ಧ
ಗ್ಯಾರಂಟಿ ಯೋಜನೆಯು ಕೆಲವು ತಾಂತ್ರಿಕ ಸಮಸ್ಯೆಯಿಂದ ಅರ್ಹರಿಗೆ ಅದರ ಪ್ರಯೋ ಜನ ತಲುಪಲು ವಿಳಂಬವಾಗುತ್ತಿದೆ. ಇದರ ಸಮರ್ಪಕ ಅನುಷ್ಠಾನಕ್ಕೆ ಸರಕಾರ ಬದ್ಧ ಎಂದು ಹೇಳಿದರು. ಸಂಸದ ಕ್ಯಾ| ಬ್ರಿಜೇಶ್‌ ಚೌಟ, ಶಾಸಕ ಡಿ.ವೇದವ್ಯಾಸ ಕಾಮತ್‌, ವಿ.ಪರಿಷತ್‌ ಸದಸ್ಯರಾದ ಐವನ್‌ ಡಿ’ ಸೋಜಾ, ಮಂಜುನಾಥ ಭಂಡಾರಿ, ಮೇಯರ್‌ ಮನೋಜ್‌ ಕುಮಾರ್‌, ನಿಗಮ ಮಂಡಳಿ ಅಧ್ಯಕ್ಷರಾದ ಸದಾಶಿವ ಉಳ್ಳಾಲ, ಮಮತಾ ಗಟ್ಟಿ, ಜಿಲ್ಲಾಧಿಕಾರಿ ಮುಲ್ಲೆ$ç ಮುಗಿಲನ್‌, ಅಪರ ಜಿಲ್ಲಾಧಿಕಾರಿ ಡಾ| ಸಂತೋಷ್‌ ಕುಮಾರ್‌, ಸಿಇಒ ಡಾ| ಆನಂದ್‌ ಕೆ., ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಮತ್ತಿತರರು ಉಪಸ್ಥಿತರಿದ್ದರು.

ಸಾಧಕರಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ
ಜಿಲ್ಲೆಯ ವಿವಿಧ ಕ್ಷೇತ್ರಗಳ 60 ಮಂದಿ ಸಾಧಕರು ಮತ್ತು 22 ಸಂಘ ಸಂಸ್ಥೆಗಳಿಗೆ 2024ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನಿಸಲಾಯಿತು.

ಪ್ರಶಸ್ತಿ ಪುರಸ್ಕೃತ ಆಯ್ಕೆ ಪಟ್ಟಿಯಲ್ಲಿದ್ದ 2 ಸಂಘ ಸಂಸ್ಥೆಗಳಿಗೆ ಕೊನೆಯ ಹಂತದಲ್ಲಿ ಪ್ರಶಸ್ತಿ ತಡೆ ಹಿಡಿದದ್ದು ಗೊಂದಲ ಸೃಷ್ಟಿಸಿತು. ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ಮುಂಭಾಗದಲ್ಲಿ ಆ ಸಂಘ ಸಂಸ್ಥೆಗಳ ಪ್ರತಿನಿಧಿಗಳು “ನಮ್ಮನ್ನು ಆಹ್ವಾನಿಸಿ ಅವಮಾನ ಮಾಡಿರುವುದು ಬೇಸರ ತರಿಸಿದೆ’ ಎಂದು ನೋವು ತೋಡಿಕೊಂಡರು. ಸಚಿವರು ಮಾತನಾಡಿ, ಈ ಬಗ್ಗೆ ಪರಿಶೀಲಿಸಿ ಸೂಕ್ತ ನ್ಯಾಯ ದೊರಕಿಸಿಕೊಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು. ಈ ಮಧ್ಯೆ, ಜಿಲ್ಲಾ ಪ್ರಶಸ್ತಿಗೆ ವೈಯಕ್ತಿಕ ಸಾಧಕರಾಗಿ 56 ಮಂದಿಯನ್ನು ಹಾಗೂ 24 ಸಂಸ್ಥೆಯನ್ನು ಆಯ್ಕೆ ಮಾಡಿ ಜಿಲ್ಲಾಡಳಿತ ಗುರುವಾರ ರಾತ್ರಿ ಪ್ರಕಟಿಸಿತ್ತು. ಆದರೆ ಬೆಳಗ್ಗೆಯ ಹೊತ್ತಿಗೆ ಮತ್ತೆ ನಾಲ್ವರ ಹೆಸರು ಸೇರ್ಪಡೆಯಾಗಿತ್ತು.

ಭೂಕುಸಿತ ಪ್ರದೇಶದ ಸರ್ವೇ ಪೂರ್ಣ: ಹೆಬ್ಬಾಳ್ಕರ್‌


ಉಡುಪಿ: ಜಿಲ್ಲೆಯ ಭೂಕುಸಿತ ಪ್ರದೇಶಗಳ ಬಗ್ಗೆ ಪರಿಶೀಲನೆ ನಡೆಸಿ, ಭೂಕುಸಿತ ತಡೆಗಟ್ಟುವ ಬಗ್ಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವ ಕುರಿತು ಬೆಂಗಳೂರಿನ ಜಿಯೋಲಾಜಿಕಲ್‌ ಸರ್ವೆ ಆಫ್‌ ಇಂಡಿಯಾ ಕಚೇರಿಯ ತಾಂತ್ರಿಕ ಸಿಬಂದಿ ಸಮೀಕ್ಷೆ ನಡೆಸಿ, ವರದಿಯೊಂದಿಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಇದನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿದ ಕರ್ನಾಟಕ ರಾಜ್ಯೋತ್ಸವದಲ್ಲಿ ಮಾತ ನಾಡಿದ ಅವರು, ಪಶ್ಚಿಮ ವಾಹಿನಿ ಯೋ ಜನೆಯಡಿ 1.88 ಕೋ.ರೂ.ಗಳಲ್ಲಿ ಕಿಂಡಿ ಅಣೆಕಟ್ಟು ಕಾಮಗಾರಿ ಕೈಗೊಳ್ಳ ಲಾಗುತ್ತಿದೆ. ಇದರಿಂದ 33 ಹೆಕ್ಟೇರ್‌ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯ ಒದ ಗಲಿದೆ. ಪ್ರವಾಹ ಪೀಡಿತ ಪ್ರದೇಶಗಳ ಸಂರಕ್ಷಣೆಗೆ 6.15 ಕೋ.ರೂ.ಗಳಲ್ಲಿ 151 ಕಿ.ಮೀ. ಉದ್ದದ ನದಿ ದಂಡೆ ಸಂರಕ್ಷಣೆ ಕಾಮಗಾರಿ ಕೈಗೊಳ್ಳಲಾಗುವುದು ಎಂದರು.

ಎಲ್ಲೆಡೆ ಕನ್ನಡ ಅನುಷ್ಠಾನಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಅಧಿನಿಯಮ ತಿದ್ದುಪಡಿ ಮಾಡಿ ನಾಮಫ‌ಲಕಗಳನ್ನು ಶೇ.60ರಷ್ಟು ಕನ್ನಡ ಕಡ್ಡಾಯ ಮಾಡಿದ್ದೇವೆ. ಕನ್ನಡದ ಸರ್ವತೋಮುಖ ಪ್ರಗತಿಗೆ ಸರಕಾರ ಬದ್ಧ. ಇದಕ್ಕೆ ಜನರ ಸಹಕಾರವೂ ಅಗತ್ಯ ಎಂದು ಅಭಿಪ್ರಾಯಪಟ್ಟರು.

ಕನ್ನಡ ನಾಡಿನಲ್ಲಿ ಕನ್ನಡದ ಮನಸ್ಸುಗಳು ನಿರ್ಮಾಣವಾಗಬೇಕು. ಕನ್ನಡ ಪುಸ್ತಕಗಳನ್ನು ಹೆಚ್ಚು ಹೆಚ್ಚಾಗಿ ಓದುವ, ಕನ್ನಡ ಸಂಸ್ಕೃತಿಯನ್ನು ಅಭಿಮಾನಿಸಿ, ಪ್ರೀತಿಸುವ ಮನೋಭಾವ ನಮ್ಮಲ್ಲಿ ಬರಬೇಕು. ವಿಶಿಷ್ಟ ವೈವಿಧ್ಯಮಯ ಸಂಸ್ಕೃತಿಯನ್ನು ಹೊಂದಿದ ನಮ್ಮ ಜಿಲ್ಲೆಯು ಸೌಹಾರ್ದ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಅದಕ್ಕೆ ರಾಜ್ಯೋತ್ಸವ ನಾಂದಿಯಾಗಲಿ ಎಂದರು.

ಶಾಸಕ ಯಶ್‌ಪಾಲ್‌ ಎ. ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಜಿಪಂ ಸಿಇಒ ಪ್ರತೀಕ್‌ ಬಾಯಲ್‌, ಎಸ್‌ಪಿ ಡಾ| ಕೆ.ಅರುಣ್‌, ಎಎಸ್‌ಪಿ ಸಿದ್ದಲಿಂಗಪ್ಪ, ಎಡಿಸಿ ಮಮತಾದೇವಿ ಜಿ.ಎಸ್‌. ಉಪಸ್ಥಿತರಿದ್ದರು.

ಬೋರ್ಡ್‌ ಹೈಸ್ಕೂಲ್‌ನಿಂದ ತಾಯಿ ಭುವನೇಶ್ವರಿ ರಥ ಸಹಿತ ಟ್ಯಾಬ್ಲೋ ಮೆರವಣಿಗೆ, ಹಲ್ಮಡಿ ಶಾಸನದ ಪ್ರತಿಕೃತಿ ಉದ್ಘಾಟನೆ, ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಗ್ಯಾರಂಟಿಯಿಂದ ಆರ್ಥಿಕ ಪ್ರಗತಿ
ಇತ್ತೀಚೆಗೆ ಕೇಂದ್ರ ಸರಕಾರದ ಸಾಂಖ್ಯೀಕ ಮತ್ತು ಯೋಜನಾ ಅನುಷ್ಠಾನ ಇಲಾಖೆ ಬಿಡುಗಡೆ ಮಾಡಿರುವ ಆರ್ಥಿಕ ಪ್ರಗತಿ ವರದಿಯಲ್ಲಿ ಕರ್ನಾಟಕದ ಜಿಡಿಪಿ ದರ ಶೇ.10.2ರಷ್ಟು ದಾಖಲಾಗಿದೆ. ಇದು ದೇಶದ ಒಟ್ಟಾರೆ ಜಿಡಿಪಿ ದರಕ್ಕಿಂತ ಹೆಚ್ಚಿದೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿ ಆಗಲಿದೆ ಎಂದು ನಿರೀಕ್ಷಿಸಿದವರಿಗೆ ಭ್ರಮನಿರಸನವಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.